ಕೋವಿಡ್ ಚಿಕಿತ್ಸೆಗೆ ಹೆಚ್ಚುವರಿ ಬಿಲ್: ಕ್ರಮಕ್ಕೆ ಮನವಿ
Team Udayavani, Sep 19, 2020, 8:06 PM IST
ಚಿಕ್ಕಮಗಳೂರು: ಕೋವಿಡ್ ಸೋಂಕು ಚಿಕಿತ್ಸೆ ನೆಪದಲ್ಲಿ ಹೆಚ್ಚುವರಿ ಬಿಲ್ ಪಡೆದಿರುವ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಹೆಚ್ಚುವರಿಯಾಗಿ ಪಡೆದಿರುವ ಹಣವನ್ನು ಸಂತ್ರಸ್ತ ಕುಟುಂಬಕ್ಕೆ ನೀಡಬೇಕೆಂದು ವಿವಿಧ ಸಂಘಟನೆಗಳು ಮತ್ತು ಸಂತ್ರಸ್ತ ಕುಟುಂಬಸ್ಥರು ಜಿಲ್ಲಾ ಧಿಕಾರಿ ಡಾ| ಬಗಾದಿ ಗೌತಮ್ ಅವರಿಗೆ ಮನವಿ ಸಲ್ಲಿಸಿದರು.
ಮೃತ ವ್ಯಕ್ತಿಯ ಸಂಬಂಧಿ ಎಚ್.ಒ. ಪ್ರಸನ್ನಕುಮಾರ್ ಎಂಬುವರು ಜಿಲ್ಲಾ ಧಿಕಾರಿಗೆ ಲಿಖೀತ ದೂರು ನೀಡಿ, ನನ್ನ ಮಾವ ನಂಜುಂಡಪ್ಪ ಅವರನ್ನು ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಮ್ಲಜನಕದ ಕೊರತೆ ಇದೆ ಎಂದು ಐಸಿಯೂಗೆ ಆಸ್ಪತ್ರೆ ಸಿಬ್ಬಂದಿ ದಾಖಲಿಸಿಕೊಂಡಿದ್ದರು. ಕೋವಿಡ್ ಆಂಟಿಜನ್ ಪರೀಕ್ಷೆ ಮಾಡಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಸಾಮಾನ್ಯ ವಾರ್ಡಿಗೆ ಸ್ಥಳಾಂತರ ಮಾಡಿದ್ದರು. ಮತ್ತೆ ಆಮ್ಲಜನಕದ ಕೊರತೆ ನೆಪಹೇಳಿ ಐಸಿಯುಗೆ ದಾಖಲಿಸಿದರು.
ಆಸ್ಪತ್ರೆಯವರು ಶವ ನೀಡಲು 9,25,600 ರೂ ಪಾವತಿಸುವಂತೆ ಒತ್ತಾಯಿಸಿದರು. ಅದರಂತೆ 9,25,600 ರೂ. ಪಾವತಿಸಿದ್ದೇವೆ ಎಂದು ತಿಳಿಸಿದ್ದಾರೆ. ಹೆಚ್ಚಿನ ಹಣ ವಸೂಲಿ ಮಾಡಿರುವ ಖಾಸಗಿ ಆಸ್ಪತ್ರೆಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೋವಿಡ್ ಚಿಕಿತ್ಸೆಗೆ ಹೆಚ್ಚುವರಿ ಬಿಲ್ ಪಡೆದಿರುವ ಬಗ್ಗೆ ಲಿಖೀತ ದೂರು ಬಂದಿದೆ. ಡಿಎಚ್‌ಒ ಡಾ| ಉಮೇಶ್ ಅವರಿಗೆ ತನಿಖೆ ನಡೆಸುವಂತೆ ಸೂಚನೆ ನೀಡಲಾಗಿದೆ. ಅವರು ಪರಿಶೀಲಿಸಿದ ಬಳಿಕ ನೀಡುವ ವರದಿಯ ಆಧಾರದ ಮೇಲೆ ಆಸ್ಪತ್ರೆಯ ಮೇಲೆ ಕ್ರಮ ಕೈಗೊಳ್ಳಲಾಗುವುದು.?- ಡಾ| ಬಗಾದಿ ಗೌತಮ್, ಜಿಲ್ಲಾಧಿಕಾರಿ
ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಕೋ ಚಿಕಿತ್ಸೆಗೆ ಸರ್ಕಾರ ನಿಗಪಡಿಸಿರುವುದಕ್ಕಿಂತ ಹೆಚ್ಚಿನ ಬಿಲ್ ಮಾಡಲಾಗಿದೆ. ಇಂತಹ ಅನ್ಯಾಯ ಬೇರೆ ಯಾರಿಗೂ ಆಗಬಾರದು. –ಮೃತ ನಂಜುಂಡಪ್ಪ ಸಂಬಂಧಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.