ಗಣೇಶ ಪ್ರತಿಷ್ಠಾಪನೆಗೆ 1659 ಅರ್ಜಿ; : ಎಸ್ಪಿ ಉಮಾ ಪ್ರಶಾಂತ್
ಮನೆ ಕಳವು ಪ್ರಕರಣಕ್ಕೆ ಕಡಿವಾಣ ಹಾಕಲು 57 ನೈಟ್ ಬೀಟ್ ವ್ಯವಸ್ಥೆ ಮಾಡಲಾಗಿದೆ.
Team Udayavani, Aug 25, 2022, 12:21 PM IST
ಚಿಕ್ಕಮಗಳೂರು: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಜಿಲ್ಲಾದ್ಯಂತ 1659 ಅರ್ಜಿಗಳು ಬಂದಿದ್ದು, 34 ಅತಿ ಸೂಕ್ಷ್ಮ ಹಾಗೂ 175 ಸೂಕ್ಷ್ಮ ಸ್ಥಳಗಳೆಂದು ಗುರುತಿಸಲಾಗಿದೆ ಎಂದು ಎಸ್ಪಿ ಉಮಾ ಪ್ರಶಾಂತ್ ತಿಳಿಸಿದರು.
ಬುಧವಾರ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ನ್ಯಾಯಾಲಯದ ನಿರ್ದೇಶನದಂತೆ ಡಿಜೆ ಬಳಕೆಗೆ ಅವಕಾಶವಿಲ್ಲ ಎಂದರು.
ಜಿಲ್ಲೆಯಲ್ಲಿ 730 ಹೋಂ ಸ್ಟೇಗಳು ಇದ್ದು, 503 ಹೋಂ ಸ್ಟೇಗಳು ಪರವಾನಗಿ ಪಡೆದುಕೊಂಡಿವೆ. ಉಳಿದ ಹೋಂ ಸ್ಟೇಗಳು ಪರವಾನಗಿ ಪಡೆದುಕೊಂಡಿವೆಯೇ ಅಥವಾ ಇಲ್ಲವೇ ಎಂದು ಸರ್ವೇ ನಡೆಸಲಾಗುತ್ತಿದೆ. ಪರವಾನಗಿ ಪಡೆಯದಿರುವ ಹೋಂ ಸ್ಟೇಗಳನ್ನು ಮುಚ್ಚಿಸಲಾಗುವುದು ಎಂದು ತಿಳಿಸಿದರು.
ಗಾಂಜಾ ಮಾರಾಟ ಮತ್ತು ಸೇವನೆ ಬಗ್ಗೆ ದೂರು ಬಂದಿದ್ದು, ಹಂತ- ಹಂತವಾಗಿ ಕಡಿವಾಣ ಹಾಕಲಾಗುವುದು. ಪೊಲೀಸ್ ಠಾಣೆಗಳನ್ನು ಜನಸ್ನೇಹಿಯಾಗಿಸಲಾಗುವುದು. ದೂರು ಹೊತ್ತು ಬಂದವರ ಸಮಸ್ಯೆಗಳನ್ನು ಪೊಲೀಸ್ ಸಿಬ್ಬಂದಿ ಆಲಿಸಿದಲ್ಲಿ ಅರ್ಧ ಸಮಸ್ಯೆ ಬಗೆಹರಿಯುತ್ತದೆ. ಈ ನಿಟ್ಟಿನಲ್ಲಿ ಪೊಲೀಸ್ ಸಿಬ್ಬಂದಿ ಕಾರ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ. ಸಾರ್ವಜನಿಕರೊಂದಿಗೆ ಸಭ್ಯತೆಯಿಂದ ವರ್ತಿಸುವಂತೆ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.
ಮನೆ ಕಳವು ಪ್ರಕರಣಕ್ಕೆ ಕಡಿವಾಣ ಹಾಕಲು 57 ನೈಟ್ ಬೀಟ್ ವ್ಯವಸ್ಥೆ ಮಾಡಲಾಗಿದೆ. 599 ಬೀಟ್ ಪಾಯಿಂಟ್‌ಗಳನ್ನು ಗುರುತಿಸಲಾಗಿದೆ. ಕಳವು ತಡೆಗೆ ಲಾಕ್‌ಹೌಸ್ ರಿಜಿಸ್ಟರ್ ಆನ್‌ಲೈನ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಮನೆಯವರು ಬೇರೆ ಊರಿಗೆ ಹೋಗುವ ಸಂದರ್ಭದಲ್ಲಿ ಆನ್‌ಲೈನ್ ಮೂಲಕ ಮಾಹಿತಿ ದಾಖಲಿಸುವ ವ್ಯವಸ್ಥೆ ಮಾಡಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಜಿಲ್ಲೆಯಲ್ಲಿ ಸಿವಿಲ್ ಪ್ರಕರಣ, ಪೋಕ್ಸೋ ಪ್ರಕರಣ ಹಾಗೂ 3ರಿಂದ 4 ಬಾಲ್ಯವಿವಾಹ ಪ್ರಕರಣ ಕಂಡುಬಂದಿದ್ದು, ನಿಯಂತ್ರಣಕ್ಕೆ ಅಧಿಕಾರಿಗಳ ಸಭೆ ನಡೆಸಲಾಗಿದೆ. ಅಪರಾಧ ಪ್ರಕರಣಗಳನ್ನು ಕಡಿವಾಣ ಹಾಕಲು ಪ್ರಯತ್ನಿಸಲಾಗುವುದು. ಚಿಕ್ಕಮಗಳೂರು ನಗರದಲ್ಲಿ ವಾಹನ ಸಂಚಾರ ಸಮಸ್ಯೆ ಇದ್ದು ಕೆಲವು ಮಾರ್ಪಾಡುಗಳನ್ನು ಮಾಡಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್ ಮುಕ್ತವಾಯಿತೇ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.