Government ಜಮೀನಿನಲ್ಲಿ ನಿರ್ಮಿಸಿದ್ದ ಮನೆಕುಸಿದು ಬಿದ್ದರೆ 1 ಲಕ್ಷ ಪರಿಹಾರ: ಜಾರ್ಜ್
ಹಾನಿಯಾದ ಮನೆಗೆ ತತ್‌ಕ್ಷಣ 1.20 ಲಕ್ಷ ರೂ.
Team Udayavani, Jul 28, 2024, 10:52 PM IST
ಚಿಕ್ಕಮಗಳೂರು: ಡೀಮ್ಡ್ ಫಾರೆಸ್ಟ್ ಸೇರಿ ಸರಕಾರಿ ಜಮೀನಿನಲ್ಲಿ ನಿರ್ಮಿಸಿದ್ದ ಮನೆಗಳು ಮಳೆಯಿಂದ ಕುಸಿದು ಬಿದ್ದರೆ ಒಂದು ಲಕ್ಷ ರೂ. ಪರಿಹಾರ ನೀಡಲು ನಿರ್ಧರಿಸಿದ್ದು, ಈ ಕುರಿತು ಶೀಘ್ರವೇ ಆದೇಶ ಹೊರಡಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
ರವಿವಾರ ಮಲೆನಾಡು ಪ್ರದೇಶದಲ್ಲಿ ಮಳೆ ಹಾನಿ ಪ್ರದೇಶ ವೀಕ್ಷಿಸಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಡೀಮ್ಡ್ ಅರಣ್ಯ ಸೇರಿ ಸರಕಾರಿ ಜಮೀನಿನಲ್ಲಿ ನಿರ್ಮಿಸಿದ್ದ ಮನೆಗಳು ಮಳೆಯಿಂದ ಕುಸಿದು ಬಿದ್ದರೂ 1 ಲಕ್ಷ ರೂ. ಪರಿಹಾರ ನೀಡುವ ಬಗ್ಗೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಅದರಂತೆ ಪರಿಹಾರ ವಿತರಿಸಲಾಗುವುದು. ಮಳೆಯಿಂದ ಕುಸಿದ ಮನೆಗಳಿಗೆ ತತ್‌ಕ್ಷಣದ ಪರಿಹಾರವಾಗಿ 1.20 ಲಕ್ಷ ರೂ. ನೀಡಲಾಗುತ್ತಿದೆ. ಇದರ ಜತೆಗೆ ಇನ್ನೂ 3.80 ಲಕ್ಷ ರೂ. ಪರಿಹಾರ ಒದಗಿಸಿ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮನೆ ನಿರ್ಮಿಸಿ ಕೊಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
MUST WATCH
ಹೊಸ ಸೇರ್ಪಡೆ
Donald Trump Salry: ಅಮೆರಿಕದ ಅಧ್ಯಕ್ಷರಿಗೆ ಸಿಗುವ ಸಂಬಳ ಎಷ್ಟು? ಏನೇನು ಸೌಲಭ್ಯಗಳಿವೆ
Kota: ರಾ.ಹೆ. ಪಕ್ಕದಲ್ಲಿ ನಿರ್ವಹಣೆ ಇಲ್ಲದೆ ಭಾರೀ ಸಮಸ್ಯೆ; ಸೈಕಲ್ ಸವಾರರಿಗೆ ಅಪಾಯ
Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ
Hagaribommanahalli: ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು
Mangalore: ಲೋವರ್ ಬೆಂದೂರ್‌ವೆಲ್-ಕರಾವಳಿ ವೃತ್ತ ರಸ್ತೆ ಅವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.