Chikkamagaluru ರೈಲು ನಿಲ್ದಾಣ ಅಭಿವೃದ್ಧಿಗೆ 26 ಕೋಟಿ ರೂ. ಬಿಡುಗಡೆ: ಸಚಿವ ವಿ.ಸೋಮಣ್ಣ
Team Udayavani, Jul 18, 2024, 4:42 PM IST
ಚಿಕ್ಕಮಗಳೂರು: ರೈಲ್ವೇ ಇಲಾಖೆಯಲ್ಲಿ 11 ಸಾವಿರ ಕೋಟಿ ರೂ. ಕಾಮಗಾರಿ ಪೆಂಡಿಂಗ್ ಇದ್ದು, ಆ ಎಲ್ಲಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ರೈಲ್ವೇ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.
ಚಿಕ್ಕಮಗಳೂರು ನಗರದ ರೈಲ್ವೇ ನಿಲ್ದಾಣ ಹಾಗೂ ಹಾದಿಹಳ್ಳಿ ರೈಲು ನಿಲ್ದಾಣ ಪರಿಶೀಲಿಸಿ ಸುದ್ದಿಗಾರರ ಜತೆ ಮಾತನಾಡಿದರು. ಕೇಂದ್ರ ಸರ್ಕಾರ ರಾಜ್ಯದ 59 ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು ಮುಂದಾಗಿದ್ದು, 54 ನಿಲ್ದಾಣಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಚಿಕ್ಕಮಗಳೂರು ರೈಲು ನಿಲ್ದಾಣವೂ ಒಂದಾಗಿದೆ. 26 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದರು.
ರೈಲ್ವೇ ನಿಲ್ದಾಣ ವಿಸ್ತರಣೆ, ಮೂಲಭೂತ ಸೌಕರ್ಯಗಳ ಜತೆ, ಜಿಲ್ಲಾ ಕೇಂದ್ರದಲ್ಲಿ ರೈಲು ನಿಲ್ದಾಣ ಯಾವ ರೀತಿ ಆಧುನೀಕರಣ ಮಾಡಬೇಕು. ಆ ನಿಟ್ಟಿನಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು.
ವೈಟಿಂಗ್ ರೂಮ್, ಪುರುಷ ಮತ್ತು ಮಹಿಳಾ ಶೌಚಾಲಯ, ಸಣ್ಣ ರೆಸ್ಟೋರೆಂಟ್, ಟಿಕೆಟ್ ಕೌಂಟರ್ ಸೇರಿದಂತೆ ಎಲ್ಲಾ ತರಹದ ಸೌಲತ್ತುಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು.
ಮಂಗಳೂರು ರೈಲ್ವೇ ನಿಲ್ದಾಣದ ಪರಿಶೀಲನೆ ನಡೆಸಿದ್ದೇನೆ. ಈ ನಿಲ್ದಾಣವನ್ನು 321 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮಟ್ಟದ ರೈಲ್ವೇ ನಿಲ್ದಾಣವಾಗಿ ನಿರ್ಮಾಣ ಮಾಡಲು ನಿರ್ಧರಿಸಿದ್ದು ಜನವರಿಯಿಂದ ಕೆಲಸ ಆರಂಭವಾಗಲಿದೆ. ಎರಡರಿಂದ ಮೂರು ವರ್ಷದಲ್ಲಿ ಕಾಮಗಾರಿ ಮುಕ್ತಾಯವಾಗಲಿದೆ ಎಂದರು.
ಚಿಕ್ಕಮಗಳೂರು ರೈಲ್ವೇ ನಿಲ್ದಾಣ ಕಾಮಗಾರಿ ಡಿಸೆಂಬರ್ 25 ರೊಳಗೆ ಕಾಮಗಾರಿ ಮುಕ್ತಾಯ ಗೊಳ್ಳಲಿದೆ. ಚಿಕ್ಕಮಗಳೂರು, ಬೇಲೂರು ಅಲ್ಲಿಂದ ಅರೇಹಳ್ಳಿ, ಹಾಸನ ರೈಲ್ವೇ ಮಾರ್ಗಕ್ಕೆ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಜಾಗ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಹಾಸನ ಜಿಲ್ಲೆಯಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಬಾಕಿಯಿದ್ದು ಅಲ್ಲಿನ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಶೀಘ್ರವೇ ಭೂ ಸ್ವಾಧೀನ ಪ್ರಕ್ರಿಯೆ ನಡೆಯಲಿದೆ ಎಂದರು.
ಜನಸಾಮಾನ್ಯರಿಗೆ ಅನುಕೂಲವಾಗಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಮುಂದಿನ ದಿನಗಳಲ್ಲಿ ರೈಲ್ವೇ ಸೇವೆಯನ್ನು ತಾಲೂಕು ಕೇಂದ್ರಗಳಿಗೂ ವಿಸ್ತರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದೇವೆ ಎಂದ ಅವರು, ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತದೆ. ಇಲ್ಲಿ ರೈಲ್ವೇ ನಿಲ್ದಾಣಕ್ಕೆ ಜಾಗ ನೀಡಿದ ರೈತರಿಗೆ ಓಡಾಡಲು ರಸ್ತೆ ಇಲ್ಲ ತೊಂದರೆಯಾಗಿದೆ ಎಂಬ ಸಮಸ್ಯೆಯನ್ನು ಗಮನಕ್ಕೆ ತಂದಿದ್ದು, ಸಮಸ್ಯೆ ನಿವಾರಣೆಗೆ ಮುಂದಾಗುವುದಾಗಿ ತಿಳಿಸಿದರು.
ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳ, ಕೊಲ್ಲೂರು ರೈಲ್ವೇ ಸಂಪರ್ಕ ಕಲ್ಪಿಸುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮನವಿ ಮಾಡಿದ್ದಾರೆ. ಎಲ್ಲೆಲ್ಲಿ ಅವಶ್ಯಕತೆ ಇದೆ. ಅನುಗುಣವಾಗಿ ರೈಲ್ವೆ ಸಂಪರ್ಕ ಕಲ್ಪಿಸಲಾಗುವುದು, ರಾಜ್ಯ ಸರ್ಕಾರ ನಮ್ಮೊಂದಿಗೆ ಕೈಜೋಡಿಸಬೇಕು ಎಂದ ಅವರು, ಜಾಗ ನೀಡಿದರೆ ಕೆಲಸ ಮಾಡಲು ಅನುಕೂಲವಾಗುತ್ತದೆ ಎಂದರು.
ಮೂರು ತಿಂಗಳಿಗೊಮ್ಮೆ ಲೋಕಸಭಾ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರ ಜತೆಯಲ್ಲಿ ಡಿಆರ್ ಎಂಗಳು ಸಲಹಾ ಸಮಿತಿ ಮಾಡಲು ಸೂಚನೆ ನೀಡಿದ್ದು ಮುಂದಿನ ದಿನಗಳಲ್ಲಿ ಆದೇಶ ಮಾಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
Chikkamagaluru: ಪ್ರವಾಸಿ ತಾಣಗಳಿಗೆ ನಿರ್ಬಂಧ, ಇಲ್ಲಿದೆ ಹೊಸ ವರ್ಷಾಚರಣೆಗೆ ಮಾರ್ಗಸೂಚಿ
Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ
Sringeri; ಪ್ರವಾಸಿ ವಾಹನಗಳ ಢಿಕ್ಕಿ: ವೃದ್ಧೆ ಸಾ*ವು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.