ಆ್ಯಂಬುಲೆನ್ಸ್ ಸಿಗದೆ ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
Team Udayavani, Apr 22, 2020, 7:21 PM IST
ಚಿಕ್ಕಮಗಳೂರು: ಕೋವಿಡ್-19 ಸೋಂಕು ತಡೆಗಟ್ಟಲು ಇಡೀ ಜಿಲ್ಲೆಯನ್ನು ಲಾಕ್‍ಡೌನ್ ಮಾಡಲಾಗಿದೆ. ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಸಮಯಕ್ಕೆ ಸರಿಯಾಗಿ ಅಂಬುಲೇನ್ಸ್ ವಾಹನ ಸಿಗದೆ ಗರ್ಭಿಣಿ ಮಹಿಳೆಯೊಬ್ಬರು ಪರದಾಡಿ ಮನೆಯಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಬುಧವಾರ ನಡೆದಿದೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ಮತ್ತಿಕಟ್ಟೆ ಗ್ರಾಮದ ಉಣ್ಣಕ್ಕಿ ಲೈನ್ ಮನೆಯಲ್ಲಿ ವಾಸವಿದ್ದ ರೂಪ ಎಂಬವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರೂಪ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು ಪತಿ ಹರೀಶ್ ಆ್ಯಂಬುಲೆನ್ಸ್ ಗಾಗಿ ಹಡುಕಾಟ ನಡೆಸಿದ್ದಾರೆ. ಆದರೆ, ಸಮಯಕ್ಕೆ ಸರಿಯಾಗಿ ಯಾವುದೇ ಆ್ಯಂಬುಲೆನ್ಸ್ ಸಿಗದೆ ಆಸ್ಪತ್ರೆಗೆ ಕರೆದೊಯ್ಯಲು ಸಾಧ್ಯವಾಗದೇ ಏನು ಮಾಡಬೇಕೆಂದು ಹರೀಶ್‍ಗೆ ದಿಕ್ಕು ತೋಚದಂತಾಗಿದ್ದ ಸಮಯದಲ್ಲಿ ರೂಪ ಹೆಣ್ಣು ಮಗುವಿಗೆ ಮನೆಯಲ್ಲೇ ಜನ್ಮ ನೀಡಿದ್ದಾರೆ.
ನಂತರ ಬಾಣಂತಿ ಮತ್ತು ಮಗುವನ್ನು ಸಮಾಜ ಸೇವಕ ಆರೀಫ್ ಮೂಡಿಗೆರೆ ಆ್ಯಂಬುಲೆನ್ಸ್ ನಲ್ಲಿ ಕರೆತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ. ತಾಯಿ ಮತ್ತು ಮತ್ತು ಮಗು ಆರೋಗ್ಯವಾಗಿದ್ದಾರೆಂದು ಪತಿ ಹರೀಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್.ರಾಹುಲ್
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.