ಕೆಲವೇ ದಿನಗಳಲ್ಲಿ ಮೈತ್ರಿ ಸರ್ಕಾರ ಪತನ
ದೇಶ ಮತ್ತು ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಗೆ ನಿರೀಕ್ಷೆಗೂ ಮೀರಿ ಗೆಲುವು: ಶೋಭಾ
Team Udayavani, May 26, 2019, 1:43 PM IST
ಮೂಡಿಗೆರೆ: ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಅಭಿನಂದನೆ ಕಾರ್ಯಕ್ರಮದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಸನ್ಮಾನಿಸಲಾಯಿತು
ಮೂಡಿಗೆರೆ: ಲೋಕಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನ ಮೂಲಕ ನಮ್ಮ ನಿರೀಕ್ಷೆಗೂ ಮೀರಿ ಗೆಲುವು ಸಾಧಿಸಿದ್ದು, ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ನಮ್ಮ ಸರಕಾರ ಆಡಳಿತಕ್ಕೆ ಬರಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು.
ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಂಜೆ ಬಿಜೆಪಿ ತಾಲೂಕು ಘಟಕ ಮತ್ತು ಕಾರ್ಯಕರ್ತರು ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಲತಾ ಸೇರಿದಂತೆ 26 ಸ್ಥಾನ ಗೆಲುವು ಸಾಧಿಸಿದ್ದೇವೆ. ಮೂರೂವರೆ ಲಕ್ಷ ಅಂತರದಲ್ಲಿ ಗೆಲುವಿನ ನಿರೀಕ್ಷೆ ನನಗೆ ಇರಲಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಕಾರ್ಯಗಳಿಂದಾಗಿ ಅವರ ನಾಮಬಲದಲ್ಲಿಯೇ ಸುನಾಮಿ ರೀತಿಯಲ್ಲಿ ಚುನಾವಣೆಗೆ ಸಹಕಾರಿಯಾಗಿದ್ದು, ಮತದಾರರು ಮತ್ತು ಕಾರ್ಯಕರ್ತರು ಮತ್ತೂಮ್ಮೆ ಮೋದಿಯವರೇ ಪ್ರಧಾನಿಯಾಗಬೇಕೆಂಬ ಆಶಯದಲ್ಲಿ ನನ್ನನ್ನು ಗೆಲ್ಲಿಸಿದ್ದಾರೆ. ಕೇಂದ್ರದಲ್ಲಿ ಮೂರನೇ ಎರಡರಷ್ಟು ಬಹುಮತ ಗಳಿಸಿದ್ದೇವೆ ಎಂದು ತಿಳಿಸಿದರು.
ರಾಜ್ಯದಲ್ಲಿ ನಮ್ಮ ಸರಕಾರ ಬರುವ ಸಾಧ್ಯತೆ ಇರುವುದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಅತ್ಯಂತ ಮಹತ್ವವಾಗಿದೆ. ಗೆಲುವು ನಮ್ಮದೆ ಆಗಿರಬೇಕು. ಹಾಗಾಗಿ ಕಾರ್ಯಕರ್ತರು ವಿಜಯೋತ್ಸವದೊಂದಿಗೆ ಸ್ಥಳೀಯ ಸಂಸ್ಥೆಗಳಲ್ಲೂ ಗೆಲುವು ಸಾಧಿಸಲು ಪ್ರಯತ್ನಿಸಬೇಕು ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದ ಬಳಿಕ ಪಟ್ಟಣದ 11 ವಾರ್ಡ್‌ಗಳ ಎಲ್ಲಾ ಸಮುದಾಯದವರ ಮನೆಗಳಿಗೆ ತೆರಳಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಕೆ.ಪ್ರಾಣೇಶ್, ತಾಪಂ ಅಧ್ಯಕ್ಷ ಕೆ.ಸಿ.ರತನ್, ಜಿಪಂ ಸದಸ್ಯರಾದ ಅಮಿತ ಮುತ್ತಪ್ಪ, ಶಾಮಣ್ಣ, ಸುಧಾ ಯೋಗೇಶ್, ಜಿಲ್ಲಾ ಕಾರ್ಯದರ್ಶಿ ತಮ್ಮಯ್ಯ, ಮಂಡಲ ಅಧ್ಯಕ್ಷ ದುಂಡುಗ ಪ್ರಮೋದ್, ಮುಖಂಡರಾದ ಸುದರ್ಶನ್, ಹಾಲಪ್ಪಗೌಡ, ಜೆ.ಎಸ್.ರಘು, ಎಂ.ಎನ್.ಕಲ್ಲೇಶ್, ಸುರೇಂದ್ರ, ಹಳಸೆ ಶಿವಣ್ಣ, ಕೆಂಜಿಗೆ ಕೇಶವ, ಜಯಂತ್ ಬಿದರಹಳ್ಳಿ, ದೀಪಕ್ ದೊಡ್ಡಯ್ಯ, ತರುವೆ ಗಜೇಂದ್ರ, ಪಟೇಲ್ ಮಂಜು, ನಯನ ತಳವಾರ, ಭರತ್ ಬಾಳೂರು, ಚಂದ್ರೇಶ್ ಮಗ್ಗಲಮಕ್ಕಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Kaup town: ಟ್ರಾಫಿಕ್ ಒತ್ತಡ, ಪಾರ್ಕಿಂಗ್ ಕಿರಿಕಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.