Hill Collapse ತಡೆ ಕಾಮಗಾರಿಗೆ 300 ಕೋಟಿ ರೂ.: ಸಚಿವ ಕೃಷ್ಣ ಬೈರೇಗೌಡ
Team Udayavani, Aug 6, 2024, 1:10 AM IST
ಚಿಕ್ಕಮಗಳೂರು: ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಗುಡ್ಡಕುಸಿತ ತಡೆಗಟ್ಟುವ ಕಾಮಗಾರಿ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಅವರು 300 ಕೋಟಿ ರೂ. ಬಿಡುಗಡೆ ಮಾಡಲು ಒಪ್ಪಿಗೆ ಸೂಚಿಸಿದ್ದು, ಈ ವರ್ಷ 100 ಕೋಟಿ ರೂ., ಮುಂದಿನ ವರ್ಷ 200 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಸೋಮವಾರ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸುದ್ದಿಗಾರರ ಜತೆ ಮಾತನಾಡಿ, ಹವಾಮಾನ ವೈಪರೀತ್ಯದಿಂದ ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿವೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಮಳೆ ಕೊರತೆ ಇತ್ತು. ಜುಲೈ ತಿಂಗಳ 20 ದಿನಗಳಲ್ಲಿ ಎರಡು ತಿಂಗಳು ಆಗಬೇಕಾದ ಮಳೆ ಒಮ್ಮೆಗೇ ಆಗಿದೆ. ಇದರ ಪರಿಣಾಮ ಅನೇಕ ಅನಾಹುತಗಳು ಸಂಭವಿಸಿವೆ ಎಂದರು.
ವರದಿ ನೀಡಿದ ಮೇಲೆ ಕಾಮಗಾರಿ
ಗುಡ್ಡ ಕುಸಿತ ತಡೆಗಟ್ಟುವ ನಿಟ್ಟಿನಲ್ಲಿ ಕಳೆದ ವರ್ಷವೇ ಜಿಯಲಾಜಿಕಲ್ ಸರ್ವೇ ಆಫ್ ಇಂಡಿಯಾದಿಂದ ಸರ್ವೇ ನಡೆಸಿ ವರದಿ ನೀಡಿದ್ದು, ಮಲೆನಾಡು ಜಿಲ್ಲೆಗಳ ಜಿಲ್ಲಾ ಧಿಕಾರಿಗಳಿಗೆ ಕಳುಹಿಸಲಾಗಿದೆ. ಸಂಭವನೀಯ ಗುಡ್ಡ ಕುಸಿಯುವ ಜನವಸತಿ ಪ್ರದೇಶಕ್ಕೆ ತೊಂದರೆಯಾಗುವ ಪ್ರದೇಶವನ್ನು ಗುರುತಿಸಿ ವರದಿ ನೀಡುವಂತೆ ಸೂಚಿಸಿದ್ದು, ವರದಿ ನೀಡಿದ ಮೇಲೆ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.
ಸಿಬಂದಿ ಭರ್ತಿಗೆ ಕ್ರಮ
ಕಂದಾಯ ಇಲಾಖೆಯಲ್ಲಿ ಸಿಬಂದಿ ಕೊರತೆ ಇದೆ. 20 ವಿವಿಧ ಹಂತದ ತಹಶೀಲ್ದಾರ್ ಹುದ್ದೆಗಳಿಗೆ ಪೋಸ್ಟಿಂಗ್ ನೀಡಲು ಸಿದ್ಧತೆ ನಡೆಯುತ್ತಿದೆ. ಒಂದು ಸಾವಿರ ಗ್ರಾಮ ಲೆಕ್ಕಾ ಧಿಕಾರಿಗಳು, 750 ಸರ್ವೇಯರ್ ಹಾಗೂ 34 ಎಡಿಎಲ್‌ಆರ್ ಹುದ್ದೆಗಳ ಭರ್ತಿಗೆ ಸರಕಾರ ಸಿದ್ಧತೆ ಮಾಡಿಕೊಂಡಿದೆ. ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.