ಚಿಕ್ಕಬಳ್ಳಾಪುರ: ಮಾದರಿ ಗೋಶಾಲೆ ನಿರ್ಮಾಣ ಕಾರ್ಯಕ್ಕೆ ಸಚಿವ ಸುಧಾಕರ್ ಚಾಲನೆ


Team Udayavani, Aug 28, 2021, 4:34 PM IST

ಚಿಕ್ಕಬಳ್ಳಾಪುರ: ಮಾದರಿ ಗೋಶಾಲೆ ನಿರ್ಮಾಣ ಕಾರ್ಯಕ್ಕೆ ಸಚಿವ ಸುಧಾಕರ್ ಚಾಲನೆ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾನೂನು ಜಾರಿಯಾದ ಬಳಿಕ, ಗೋ ಸಂರಕ್ಷಣೆಗಾಗಿ ಚಿಕ್ಕಬಳ್ಳಾಪುರದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಮಾದರಿ ಗೋಶಾಲೆ ಸ್ಥಾಪನೆಗೆ ಚಾಲನೆ ದೊರೆತಿದೆ.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಶನಿವಾರ ಶಿಡ್ಲಘಟ್ಟ ತಾಲೂಕಿನ ಬಶೆಟ್ಟಿಹಳ್ಳಿ ಹೋಬಳಿ ನಾಗರೆಡ್ಡಿಹಳ್ಳಿ ಬಳಿ ಪಶುಸಂಗೋಪನಾ ಇಲಾಖೆಯಿಂದ ನಿರ್ಮಿಸಲುದ್ದೇಶಿಸಿರುವ ಗೋಶಾಲೆ ಕಾಮಗಾರಿಗೆ ಚಾಲನೆ ನೀಡಿದ್ದಾರೆ.

ಗೋ ಸಂರಕ್ಷಣೆಗಾಗಿ ರಾಜ್ಯ ಸರ್ಕಾರ ಜಿಲ್ಲೆಗೊಂದರಂತೆ ಗೋಶಾಲೆ ಆರಂಭಿಸಲು 50 ಲಕ್ಷ ರೂ. ನಿಗದಿಪಡಿಸಿದೆ. ನಾಗರೆಡ್ಡಿಹಳ್ಳಿ ಗ್ರಾಮದ ಸರ್ವೆ ನಂ.41 ರಲ್ಲಿ 10 ಎಕರೆಯನ್ನು ಗೋಶಾಲೆಗೆ ಮೀಸಲಿಟ್ಟಿದ್ದು, 2021 ರ ಅಕ್ಟೋಬರ್ 2 ರೊಳಗಾಗಿ ಇದನ್ನು ನಿರ್ಮಿಸುವ ಗುರಿ ಹಾಕಿಕೊಳ್ಳಲಾಗಿದೆ. ಈಗಾಗಲೇ ಜಾರಿಯಲ್ಲಿರುವ ಕೊಟ್ಟಿಗೆ, ಕೃಷಿ ಹೊಂಡ, ಮೇವು ಉತ್ಪಾದನೆ ಮೊದಲಾದ ಯೋಜನೆಗಳನ್ನು ಒಂದು ಮಾಡಲು ಉದ್ದೇಶಿಸಲಾಗಿದೆ.

ಗೋಶಾಲೆಯ ಉಪ ಉತ್ಪನ್ನಗಳನ್ನು ಖಾದಿ ಗ್ರಾಮೋದ್ಯೋಗ, ಕೆಎಂಎಫ್ ಅಥವಾ ಕೆಎಪಿಎಲ್ ನಿಂದ ಮಾರಾಟ ಮಾಡಿ, ಸಂಪನ್ಮೂಲ ಕ್ರೋಢೀಕರಣ ಮಾಡಲಾಗುತ್ತದೆ. ಗೋಶಾಲೆಯ ಸುಸ್ಥಿರತೆ, ನಿರ್ವಹಣೆಗೆ ಮೇವು ಬೆಳೆಯುವುದು, ಉತ್ಪನ್ನ ಮಾರಾಟ ಮಾಡಲು ಜಿಲ್ಲಾ ಪ್ರಾಣಿ ದಯಾ ಸಂಘಕ್ಕೆ ಅವಕಾಶ ನೀಡಲಾಗಿದೆ. ಒಂದು ವೇಳೆ ಸಾರ್ವಜನಿಕರು ಸ್ವಯಂಪ್ರೇರಣೆಯಿಂದ ಜಾನುವಾರುಗಳನ್ನು ನೋಡಿಕೊಳ್ಳಲು ಮುಂದೆ ಬಂದರೆ, ಅದಕ್ಕೂ ಅವಕಾಶವಿದೆ ಎಂದರು.

