ಪ್ರಾಥಮಿಕ ಹಂತದಲ್ಲೇ ಸಂವಿಧಾನ- ಕಾನೂನು ಅರಿವು ಅಗತ್ಯ
ನ್ಯಾಯದಾನ ವಿಳಂಬಕ್ಕೆ ಬ್ರಿಟಿಷರ ಕಾಲದ ಪದ್ಧತಿಯೇ ಕಾರಣ: ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್
Team Udayavani, Jun 30, 2019, 3:40 PM IST
ಚಿಕ್ಕಮಗಳೂರು: ಪ್ರಾಥಮಿಕ ಶಿಕ್ಷಣದಿಂದಲೇ ಸಂವಿಧಾನ ಮತ್ತು ಕಾನೂನಿನ ಬಗ್ಗೆ ತಿಳಿವಳಿಕೆ ನೀಡುವಂತಾಗಬೇಕು ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅಭಿಪ್ರಾಯಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಶೇ.20ರಷ್ಟು ಅಕ್ಷರಸ್ಥರಿದ್ದರು. ಈಗ ದೇಶದಲ್ಲಿ ಶೇ.80ರಷ್ಟು ಅಕ್ಷರಸ್ಥರು ಇದ್ದಾರೆ. ಆದರೆ, ಅವರಲ್ಲಿ ಬಹುತೇಕರಿಗೆ ಕಾನೂನು ಹಾಗೂ ಸಂವಿಧಾನದ ಅರಿವಿಲ್ಲ ಎಂದರು.
ಪ್ರಸ್ತುತ ಕಾಲೇಜು ಶಿಕ್ಷಣದ ಪಠ್ಯಪುಸ್ತಕದಲ್ಲಿ ಸಂವಿಧಾನದ ಕುರಿತು ವಿಷಯವಿದೆ. ವಿದ್ಯಾರ್ಥಿಗಳು 100 ಅಂಕಗಳಿಗೆ ಪರೀಕ್ಷೆಯನ್ನೂ ಬರೆಯುತ್ತಾರೆ. ಆದರೆ, ಸಂವಿಧಾನದ ಬಗ್ಗೆ ಬೇರೆ ವಿಷಯದ ನುರಿತ ಶಿಕ್ಷಕರು ಪಾಠ ಮಾಡುತ್ತಿದ್ದಾರೆ. ಹಾಗಾಗಿ, ವಿದ್ಯಾರ್ಥಿಗಳೂ ಅದರತ್ತ ಹೆಚ್ಚು ಗಮನ ಹರಿಸದೆ ಕೇವಲ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಅಗತ್ಯವಿರುವಷ್ಟು ಮಾತ್ರ ಅಭ್ಯಾಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಪ್ರಾಥಮಿಕ ಶಿಕ್ಷಣದಿಂದಲೇ ಈ ಕುರಿತು ತಿಳಿಸುವ ಕೆಲಸವಾಗಬೇಕು. ಸಂವಿಧಾನ ಹಾಗೂ ಕಾನೂನಿನ ಬಗ್ಗೆ ನುರಿತ ಅಧ್ಯಾಪಕರೇ ಪಾಠ ಮಾಡುವಂತಾಗಬೇಕು. ಆಗ ಮಾತ್ರ ಪ್ರತಿಯೊಬ್ಬರೂ ಈ ವಿಷಯದ ಕುರಿತು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ನ್ಯಾಯಾಲಯಗಳಲ್ಲಿ ಪ್ರಕರಣಗಳ ಇತ್ಯರ್ಥವಾಗುವುದು ವಿಳಂಬವಾಗುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಇದಕ್ಕೆ ಹಲವು ಕಾರಣಗಳಿವೆ. ಯೂರೋಪ್ ಮತ್ತು ಇನ್ನಿತರೆ ದೇಶಗಳಲ್ಲಿ 10 ಲಕ್ಷ ಜನಸಂಖ್ಯೆಗೆ 130-150 ಜನ ನ್ಯಾಯಾಧೀಶರಿದ್ದಾರೆ. ಆದರೆ, ನಮ್ಮ ದೇಶದಲ್ಲಿ 10 ಲಕ್ಷ ಜನಸಂಖ್ಯೆಗೆ 19-20 ಜನ ನ್ಯಾಯಾಧೀಶರಿದ್ದಾರೆ. ಅದರೊಂದಿಗೆ ನ್ಯಾಯಾಂಗದಲ್ಲಿ ಇಂದಿಗೂ ಹಲವು ಹುದ್ದೆಗಳು ಖಾಲಿ ಉಳಿದಿವೆ. ಅಧಿಕಾರಿ, ಸಿಬ್ಬಂದಿ ನಿವೃತ್ತರಾದ ಕೂಡಲೆ ಆ ಸ್ಥಾನಕ್ಕೆ ಬೇರೆಯವರನ್ನು ನೇಮಿಸುವ ಕೆಲಸವಾಗಬೇಕಿತ್ತು. ಆದರೆ ಅದು ಆಗಿಲ್ಲ. ಅದರೊಂದಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸದಿರುವುದೂ ಪ್ರಕರಣ ಇತ್ಯರ್ಥ ವಿಳಂಬವಾಗಲು ಕಾರಣವಾಗಿದೆ ಎಂದರು.
