ಚಿಕ್ಕಮಗಳೂರಿನ ಶಾಲೆಯಲ್ಲಿ ಹೆಚ್ಚಿದ ಕೋವಿಡ್ ಆತಂಕ: ನಾಲ್ಕೇ ದಿನದಲ್ಲಿ107 ಪ್ರಕರಣಗಳು ಪತ್ತೆ!
Team Udayavani, Dec 6, 2021, 9:53 AM IST
ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಸಿಗೋಡುನಲ್ಲಿರುವ ನವೋದಯಾ ವಿದ್ಯಾಲಯದಲ್ಲಿ ಮತ್ತೆ ಕೋವಿಡ್ ಸ್ಪೋಟವಾಗಿದ್ದು, ಸೋಂಕಿತರ ಸಂಖ್ಯೆ 107ಕ್ಕೆ ಏರಿಕೆಯಾಗಿದೆ.
ರವಿವಾರ ಶಾಲೆಯಲ್ಲಿ 69 ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿತ್ತು. ಇವತ್ತು ಮತ್ತೆ 38 ಕೇಸ್ ಪತ್ತೆಯಾಗಿದೆ. ಇದರೊಂದಿಗೆ 94 ವಿದ್ಯಾರ್ಥಿಗಳು, 13 ಶಿಕ್ಷಕರರು ಸೇರಿದಂತೆ 107 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿದೆ.
ಸಿಗೋಡುನಲ್ಲಿರುವ ವಸತಿ ಶಾಲೆಯಲ್ಲಿ ಮೊದಲು ಶಿಕ್ಷಕರಿಗೊಬ್ಬರಿಗೆ ಕೋವಿಡ್ ಕಾಣಿಸಿಕೊಂಡಿತ್ತು. ನಂತರ 418 ವಿದ್ಯಾರ್ಥಿಗಳು, ಸಿಬ್ಬಂದಿಗಳ ಸ್ವ್ಯಾಬ್ ಪಡೆದಿದ್ದ ಆರೋಗ್ಯ ಇಲಾಖೆ ಪರೀಕ್ಷೆ ನಡೆಸಿತ್ತು. 418 ರಲ್ಲಿ 107 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ಇದನ್ನೂ ಓದಿ:ಸಂಪುಟ ವಿಸ್ತರಣೆಯ ಪಿಸುಮಾತು; ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಗರಿಗೆದರಿದೆ ಹಲವು ನಿರೀಕ್ಷೆ
ಈಗಾಗಲೇ ಜಿಲ್ಲಾಡಳಿತ ಜವಾಹರ್ ನವೋದಯ ವಿದ್ಯಾಲಯ ಸೀಲ್ ಡೌನ್ ಮಾಡಿದೆ. ಸೋಂಕು ಪತ್ತೆಯಾದವರಲ್ಲಿ ಯಾವುದೇ ಲಕ್ಷಣಗಳಿಲ್ಲದ ಕಾರಣ ವಸತಿ ಶಾಲೆಯಲ್ಲಿಯೇ ಎಲ್ಲರಿಗೂ ಕ್ವಾರಂಟೈನ್ ಮಾಡಲಾಗಿದೆ. ಸ್ಥಳದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.