ಯೋಧರ ಪಡೆಯಿಂದ 78 ಜನರ ರಕ್ಷಣೆ
ನೀರಿನಿಂದ ಆವೃತ್ತವಾದ ಆಲೆಖಾನ್ ಹೊರಟ್ಟಿಯಲ್ಲಿ ರಕ್ಷಣಾ ಕಾರ್ಯ
Team Udayavani, Aug 12, 2019, 11:29 AM IST
ಚಿಕ್ಕಮಗಳೂರು: ಆಲೇಖಾನ್ ಹೊರಟ್ಟಿಯಲ್ಲಿ ಸಿಲುಕಿದ್ದ ಜನರನ್ನು ಯೋಧರ ತಂಡವು ರಕ್ಷಿಸಿ ಕರೆತಂದಿತು.
ಚಿಕ್ಕಮಗಳೂರು: ಗುಡ್ಡ ಕುಸಿತ, ನದಿ ಪ್ರವಾಹದಿಂದಾಗಿ ಆಲೇಖಾನ್ ಹೊರಟ್ಟಿ ಗ್ರಾಮದಲ್ಲಿ ಸಿಲುಕಿಕೊಂಡಿದ್ದ 78 ಗ್ರಾಮಸ್ಥರನ್ನು ಯೋಧರ ಪಡೆ ಸುರಕ್ಷಿತವಾಗಿ ಕರೆತರುವಲ್ಲಿ ಯಶಸ್ವಿಯಾಗಿದೆ.
ಕಳೆದ 3 ದಿನಗಳ ಹಿಂದೆ ದಿಢೀರನೆ ಭಾರೀ ಮಳೆ ಸುರಿದು ಗುಡ್ಡ ಕುಸಿತವಾಗಿದ್ದಲ್ಲದೆ, ನದಿಯ ನೀರು ಪ್ರವಾಹದಂತೆ ಉಕ್ಕಿ ಹರಿದಿದ್ದರಿಂದಾಗಿ ಗ್ರಾಮಸ್ಥರು ಹೊರಬರಲಾರದೆ ನಡುಗಡ್ಡೆಯಲ್ಲಿ ಸಿಲುಕಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಗ್ರಾಮಸ್ಥರನ್ನು ರಕ್ಷಿಸಲು ಪ್ರಯತ್ನಿಸಿದರೂ ಅದು ಸಾಧ್ಯವಾಗಿರಲಿಲ್ಲ.
ಭಾನುವಾರ ಬೆಳಗ್ಗೆ 8 ಗಂಟೆಗೆ ಕಾರ್ಯಚರಣೆಗೆ ಆರಂಭಿಸಿದ ಯೋಧರ ತಂಡ ಸತತ 5 ರಿಂದ 6 ಗಂಟೆಗಳ ಕಾರ್ಯಾಚರಣೆ ನಡೆಸಿ ಅಪಾಯದಲ್ಲಿ ಸಿಲುಕಿದ್ದವರನ್ನು ಸುರಕ್ಷಿತವಾಗಿ ಕರೆತಂದಿದ್ದಾರೆ.
ಕಳೆದೊಂದು ವಾರದಿಂದ ಸುರಿದ ಬಾರಿ ಮಳೆಗೆ ಹೇಮಾವತಿ ನದಿಯಲ್ಲಿ ಪ್ರವಾಹ ಅಪಾಯದಟ್ಟ ಮೀರಿ ಹರಿದು ಪ್ರವಾಹ ಉಂಟು ಮಾಡಿತ್ತು. ಅದರಲ್ಲೂ ಕಳೆದ ಮೂರು ದಿನಗಳ ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ಆಲೇಖಾನ್ ಮತ್ತು ಹೊರಟ್ಟಿ ಸಂಪರ್ಕ ಕಲ್ಪಿಸುವ ರಸ್ತೆ ಮೇಲೆ ದೊಡ್ಡ ಪ್ರಮಾಣದಲ್ಲಿ ಗುಡ್ಡದ ಮಣ್ಣು ಹಾಗೂ ಮರಗಳು ಬಿದ್ದ ಪರಿಣಾಮ ಸಂಪರ್ಕ ಕಡಿತಗೊಂಡು ತಮ್ಮನ್ನು ರಕ್ಷಿಸುವಂತೆ ಜಿಲ್ಲಾಡಳಿತವನ್ನು ಪರಿ ಪರಿಯಾಗಿ ಬೇಡಿಕೊಂಡಿದ್ದರು.
