ಕೋವಿಡ್ : ಆಲ್ದೂರು ಸುತ್ತ ಹೆಚ್ಚಿದ ಆತಂಕ
Team Udayavani, May 21, 2020, 1:35 PM IST
ಆಲ್ದೂರು: ಕೋವಿಡ್ ಪಾಸಿಟಿವ್ ಪತ್ತೆಯಾದ ಮೂಡಿಗೆರೆ ವೈದ್ಯರಿಂದ ಚಿಕಿತ್ಸೆ ಪಡೆದ ಆಲ್ದೂರಿನ ಸುತ್ತಮುತ್ತಲಿನ ಗ್ರಾಮಗಳ ಜನರಲ್ಲಿ ಆತಂಕ ಮನೆ ಮಾಡಿದೆ. ಆಲ್ದೂರು ಸುತ್ತಮುತ್ತಲಿನ ಕೆಲವು ಗ್ರಾಮಗಳ ಗ್ರಾಮಸ್ಥರು ಈ ವೈದ್ಯರಿಂದ ಚಿಕಿತ್ಸೆ ಪಡೆದಿದ್ದಾರೆ ಎಂಬ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಜನ ಆತಂಕಕ್ಕೆ ಒಳಗಾಗಿದ್ದಾರೆ.
ಐದಳ್ಳಿ ಗ್ರಾಮದಲ್ಲಿ ನಡೆದ ಸಮಾರಂಭವೊಂದಕ್ಕೆ ಬಂದಿದ್ದ ಮಾಕೋನಹಳ್ಳಿ ಗ್ರಾಮದ ವಕ್ತಿಯೋರ್ವ ಮೂಡಿಗೆರೆ ವೈದ್ಯರಿಂದ ಚಿಕಿತ್ಸೆ ಪಡೆದಿದ್ದು ಈ ಕಾರ್ಯಕ್ರಮದಲ್ಲಿ ಆಲ್ದೂರು, ಬನ್ನೂರು ಹಾಗೂ ಸುತ್ತಲಿನ ಗ್ರಾಮಗಳ ಜನರು ಪಾಲ್ಗೊಂಡಿದ್ದರು ಎನ್ನಲಾಗಿದೆ. ಹೊಲದಬೈಲ್ ಗ್ರಾಮದ ಕಾಫಿ ತೋಟವೊಂದರ ಕಾರ್ಮಿಕ ಕೆಲಸ ಮಾಡುವಾಗ ಕಾಲಿಗೆ ಪೆಟ್ಟು ಮಾಡಿಕೊಂಡು ಈ ವೈದ್ಯರ ಬಳಿ ಸೋಮವಾರವಷ್ಟೇ ಚಿಕಿತ್ಸೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವೈದ್ಯರ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ ವ್ಯಕ್ತಿಗಳು ಆಲ್ದೂರು ಸುತ್ತಮುತ್ತ ಎಷ್ಟು ಜನರ ಜೊತೆ ಸಂಪರ್ಕ ಹೊಂದಿದ್ದಾರೆ ಎಂಬ ಮಾಹಿತಿ ಸಧ್ಯ ನಿಗೂಢವಾಗಿದ್ದು ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆಯುತ್ತಿದೆ.
ಆಲ್ದೂರು ಸುತ್ತಮುತ್ತಲಿನ ಗ್ರಾಮಗಳ ಜನರು ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದರೂ ಮಾಹಿತಿ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಚಿಕಿತ್ಸೆ ಪಡೆದವರು ಭಯ ಬಿಟ್ಟು ಸ್ಥಳೀಯ ವೈದ್ಯಾಧಿಕಾರಿಗಳು, ಆಸ್ಪತ್ರೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರಿಗೆ ಮಾಹಿತಿ ನೀಡಬೇಕು. ಮೂಡಿಗೆರೆ ವೈದ್ಯರಿಂದ ಚಿಕಿತ್ಸೆ ಪಡೆದಿದ್ದ ಆಗಳ ಗ್ರಾಮದ 3 ಜನ ಹಾಗೂ ಐದಳ್ಳಿ ಗ್ರಾಮದ 3 ಜನ ಸೇರಿ ಒಟ್ಟು 6 ಜನರನ್ನು ಮೂಡಿಗೆರೆ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ಆಲ್ದೂರು ಸರ್ಕಾರಿ ಆಸ್ಪತ್ರೆ ವೈದ್ಯ ಡಾ| ಚಾಲುಕ್ಯ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.