ಉತ್ತಮ ಪರಿಸರಕ್ಕಾಗಿ ಹಾವುಗಳ ರಕ್ಷಣೆ ಅಗತ್ಯ
ಹಾವುಗಳು ರೈತರ ಮಿತ್ರ: ಸ್ನೇಕ್ ನರೇಶ್
Team Udayavani, May 5, 2019, 3:17 PM IST
ಚಿಕ್ಕಮಗಳೂರು: ಬೇಸಿಗೆ ಶಿಬಿರದಲ್ಲಿ ಸ್ನೇಕ್ ನರೇಶ್ ಹಾವುಗಳ ಕುರಿತು ಮಕ್ಕಳಿಗೆ ಮಾಹಿತಿ ನೀಡಿದರು
ಚಿಕ್ಕಮಗಳೂರು: ಶುದ್ಧ ಅಮ್ಲಜನಕ ಮತ್ತು ಉತ್ತಮ ಪರಿಸರಕ್ಕಾಗಿ ಹಾವುಗಳನ್ನು ಸಂರಕ್ಷಿಸಬೇಕು ಎಂದು ಸ್ನೇಕ್ ನರೇಶ್ ಸಲಹೆ ನೀಡಿದರು.
ಭಾರತ ಸೇವಾದಳದ ಜ್ಞಾನ ಜ್ಯೋತಿ ಘಟಕ ನಗರದ ಆಜಾದ್ ಪಾಕ್ ರ್ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ನಡೆಸುತ್ತಿರುವ ಉಚಿತ ಮಕ್ಕಳ ಬೇಸಿಗೆ ಶಿಬಿರದಲ್ಲಿ ಅವರು ಹಾವುಗಳ ಸಂರಕ್ಷಣೆ ಕುರಿತು ಮಕ್ಕಳಿಗೆ ಉಪಯುಕ್ತ ಮಾಹಿತಿ ನೀಡಿದರು.
ಹಾವುಗಳು ರೈತರ ಮಿತ್ರ. ಅವುಗಳಿಂದ ಭೂಮಿಯಲ್ಲಿರುವ ಇಲಿಗಳು ಮತ್ತು ವಿಷದ ಹುಳುಗಳ ಸಂತಾನ ಕಡಿಮೆಯಾಗುತ್ತದೆ. ವಾತಾವರಣದಲ್ಲಿರುವ ವಿಷವನ್ನು ಉಸಿರಿನ ಮೂಲಕ ಒಳಗೆಳೆದುಕೊಳ್ಳುವ ಹಾವುಗಳು ಶುದ್ಧ ಅಮ್ಲಜನಕವನ್ನು ವಾತಾವರಣಕ್ಕೆ ಬಿಡುತ್ತವೆ. ಇದರಿಂದಾಗಿ ಕಲುಷಿತ ವಾತಾವರಣ ಶುದ್ಧವಾಗುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ವಿವಿಧ ಜಾತಿಯ ಹಾವುಗಳನ್ನು ಮಕ್ಕಳಿಗೆ ಪ್ರದರ್ಶಿಸುವ ಮೂಲಕ ಅವುಗಳ ಬಗ್ಗೆ ಮಾಹಿತಿ ನೀಡಿದ ಅವರು, ಹಾವುಗಳು ಯಾವುದೇ ಕಾರಣಕ್ಕೂ ಯಾರಿಗೂ ಸುಮ್ಮನೆ ಕಚ್ಚುವುದಿಲ್ಲ. ಗಾಬರಿ ಅಥವಾ ಆತ್ಮರಕ್ಷಣೆಗಾಗಿ ಅವು ಕಚ್ಚುತ್ತವೆ ಎಂದು ತಿಳಿಸಿದರು.
ಭಾರತ ಸೇವಾದಳದ ತಾಲೂಕು ಸಂಘಟಕ, ಶಿಬಿರದ ಸಂಯೋಜಕ ಎಸ್.ಈ. ಲೋಕೇಶ್ವರಾಚಾರ್ ಮಾತನಾಡಿ, ಈ ಭೂಮಿಯ ಮೇಲೆ ಬದುಕಲು ಮನುಷ್ಯರಿಗಿರುವಷ್ಟೇ ಹಕ್ಕು ಪ್ರಾಣಿ ಪಕ್ಷಿಗಳಿಗೂ ಇದೆ. ಉತ್ತಮ ಪರಿಸರಕ್ಕಾಗಿ ಕಾಡು ಮತ್ತು ವನ್ಯಜೀವಿಗಳನ್ನು ಸಂರಕ್ಷಿಸುವ ಅಗತ್ಯವಿದೆ. ಈಗಲಾದರು ಎಚ್ಚೆತ್ತು ಅರಣ್ಯ ಮತ್ತು ಪ್ರಾಣಿ ಸಂಕುಲ ರಕ್ಷಿಸದಿದ್ದರೆ ನಮ್ಮ ಮುಂದಿನ ಪೀಳಿಗೆ ಅವುಗಳನ್ನು ಚಿತ್ರದಲ್ಲಿ ಮಾತ್ರ ನೋಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಇದೇ ಸಂದರ್ಭದಲ್ಲಿ ಹಾವುಗಳನ್ನು ಮಕ್ಕಳಿಗೆ ನೀಡಿ, ಅವುಗಳನ್ನು ಸ್ಪರ್ಶಿಸುವ ಮೂಲಕ ಹಾವಿನ ಬಗ್ಗೆ ಧೈರ್ಯ ಮೂಡಿಸುವ ಕೆಲಸವನ್ನು ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.