ಮತ್ತೊಮ್ಮೆ ಗೆದ್ದು ಬೀಗಿದ ಶೋಭಾ

Team Udayavani, May 24, 2019, 12:35 PM IST

24-May-16

ಚಿಕ್ಕಮಗಳೂರು: ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಚಿಕ್ಕಮಗಳೂರು: ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಭಾರೀ ಮತಗಳ ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಕ್ಷೇತ್ರವನ್ನು ಬಿಜೆಪಿ ಮತ್ತೂಮ್ಮೆ ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಕಳೆದ ಹಲವಾರು ಚುನಾವಣೆಗಳಲ್ಲಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿ 2012ರಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಶರಣಾಗಿತ್ತು.

ದಾಖಲೆ ಮತಗಳ ಜಯ: ಕ್ಷೇತ್ರ ಪುನರ್ವಿಂಗಡಣೆಯ ನಂತರ ನಡೆದಿರುವ 4ನೇ ಚುನಾವಣೆಯಲ್ಲಿ ಈ ಬಾರಿ ಅತೀ ಹೆಚ್ಚು ಮತಗಳ ಅಂತರದಿಂದ ಗೆಲ್ಲುವ ಮೂಲಕ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ನೂತನ ದಾಖಲೆ ನಿರ್ಮಿಸಿದ್ದಾರೆ.

ಸಂಘಟಿತ ಹೋರಾಟ: ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸುವ ಮೊದಲು ಪಕ್ಷದಲ್ಲಿ ಸಂಸದೆ ಶೋಭಕರಂದ್ಲಾಜೆಗೆ ಟಿಕೆಟ್ ನೀಡುವ ವಿಚಾರ ಕುರಿತು ಅಪಸ್ವರ ಕೇಳಿ ಬಂದಿತ್ತು. ಕೆಲವೆಡೆ ಬಿಜೆಪಿ ಕಾರ್ಯಕರ್ತರುಗಳೇ ಸಾಮಾಜಿಕ ಜಾಲತಾಣಗಳಲ್ಲಿ ಗೋಬ್ಯಾಕ್‌ ಶೋಭಾ ಅಭಿಯಾನ ನಡೆಸಿದ್ದರು.

ನಗರಸಭೆಯ ಸಾಕಷ್ಟು ಸದಸ್ಯರು ನೇರವಾಗಿಯೇ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡದಂತೆ ಪಕ್ಷದ ಮುಖಂಡರುಗಳನ್ನು ಆಗ್ರಹಿಸಿದ್ದರು. ಆದರೂ ಅಂತಿಮವಾಗಿ ಪಕ್ಷ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಿತು. ಶೋಭಾಗೆ ಪಕ್ಷ ಟಿಕೆಟ್ ನೀಡಿದ ನಂತರ ಅಸಮಾಧಾನ ವ್ಯಕ್ತಪಡಿಸಿದ್ದವರೂ ಸೇರಿದಂತೆ ಇಡೀ ಪಕ್ಷ ಒಗ್ಗಟ್ಟಾಗಿ ಕೆಲಸ ಮಾಡಿದ್ದು ಬಿಜೆಪಿಯ ಗೆಲುವಿಗೆ ಪ್ರಮುಖ ಕಾರಣವಾಯಿತು.

ಮೋದಿಯವರ ಅಲೆ: ಶೋಭಾ ಅವರು 2ನೇ ಬಾರಿ ಸಂಸದರಾಗಿ ಆಯ್ಕೆಯಾಗಲು ಅತೀ ಹೆಚ್ಚು ಅನುಕೂಲವಾಗಿದ್ದು, ನರೇಂದ್ರ ಮೋದಿಯವರ ಅಲೆ. ಕಳೆದ ಚುನಾವಣೆಯಂತೆಯೇ ಈ ಬಾರಿಯ ಚುನಾವಣೆಯಲ್ಲಿಯೂ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹವಾ ಹೆಚ್ಚಾಗಿತ್ತು. ಅದರಲ್ಲಿಯೂ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್‌ ನಡೆಸಿದ ನಂತರ ಈ ಹವಾ ಮತ್ತಷ್ಟು ಹೆಚ್ಚಾಗಿತ್ತು. ಈ ಎಲ್ಲದರಿಂದಾಗಿ ಶೋಭಾ ಕಳೆದ ಬಾರಿಯ ಚುನಾವಣೆಗಿಂತಲು ಹೆಚ್ಚು ಮತಗಳ ಅಂತರದಿಂದ ಗೆದ್ದು ಸಂಸತ್‌ ಪ್ರವೇಶಿಸಲು ಸಾಧ್ಯವಾಗಿದೆ.

