ಕೋವಿಡ್‌ ತಡೆಗೆ ಮುನ್ನೆಚ್ಚರಿಕೆ ವಹಿಸಿ : ಎಸಿ


Team Udayavani, Apr 7, 2021, 7:53 PM IST

m dfsda

ತರೀಕೆರೆ: ಕೊರೊನಾ ಎರಡನೇ ಅಲೆ ಆರಂಭವಾಗಿದೆ. ರೂಪಾಂತರಿ ವೈರಸ್‌ ಸಹ ದಾಳಿ ಮಾಡುತ್ತಿದೆ. ನಾವೆಲ್ಲರೂ ಎಚ್ಚರಿಕೆಯಿಂದ ಇರಬೇಕಾಗಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡು, ಮಾಸ್ಕ್ ಧರಿಸುವುದು ಮತ್ತು ಸ್ಯಾನಿಟೈಸ್‌ಮಾಡಿಕೊಂಡು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕಾದ ಜವಾಬ್ದಾರಿ ನಮ್ಮದಾಗಿದೆ ಎಂದು ಉಪವಿಭಾಗಾಧಿಕಾರಿ ಎ.ಸಿ.ರೇಣುಕಾಪ್ರ ಸಾದ್‌ ಹೇಳಿದರು.

ಪಟ್ಟಣದ ಮಿನಿ ವಿಧಾನಸೌಧದ ತಹಶೀಲ್ದಾರ್‌ ಕಚೇರಿಯಲ್ಲಿ ನಡೆದ ತಾಲೂಕು ಮಟ್ಟದ ಟಾಸ್‌ Rಫೋರ್ಸ್‌ ಸಭೆಯಲ್ಲಿ ಅವರು ಮಾತನಾಡಿದರು. ಕಳೆದ ವರ್ಷ ಮೊದಲ ಒಂದು ತಿಂಗಳು ಚಿಕ್ಕಮಗಳೂರು ಜಿಲ್ಲೆ ಹಸಿರು ವಲಯದಲ್ಲಿ ಗುರುತಿಸಿಕೊಂಡಿತ್ತು. ಲಾಕ್‌ಡೌನ್‌ನಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ಪುನಃ ಇಂತಹ ಪರಿಸ್ಥಿತಿ ಉಲ್ಬಣಗೊಳ್ಳದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಸರಕಾರ ಹಲವಾರು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರಂತೆ ನಮ್ಮ ಕೆಲಸ ನಿರ್ವಹಿಸಬೇಕು. ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ಮಾರ್ಷಲ್‌ಗ‌ಳನ್ನು ನೇಮಕ ಮಾಡಲಾಗಿದೆ. ದಂಡ ವಿಧಿ ಸುವುದು ಅವರಲ್ಲಿ ಅರಿವು ಮೂಡಿಸುವ ಕಾರಣಕ್ಕಾಗಿ. ಜನರು ಸಾಮಾಜಿಕ ಅಂತರ ಕಾಪಾಡಿಕೊಂಡು ಸರಕಾರ ರೂಪಿಸಿರುವ ನಿಯಮಗಳನ್ನು ಪಾಲಿಸಬೇಕು. ಜನಸಾಮಾನ್ಯರ ಹಿತದೃಷ್ಟಿಯಿಂದ ಕೆಲವು ಕಠಿಣ ನಿಯಮಗಳನ್ನು ನಾವು ಪಾಲಿಸಬೇಕಾಗಿದೆ ಎಂದರು.

ಮುಷ್ಕರ, ಧರಣಿ ಸತ್ಯಾಗ್ರಹ, ಜಾತ್ರೆ ಮತ್ತು ಸಂತೆಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ, ದೇವಸ್ಥಾನ ಇನ್ನಿತರ ಪೂಜಾ ಸ್ಥಳಗಳಲ್ಲಿ ಜನರು ಗುಂಪಾಗಿ ಹೋಗುವುದನ್ನೂ ನಿಷೇಧಿಸಿದೆ. ಜಾತ್ರೆ ಮಾಡುವವರು ಕೂಡ ಧಾರ್ಮಿಕ ವಿಧಿ-  ವಿಧಾನಗಳನ್ನು ಮಾತ್ರ ಅನುಸರಿಸಬೇಕು. ಗ್ರಾಮೀಣ ಭಾಗದಲ್ಲಿ ಜನಸಾಮಾನ್ಯರು ಮಾಸ್‌ ಧರಿಸದೆ ಓಡಾಡುತ್ತಿದ್ದಾರೆ. ಅವರಲ್ಲಿ ಅರಿವು ಮೂಡಿಸಿ ನಂತರ ದಂಡ ವಿಧಿ ಸಿ ಹಳ್ಳಿಗಳಿಗೆ ವಲಸೆ ಬರುವವರ ಮೇಲೆ ನಿಗಾ ಇರಲಿ ಎಂದರು.