ಪ್ರಥಮ ಗೋಶಾಲೆ: ಪ್ರತೀ ಜಿಲ್ಲೆಗೆ ಒಂದು ಗೋಶಾಲೆ ನಿರ್ಮಿಸಲಾಗುತ್ತಿದ್ದು, ಚಿಕ್ಕಬಳ್ಳಾಪುರದ ಈ ಗೋಶಾಲೆ ರಾಜ್ಯದಲ್ಲಿಯೇ ಪ್ರಪ್ರಥಮ ಗೋಶಾಲೆಯಾಗಲಿರುವುದು ಸಂತಸದ ವಿಷಯ ಎಂದು ಸಚಿವ ಡಾ.ಕೆ.ಸುಧಾಕರ್ ಶ್ಲಾಘನೆ ವ್ಯಕ್ತಪಡಿಸಿದರು.

10 ಎಕರೆ ಪ್ರದೇಶದಲ್ಲಿ ಸುಮಾರು 50 ಲಕ್ಷ ರೂ ವೆಚ್ಚದಲ್ಲಿ ಈ ಗೋಶಾಲೆ ನಿರ್ಮಾಣವಾಗಲಿದ್ದು, ವಯಸ್ಸಾದ, ರೋಗಗ್ರಸ್ಥ, ಅಂಗವಿಕಲ ಜಾನುವಾರುಗಳಿಗೆ ಪುನರ್ವಸತಿ ಕಲ್ಪಿಸಲಿದೆ. ಗೋಶಾಲೆಯ ಉಪ ಉತ್ಪನ್ನಗಳಿಂದ ತಯಾರಿಸಿದ ವಸ್ತುಗಳಿಗೆ ಖಾದಿ ಗ್ರಾಮೋದ್ಯೋಗ, ಕೆಎಂಎಫ್ ಮೂಲಕ ಮಾರುಕಟ್ಟೆ ಕಲ್ಪಿಸಿ, ಸುಸ್ಥಿರ ಸಂಪನ್ಮೂಲದ ವ್ಯವಸ್ಥೆ ಮಾಡಲಾಗುವುದು” ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಗೋಶಾಲೆಗಳ ನಿರ್ಮಾಣಕ್ಕಾಗಿ ಪ್ರತಿ ಜಿಲ್ಲೆಗೆ ಮೊದಲ ಹಾಗೂ ಎರಡನೇ ಕಂತು ಸೇರಿ 24 ಲಕ್ಷ ರೂ. ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ. ಸರ್ಕಾರ ಅಥವಾ ಸಂಸ್ಥೆಗಳಿಂದ ನಡೆಸುವ ಗೋಶಾಲೆಯಲ್ಲಿ ಪ್ರತಿ ಜಾನುವಾರು ವೆಚ್ಚ ದಿನಕ್ಕೆ 17.30 ರೂ. ನಿಗದಿಪಡಿಸಲಾಗಿದೆ. ಜಿಲ್ಲೆಯ ಒಟ್ಟು ಜಾನುವಾರು ಪೈಕಿ ಶೇ.0.75 ರಷ್ಟು ಜಾನುವಾರುಗಳಿಗೆ ಸ್ಥಳಾವಕಾಶ ಲಭ್ಯವಿರುವುದನ್ನು ಖಚಿತಪಡಿಸಿಕೊಳ್ಳಬೇಕಾಗುತ್ತದೆ. 2018 ರ ಗಣತಿ ಪ್ರಕಾರ ಜಿಲ್ಲೆಯಲ್ಲಿ 2,13,815 ದನಗಳು ಹಾಗೂ 26,397 ಎಮ್ಮೆಗಳಿವೆ.

ಕಾರ್ಯಕ್ರಮದಲ್ಲಿ ಶಾಸಕ ವಿ.ಮುನಿಯಪ್ಪ,ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ಮಾಜಿ ಶಾಸಕ ಎಂ.ರಾಜಣ್ಣ,ಜಿಲ್ಲಾಧಿಕಾರಿ ಆರ್.ಲತಾ,ಜಿಪಂ ಸಿಇಓ ಶಿವಶಂಕರ್,ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.