ಅನುಕೂಲವಾಗದ ಮೈತ್ರಿ: ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ನಡೆದಿತ್ತು. ಈ ಬಾರಿ ಜೆಡಿಎಸ್‌-ಕಾಂಗ್ರೆಸ್‌ ಪಕ್ಷಗಳು ಮೈತ್ರಿ ಮಾಡಿಕೊಂಡು ಜೆಡಿಎಸ್‌ ಪಕ್ಷಕ್ಕೆ ಕ್ಷೇತ್ರವನ್ನು ಬಿಟ್ಟು ಕೊಟ್ಟಿತ್ತು. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಗಳಿಸಿದ ಮತಗಳನ್ನು ಒಟ್ಟುಗೂಡಿಸಿದರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಸಾಧ್ಯ ಎಂಬ ಮಾತುಗಳನ್ನು ಎರಡೂ ಪಕ್ಷಗಳು ಹೇಳುತ್ತಿದ್ದವಾದರೂ ಚುನಾವಣೆಯಲ್ಲಿ ಆ ರೀತಿ ಆಗಿಲ್ಲ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೆಡಿಎಸ್‌ ಪಕ್ಷಕ್ಕೆ ಸ್ವಲ್ಪ ನೆಲೆ ಇತ್ತಾದರೂ ಉಡುಪಿ ಜಿಲ್ಲೆಯಲ್ಲಿ ಜೆಡಿಎಸ್‌ ಪಕ್ಷಕ್ಕೆ ನೆಲೆಯೇ ಇಲ್ಲದಿದ್ದರೂ ಕ್ಷೇತ್ರವನ್ನು ಜೆಡಿಎಸ್‌ ಪಕ್ಷಕ್ಕೆ ಬಿಟ್ಟು ಕೊಟ್ಟಿದ್ದೂ ಬಿಜೆಪಿಗೆ ಬಾರೀ ಗೆಲುವು ದೊರೆಯಲು ಕಾರಣವಾಯಿತು ಎಂಬ ಮಾತುಗಳು ಕೇಳಿ ಬರುತ್ತಿವೆ. ಇದೇ ಮೊದಲ ಬಾರಿಗೆ ಕಾಂಗ್ರೆಸ್‌ ಚಿಹ್ನೆ ಇಲ್ಲದೆ ಚುನಾವಣೆ ನಡೆದಿದ್ದು, ಸಾಂಪ್ರದಾಯಿಕ ಕಾಂಗ್ರೆಸ್‌ ಮತದಾರರಿಗೆ ಗೊಂದಲವಾಗಿದ್ದು ಸಹ ಬಿಜೆಪಿಗೆ ಹೆಚ್ಚು ಮತ ದೊರೆಯಲು ಕಾರಣವಾಯಿತು ಎಂಬ ಮಾತುಗಳೂ ಕೇಳಿ ಬರುತ್ತಿವೆ.

ಬಿಜೆಪಿ ಭದ್ರಕೋಟೆ: ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಕಂಠಪ್ಪ ಮೂರು ಬಾರಿ ಗೆಲುವು ಸಾಧಿಸಿದ್ದರು. ಕ್ಷೇತ್ರ ಪುನರ್ವಿಂಗಡಣೆಯ ನಂತರ 2009ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಡಿ.ವಿ.ಸದಾನಂದಗೌಡ ಸುಮಾರು 27 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆ ಅವರನ್ನು ಸೋಲಿಸುವ ಮೂಲಕ ಕ್ಷೇತ್ರವನ್ನು ಬಿಜೆಪಿ ಭದ್ರಕೋಟೆಯಾಗಿಸಿದ್ದರು.

ಡಿ.ವಿ.ಸದಾನಂದಗೌಡ ರಾಜ್ಯದ ಮುಖ್ಯಮಂತ್ರಿಯಾಗಿ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆ ಬಿಜೆಪಿಯ ಸುನಿಲ್ಕುಮಾರ್‌ ಅವರನ್ನು 46 ಸಾವಿರ ಮತಗಳ ಅಂತರದಿಂದ ಸೋಲಿಸುವ ಮೂಲಕ ಕ್ಷೇತ್ರವನ್ನು ಬಿಜೆಪಿಯಿಂದ ಕಸಿದುಕೊಂಡಿದ್ದರು.

ನಂತರ 2014ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ 1.81 ಲಕ್ಷ ಮತಗಳ ಅಂತರದಿಂದ ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆ ಅವರನ್ನು ಸೋಲಿಸಿದ್ದರು. ಇದೀಗ ಶೋಭಾ ಕರಂದ್ಲಾಜೆ ಜೆಡಿಎಸ್‌ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಅವರನ್ನು ಸೋಲಿಸುವ ಮೂಲಕ ಭದ್ರಕೋಟೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.