ಕಾಯ್ದೆ ವಿರುದ್ಧ ಧ್ವನಿ ಎತ್ತದ ಜನಪ್ರತಿನಿಧಿಗಳು: ಅಂಶುಮಂತ್
Team Udayavani, Sep 30, 2020, 7:00 PM IST
ಎನ್ ಆರ್ ಪುರ: ಜಿಲ್ಲೆಯ ಜನರ ಬದುಕಿಗೆ ಮಾರಕವಾಗಿರುವ ಪರಿಸರ ಸೂಕ್ಷ್ಮ ವಲಯದ ಬಗ್ಗೆ ಜವಾಬ್ದಾರಿ ಸ್ಥಾನದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಹಾಗೂ ತರೀಕೆರೆಯ ಬಿಜೆಪಿ ಶಾಸಕರು ಸದನದಲ್ಲಿ ಧ್ವನಿ ಎತ್ತಲಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಾ| ಕೆ.ಪಿ. ಅಂಶುಮಂತ್ ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಟಿ.ಡಿ. ರಾಜೇಗೌಡರು ಸದನದಲ್ಲಿ ದೊರೆತ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಕ್ಷೇತ್ರದ ಜನರ ಸಮಸ್ಯೆಯ ಬಗ್ಗೆ ಧ್ವನಿ ಎತ್ತುವ ಕೆಲಸ ಮಾಡಿದ್ದಾರೆ ಎಂದರು. ಪರಿಸರ ಸೂಕ್ಷ್ಮವಲಯ, ಮೀಸಲು ಅರಣ್ಯ 4(1) ಅ ಸೂಚನೆ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆಯವರು ಮೌನ ವಹಿಸಿರುವುದು ರೈತಪರ ಕಾಳಜಿ ತೋರಿಸುತ್ತದೆ ಎಂದು ವ್ಯಂಗ್ಯವಾಡಿದರು.
ಮೀಸಲು ಅರಣ್ಯ ಅಧಿಸೂಚನೆ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ನೀಡಿ ಬದ್ಧತೆಯಿಂದ ಅರಣ್ಯ ವ್ಯವಸ್ಥಾಪನಾ ಅ ಧಿಕಾರಿ ಸ್ಥಳಕ್ಕೆ ಬಂದುಅರ್ಜಿ ಸ್ವೀಕರಿಸಬೇಕೆಂದು ಆಗ್ರಹಿಸಿದರು. ಮೀಸಲು ಅರಣ್ಯಕ್ಕೆ ಆಕ್ಷೇಪಣೆ ಸಲ್ಲಿಸಲು ಕಾಂಗ್ರೆಸ್‌ನಿಂದ ಜನರಿಗೆ ಅರ್ಜಿ ನೀಡಿರುವ ವಿಚಾರದಲ್ಲಿ ಭ್ರಷ್ಟಾಚಾರವಿದೆ ಎಂದಿರುವ ಮಾಜಿ ಶಾಸಕ ಜೀವರಾಜ್ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ದೂರಿದರು. ರೈತರಿಗೆ ಭೂಮಿ ಕೊಡುವ ವಿಚಾರದಲ್ಲಿ ದಾಖಲೆಗಳನ್ನು ತಿದ್ದಿ ಲೋಕಾಯುಕ್ತದಲ್ಲಿ ತನಿಖೆ ಎದುರಿಸುತ್ತಿರುವವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದು ತಾ ಕಳ್ಳ ಪರರ ನಂಬ ಎಂಬ ಮಾತಿನಂತಿದೆ ಎಂದು ಆರೋಪಿಸಿದರು.
2008ರಲ್ಲಿ ತಾಲೂಕಿನ ರಾವೂರು,ಲಿಂಗಾಪುರ ಆಡುವಳ್ಳಿ ಮತ್ತಿತರ ಗ್ರಾಮಗಳಲ್ಲಿ ಖಾತೆ ಇದ್ದ ನೂರಾರು ಎಕರೆ ಕಂದಾಯ ಭೂಮಿ ಮೀಸಲು ಹಾಗೂ ಕಿರು ಅರಣ್ಯಕ್ಕೆ ಸೇರಿಸುವಾಗ ಶಾಸಕರಾಗಿದ್ದ ಜೀವರಾಜ್ ಸದನದಲ್ಲಿ ಏನು ಮಾಡುತ್ತಿದ್ದರುಎಂದು ಪ್ರಶ್ನಿಸಿದರು. ಪ್ರಜಾಪ್ರಭುತ್ವದ ದೇಗುಲವಾಗಿರುವ ಸದನದಲ್ಲಿ ಹಿಂದಿನ ಬಿಜೆಪಿ ಸರ್ಕಾರದಲ್ಲಿನ ಮೂವರು ಸಚಿವರು ಏನು ಮಾಡಿದ್ದರು ಎಂಬುದನ್ನು ಮಾಜಿ ಶಾಸಕರು ನೆನಪಿಸಿಕೊಳ್ಳಲಿ. ಶಾಸಕ ಟಿ.ಡಿ. ರಾಜೇಗೌಡರಿಗೆ ಅತ್ಯಂತ ಕನಿಷ್ಠ ಪದಗಳನ್ನು ಬಳಸಿ ಬೇಜವಾಬ್ದಾರಿಯಿಂದ ಹೇಳಿಕೆ ನೀಡಿರುವ ಮಾಜಿ ಶಾಸಕರಿಗೆ ತಿಳುವಳಿಕೆ ಕೊರತೆಯಿದೆ ಎಂದು ಆರೋಪಿಸಿದರು. ಮುಖಂಡರಾದ ಗೇರುಬೈಲು ನಟರಾಜ್, ಸದಾಶಿವ, ಪ್ರಶಾಂತ್ ಶೆಟ್ಟಿ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.