ಕ್ರೀಡೆಯಲ್ಲಿ ಪಾಲ್ಗೊಳ್ಳುವಿಕೆ ಮುಖ್ಯ

ನಗರದ ಶತಮಾನೋತ್ಸವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವನ್ನು ಜಿಲ್ಲಾ ಧಿಕಾರಿ ಡಾ| ಬಗಾದಿ ಗೌತಮ್‌ ಉದ್ಘಾಟಿಸಿದರು

Team Udayavani, Feb 18, 2021, 6:54 PM IST

18-21

ಚಿಕ್ಕಮಗಳೂರು: ಕ್ರೀಡೆಯಲ್ಲಿ ಸೋಲು – ಗೆಲುವು ಮುಖ್ಯವಲ್ಲ, ಭಾಗವಹಿಸುವಿಕೆ ಮುಖ್ಯ ಎಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಹೇಳಿದರು.

ಬುಧವಾರ ನಗರದ ಶತಮಾನೋತ್ಸವ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಸರ್ಕಾರಿ
ನೌಕರರ ಸಂಘದಿಂದ ಆಯೋಜಿಸಿದ್ದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನೌಕರರಿಗೆ ಕ್ರೀಡಾಕೂಟಗಳು ಪುನಶ್ಚೇತನ ಕಾರ್ಯಕ್ರಮವಿದ್ದಂತೆ. ವರ್ಷಪೂರ್ತಿ ಕೆಲಸದ ಒತ್ತಡದಲ್ಲಿರುವ ನೌಕರರಿಗೆ ಮಾನಸಿಕ ಮತ್ತು
ದೈಹಿಕ ಒತ್ತಡವನ್ನು ಕಡಿಮೆ ಮಾಡಲು ಕ್ರೀಡೆ ಒಂದು ವೇದಿಕೆಯಾಗಿದೆ ಎಂದರು.

ದಿನನಿತ್ಯ ಕರ್ತವ್ಯದಲ್ಲಿ ಒತ್ತಡಕ್ಕೆ ಒಳಗಾಗುವುದು ಸಹಜ. ಎಲ್ಲರೂ ಸೇರಿ ಕೂಡಿ ಆಟವಾಡಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮನಸ್ಸು ಪುನಶ್ಚೇತನಗೊಳ್ಳುತ್ತದೆ. ಜಿಲ್ಲೆಯಲ್ಲಿ ಸರ್ಕಾರಿ ನೌಕರರ ಸಂಘವು ಬೇರೆ ಜಿಲ್ಲೆಗಳ ನೌಕರರ ಸಂಘಕ್ಕಿಂತ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಸರ್ಕಾರಿ ನೌಕರರ ಭವನದಲ್ಲಿ ರಿಯಾಯಿತಿ ದರಲ್ಲಿ ದಿನಬಳಕೆ ವಸ್ತುಗಳನ್ನು ನೌಕರರಿಗೆ ದೊರೆಯುವಂತೆ ಮಾಡಿರುವುದು ನೌಕರರಿಗೆ ಅನುಕೂಲವಾಗಿದೆ ಎಂದರು.

ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿ ಕಾರಿ ಎಸ್‌. ಪೂವಿತಾ ಥ್ರೋಬಾಲ್‌ ಎಸೆಯುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಕಾರ್ಯಾಂಗ ಉತ್ತಮವಾಗಿ ಕಾರ್ಯ ನಿರ್ವಹಿಸಿದರೆ ಆಡಳಿತ ಸುಗಮವಾಗಿ ನಡೆಯುತ್ತದೆ. ಕಾರ್ಯಾಂಗವನ್ನು ಪ್ರತಿನಿ ಧಿಸುವ ನಾವು ಚಟುವಟಿಕೆಯಿಂದ ಇದ್ದರೆ ಹೆಚ್ಚು ಕೆಲಸ ಮಾಡಬಹುದು. ಈ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಅವಶ್ಯಕ ಎಂದರು.

ಜಿಪಂ ಉಪಾಧ್ಯಕ್ಷ ಬಿ.ಜೆ. ಸೋಮಶೇಖರಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ನೌಕರರಿಗಾಗಿ ಆಯೋಜಿಸಿರುವ ಈ ಕ್ರೀಡಾಕೂಟ ಮತ್ತು
ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮಗಳು ನೌಕರರನ್ನು ಒತ್ತಡದಿಂದ ಮುಕ್ತಗೊಳಿಸಿ ಒಂದೆಡೆ ಸೇರಿ ತಮ್ಮ ನೋವು ನಲಿವುಗಳನ್ನು ಹಂಚಿಕೊಳ್ಳಲು
ಸಹಕಾರಿಯಾಗುವುದಲ್ಲದೆ ತಮ್ಮ ಮನಸ್ಸಿನ ಒತ್ತಡಗಳನ್ನು ಕಡಿಮೆ ಮಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದೇವೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಸರ್ಕಾರಿ ನೌಕರರ ಗೌರವಾಧ್ಯಕ್ಷ ಡಿ.ಆರ್‌. ಓಂಕಾರಸ್ವಾಮಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಡಾ| ಎಚ್‌.ಪಿ. ಮಂಜುಳ ಹುಲ್ಲಹಳ್ಳಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್‌ ಸದಸ್ಯ ಎಸ್‌.ಟಿ. ಪೂರ್ಣೇಶ್‌, ಕಾರ್ಯದರ್ಶಿ ಸತ್ಯನಾರಾಯಣ, ಖಜಾಂಜಿ ಆರ್‌. ಚಂದ್ರಪ್ಪ, ನಿಕಟಪೂರ್ವ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಪರಮೇಶ್ವರಪ್ಪ ಇದ್ದರು.

ಓದಿ : ಮೊದಲು ಅಭಿಷೇಕ್ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸಿ… : ಶಾ ಗೆ ಮಮತಾ ಚಾಲೆಂಜ್

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

19-naxalite

Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ

17-2

ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.