9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ
ಅಮೆರಿಕದಿಂದ ಬಂದ ವ್ಯಕ್ತಿಯ ಮಗಳ ಕಣ್ಣಿಗೆ ಬಟ್ಟೆ ಕಟ್ಟಿ ಬಚ್ಚಿಟ್ಟಿದ್ದರು
Team Udayavani, Apr 17, 2024, 8:18 PM IST
ಚಿಕ್ಕಮಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಮೆರಿಕದಿಂದ ಹಣ ಸಂಪಾದನೆ ಮಾಡಿಕೊಂಡು ಬಂದ ಬಿಡದಿ ವ್ಯಕ್ತಿಯ 9 ವರ್ಷದ ಮಗಳನ್ನು ಅಪಹರಿಸಿ ಕಣ್ಣಿಗೆ ಬಟ್ಟೆ ಕಟ್ಟಿ ಬಚ್ಚಿಟ್ಟು, ಅನಂತರ ಆ ವ್ಯಕ್ತಿಯನ್ನು ಬೆದರಿಸಿ ಎಲ್ಲ ಆಸ್ತಿ ಬರೆಯಿಸಿಕೊಂಡಿದ್ದಾರೆ. ಇದಕ್ಕೆ ನನ್ನ ಬಳಿ ದಾಖಲೆಗಳಿವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೊಸ ಬಾಂಬ್ ಸಿಡಿಸಿದ್ದಾರೆ.
ಮೂಡಿಗೆರೆ ಪಟ್ಟಣದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಮತಯಾಚನೆ ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ಅಮೆರಿಕದಿಂದ ಹಣ ಸಂಪಾದನೆ ಮಾಡಿಕೊಂಡು ಬಂದ ವ್ಯಕ್ತಿಯ ಆಸ್ತಿ ಬರೆಸಿಕೊಂಡಿದ್ದರು. ಇದರ ದಾಖಲೆ ನನ್ನ ಬಳಿ ಇದೆ. ಬಿಡದಿ ಬಳಿ ಐಟಿ ಕಂಪನಿ ಸ್ಥಾಪನೆ ಮಾಡಿದ್ದರು. ಇದಕ್ಕೆ ಡಿಕೆಶಿ ಸುಳ್ಳು ಕ್ರಯಪತ್ರ ಸೃಷ್ಟಿಸಿದ್ದರು. ಈ ಪ್ರಕರಣ ಹೈಕೋರ್ಟ್‌ಗೆ ಹೋಗಿ ಡಿಕೆಶಿಗೆ ಮುಖಭಂಗವಾಯಿತು. ಬಳಿಕ ಆಸ್ತಿ ಮಾಲಕನ 9 ವರ್ಷದ ಮಗಳನ್ನು ಅಪಹರಿಸಿ ಕಣ್ಣಿಗೆ ಬಟ್ಟೆ ಕಟ್ಟಿ ಬೇರೊಂದು ಮನೆಯಲ್ಲಿ ಕೂಡಿಟ್ಟಿದ್ದರು. ಮಗಳು ಬೇಕೆಂದರೆ ಸಹಿ ಮಾಡು ಎಂದು ಬೆದರಿಸಿದ್ದರು. ಇದಕ್ಕೆ ನನ್ನ ಬಳಿ ದಾಖಲೆಯಿದೆ ಎಂದರು.
ವ್ಯಕ್ತಿ ಆಸ್ತಿ ಮಾರಾಟ ಮಾಡಿದ್ದೆಂದು ಹೇಳಲು ಅವರಿಗೆ ಚೆಕ್ ಕೊಡುತ್ತಾರೆ. 16 ಲಕ್ಷ ರೂ. ಹಾಗೂ 4 ಲಕ್ಷ ರೂ. ಮೌಲ್ಯದ್ದು 2 ಚೆಕ್‌ಗಳು ಲ್ಯಾಪ್ಸ್ ಆಗುತ್ತವೆ. ಇದನ್ನು ಹೊರಗೆ ಹೇಳಿದರೆ ಕಬ್ಬನ್‌ಪಾರ್ಕ್‌ನಲ್ಲಿ ಏನಾಗುತ್ತೆ ಅಂತಾ ತಿಳ್ಕೊ ಎಂದೂ ಬೆದರಿಸುತ್ತಾರೆ. ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರು. ಇದನ್ನು ಎಲೆಕ್ಷನ್‌ನಲ್ಲಿ ಬಳಸಿಕೊಳ್ಳಿ ಎಂದು ಲಾಯರ್ ಒಬ್ಬರು ದಾಖಲೆ ತಂದುಕೊಟ್ಟರು. ನಾನು ಅನ್ಯಾಯಕ್ಕೊಳಗಾದ ವ್ಯಕ್ತಿಯ ಬಳಿ ಹೋದಾಗ ಎಲ್ಲವನ್ನೂ ಕಳೆದುಕೊಂಡ ವ್ಯಕ್ತಿ ಜೀವನಕ್ಕಾಗಿ ಬೇರೆಯವರ ಅಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಮಾತನಾಡಿಸಿದಾಗ ಕರ್ನಾಟಕದ ಯಾರಿಗೂ ಮತ ಹಾಕಲ್ಲ. ನಾನು ಓಟರ್ ಲಿಸ್ಟ್‌ನಲ್ಲಿಯೇ ಇಲ್ಲ. ಈ ಕರ್ನಾಟಕ ಸಾಕು ಎಂದರು. ಇದು ನಡೆದು ಬಹಳ ವರ್ಷ ಆಗಿದೆ. ಇದಕ್ಕೆ ಸಂಬಂಧಿ ಸಿದ ದಾಖಲೆಗಳು ನನ್ನ ಬಳಿ ಇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.