ತಾಲೂಕು ವೈದ್ಯಾಧಿಕಾರಿ ಡಾ| ಚಂದ್ರಶೇಖರ್‌ ಮಾತನಾಡಿ, ಒಂದು ತಿಂಗಳ ಅವ ಧಿಯಲ್ಲಿ ತಾಲೂಕಿನಲ್ಲಿ 88 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಇವರಲ್ಲಿ 52 ಸಕ್ರಿಯ ಪ್ರಕರಣವಾಗಿವೆ. ಕಾಶಿಯಾತ್ರೆ ತೆರಳಿ ಹಿಂತಿರುಗಿ ಬಂದವರು ಸೋಂಕಿತರಾಗಿದ್ದಾರೆ.

ಸೋಂಕಿತರನ್ನು ಪರೀಕ್ಷೆ ಒಳಪಡಿಸಿ ಅವರನ್ನು ಕ್ವಾರಂಟೈನ್‌ ಮಾಡಲಾಗಿದೆ. ಮೊದಲ ಅಲೆಗಿಂತ ಎರಡನೇ ಕೊರೊನಾ ಸೋಂಕು ವೇಗವಾಗಿ ಹರುಡುತ್ತಿದೆ. ಇದನ್ನು ನಾವು ನಿಯಂತ್ರಿಸಬೇಕಾದಲ್ಲಿ ಜನಸಾಮಾನ್ಯರು ಕೊರೊನಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಿಕೊಳ್ಳಬೇಕ. 60 ವಯಸ್ಸು ಮೇಲ್ಪಟ್ಟವರು, ಮಧುಮೇಹಿಗಳು, ಅಸ್ತಮಾ, ಹೃದಯ ಸಂಬಂದಿ ಸಮಸ್ಯೆ ಇರುವವರು ಹೆಚ್ಚು ಎಚ್ಚರದಿಂದರಬೇಕು ಎಂದರು. ತಾಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೊನಾ ಟೆಸ್ಟ್‌ ನಡೆಸಲಾಗುತ್ತದೆ. ಆರೋಗ್ಯ ಕಾರ್ಯಕರ್ತರು, ಪೌರ ಕಾರ್ಮಿಕರು ಇವರನ್ನು ಒಳಗೊಂಡಂತೆ 60 ವರ್ಷ ಮೇಲ್ಪಟ್ಟ 11487 ಜನರಿಗೆ ಕೋವಿಶೀಲ್ಡ್‌ ಮತ್ತು ಕೋವ್ಯಾಕ್ಸಿನ್‌ ನೀಡಲಾಗಿದೆ.

45 ವರ್ಷ ಮೇಲ್ಪಟವರನ್ನು ಗುರುತಿಸಲಾಗಿದ್ದು ಇಲ್ಲಿಯ ತನಕ 4161 ಜನರಿಗೆ ಲಸಿಕೆ ನೀಡಲಾಗಿದೆ. 63000 ಜನರಿಗೆ ಲಸಿಕೆ ನೀಡಬೇಕಾಗಿದೆ. ಮೊದಲ ಲಸಿಕೆ ಪಡೆದವರು 6 ವಾರದ ನಂತರ ಎರಡನೇ ಲಸಿಕೆ ಪಡೆಯಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು 39 ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದ್ದು ಜನರು ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಪಡೆಯಬೇಕು ಎಂದರು. ತಹಶೀಲ್ದಾರ್‌ ಸಿ.ಜಿ. ಗೀತಾ ಮಾತನಾಡಿ, ಏರುಗತಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ.

ಈ ಹಿನ್ನಲೆಯಲ್ಲಿ ನಾವು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಾಗಿದೆ. ಕೊರೊನಾ ಟೆಸ್ಟ್‌ಗಳನ್ನು ಹೆಚ್ಚಾಗಿ ಮಾಡಬೇಕಾಗಿದೆ. ಮಾರ್ಷಲ್‌ಗ‌ಳನ್ನು ನೇಮಕ ಮಾಡಿದ್ದು ದಿನನಿತ್ಯದ ವರದಿಯನ್ನು ಸಂಜೆಯೊಳಗೆ ನೀಡಬೇಕು. ಮುನ್ನಚ್ಚೆರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲಾ ಇಲಾಖೆಯ ಅಧಿ ಕಾರಿಗಳು ಇತರ ಇಲಾಖೆಗಳೊಂದಿಗೆ ಸಮನ್ವಯತೆ ಸಾ ಧಿಸಿ ಕೆಲಸ ನಿರ್ವಹಿಸಬೇಕಾಗಿದೆ ಎಂದರು. ಸಭೆಯಲ್ಲಿ ಡಿವೈಎಸ್‌ಪಿ ಏಗನಗೌಡರ್‌, ಇಒ ದೇವೇಂದ್ರಪ್ಪ ಇಲಾಖಾ ಅಧಿ ಕಾರಿಗಳು, ಪಂಚಾಯ್ತಿ ಅಭಿವೃದ್ಧಿ ಅ ಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

9

Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ

8

Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.