ಶುಕ್ರವಾರ ಮತ್ತು ಶನಿವಾರ ಜಿಲ್ಲಾಡಳಿತ, ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಎಷ್ಟೇ ಪ್ರಯತ್ನಪಟ್ಟರು ರಸ್ತೆಯ ಮೇಲೆ ಹಲವು ಕಡೆ ಅಪಾರ ಪ್ರಮಾಣದ ಗುಡ್ಡದ ಮಣ್ಣು ಹಾಗೂ ಮರ ಬಿದ್ದಿದ್ದರಿಂದ ಆಲೇಖಾನ್, ಹೊರಟ್ಟಿ ಗ್ರಾಮವನ್ನು ಸಂಪರ್ಕಿಸಲು ಸಾಧ್ಯವಾಗಿರಲಿಲ್ಲ. ತಮ್ಮ ಪ್ರಯತ್ನವನ್ನು ಕೈ ಚಲ್ಲಿದ ಜಿಲ್ಲಾಡಳಿತ ಇರವ ರಕ್ಷಣೆಗೆ ಹೆಲಿಕಾಪ್ಟರ್ ಹಾಗೂ ಯೋಧರನ್ನು ಕಳಿಸುವಂತೆ ರಾಜ್ಯ ಸರ್ಕಾರದ ಮೊರೆ ಹೋಗಿದ್ದರು.
ಜಿಲ್ಲಾಡಳಿತದ ಕೋರಿಕೆಗೆ ಸ್ಪಂದಿಸಿದ ರಾಜ್ಯ ಸರ್ಕಾರ ಶನಿವಾರ ಸಂಜೆ ಯೋಧರ ತಂಡವನ್ನು ಮೂಡಿಗೆರೆಗೆ ಕಳಿಸಿತ್ತು. ಭಾನುವಾರ 8 ಗಂಟೆಗೆ ಕಾರ್ಯಾಚರಣೆ ಆರಂಭಿಸಿದ ಯೋಧರ ತಂಡ ಸತತ 5 ರಿಂದ6 ಗಂಟೆ ಕಾರ್ಯಾಚರಣೆ ನಡೆಸಿ ಯೋಧರ ತಂಡ ಆಲೇಖಾನ್ ಹೊರಟ್ಟಿ ಗ್ರಾಮದಲ್ಲಿ ಸಿಲುಕಿದ್ದ ಸುಮಾರು 78 ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.
ಭಾನುವಾರ ಬೆಳಗ್ಗೆ 8 ಗಂಟೆಯಿಂದ ಗುಡ್ಡಗಾಡು ಪ್ರದೇಶದಲ್ಲಿ 4 ರಿಂದ 5 ಕಿಮೀ ರಸ್ತೆ ಮಾಡಿಕೊಂಡು ಆಲೇಖಾನ್ ಹೊರಟ್ಟಿ ಗ್ರಾಮವನ್ನು ಪ್ರವೇಶಿಸಿದ ಯೋಧರ ತಂಡ ರ್ಯಾಕ್ ಮತ್ತು ಹಗ್ಗದ ಸಹಾಯದಿಂದ ಜನರನ್ನು ಸುರಕ್ಷಿತವಾಗಿ ಹ್ರೆರತಂದರು. ವಾಪಸ್ ಬರುವ ಸಂದರ್ಭದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದವರು, ವೃದ್ಧರನ್ನು ಯೋಧರು ನಾಲ್ಕೈದು ಕಿಮೀ ಹೆಗಲ ಮೇಲೆ ಹೊತ್ತು ತಂದಿದ್ದಾರೆ. ಯೋಧರಿಂದ ರಕ್ಷಿಸಲ್ಪಟ್ಟ ಜನರನ್ನು ಕೊಟ್ಟಿಗೆಹಾರದಲ್ಲಿ ತೆರೆಯಲಾಗಿರುವ ನಿರಾಶ್ರಿತರ ಕೇಂದ್ರದಲ್ಲಿ ಬಿಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.