ನಮ್ಮ ದೇಶದಲ್ಲಿ ಇಂದಿಗೂ ನ್ಯಾಯಾಂಗದಲ್ಲಿ ಬ್ರಿಟಿಷರ ಕಾಲದ ವ್ಯವಸ್ಥೆಯೇ ಜಾರಿಯಲ್ಲಿದೆ. ಅದರಲ್ಲಿ ಕೆಲವೊಂದು ಬದಲಾವಣೆಗಳನ್ನು ತರಲಾಗಿದೆಯಾದರೂ ಪೂರ್ಣ ಪ್ರಮಾಣದ ಬದಲಾವಣೆ ಆಗಿಲ್ಲ. ಒಂದು ರೀತಿಯಲ್ಲಿ ಇದೂ ಸಹ ವಿಳಂಬಕ್ಕೆ ಕಾರಣವಾಗಿದೆ ಎಂದು ಅಭಿಪ್ರಾಯಿಸಿದರು.
ಜನತೆಗೆ ಸಂವಿಧಾನದ ಕುರಿತು ತಿಳಿವಳಿಕೆ ನೀಡುವ ಉದ್ದೇಶದಿಂದಲೇ ರಾಜ್ಯಾದ್ಯಂತ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಇದು ಸರ್ಕಾರಿ ಅಥವಾ ಖಾಸಗಿಯವರ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಕಾರ್ಯಕ್ರಮವಲ್ಲ. ರಾಜ್ಯದೆಲ್ಲೆಡೆ ಈ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ವಿದ್ಯಾರ್ಥಿಗಳು, ಮಹಿಳೆಯರು, ಸರ್ಕಾರಿ ಅಧಿಕಾರಿಗಳು, ವಕೀಲರು ಎಲ್ಲರೂ ಸ್ವಯಂಪ್ರೇರಿತರಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಸಂವಿಧಾನದ ಬಗ್ಗೆ ತಿಳಿಸುವುದಲ್ಲದೆ, ಎಲ್ಲರೊಂದಿಗೂ ಸಂವಾದವನ್ನೂ ನಡೆಸಲಾಗುತ್ತಿದೆ. ಸಂವಾದದಲ್ಲಿ ಹಲವರು ಉತ್ತಮ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಂಡಿದ್ದಾರೆ ಎಂದರು.
ಈಗ ಸಂವಿಧಾನದ ಕುರಿತು ತಿಳಿವಳಿಕೆ ನೀಡಲು ಪುಸ್ತಕ ಹೊರತರಲಾಗಿದೆ. ಇದೀಗ ಸಂವಾದದಲ್ಲಿ ಕೇಳಿ ಬಂದ ಪ್ರಶ್ನೆಗಳು ಹಾಗೂ ಅದಕ್ಕೆ ನೀಡಿರುವ ಉತ್ತರಗಳನ್ನು ಒಳಗೊಂಡ ಪುಸ್ತಕವನ್ನು ಬರೆಯುತ್ತಿದ್ದೇನೆ. ಶೀಘ್ರದಲ್ಲಿಯೇ ಆ ಪುಸ್ತಕವನ್ನೂ ಹೊರತರಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.