ಕೋವಿಡ್ ಭೀತಿ; ಮನೆಯಿಂದ ಹೊರಬರಲು ಜನರ ಹಿಂದೇಟು
Team Udayavani, May 23, 2020, 4:15 PM IST
ಆಲ್ದೂರು: ಮೂಡಿಗೆರೆ ವೈದ್ಯರೊಬ್ಬರ ಕೋವಿಡ್ ಪಾಸಿಟಿವ್ ಪ್ರಕರಣದಿಂದ ಆಲ್ದೂರು ಸುತ್ತಮುತ್ತ ಜನ ಬೆಚ್ಚಿಬಿದ್ದಿದ್ದು ಜನ ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ.
ನಾಲ್ಕನೇ ಹಂತದ ಲಾಕ್‌ಡೌನ್ ಘೋಷಣೆ ಮಾಡಿದರೂ ಸಹ ಜನರನ್ನು ಮನೆಯಿಂದ ಹೊರಬರದಂತೆ ತಡೆಯಲು ಸಾಧ್ಯವಾಗಿರಲಿಲ್ಲ. ಜನರನ್ನು ಮನೆಯಲ್ಲೇ ಇರುವಂತೆ ಮಾಡಲು ಎಲ್ಲಾ ರೀತಿಯ ತಂತ್ರಗಳನ್ನು ಸರಕಾರ ಮಾಡಿದರೂ ಜನರು ಸುಖಾ ಸುಮ್ಮನೆ ಮನೆಯಿಂದ ಹೊರಬರುತ್ತಿದ್ದು ಇವರನ್ನು ನಿಯಂತ್ರಿಸುವುದು ಪೊಲೀಸ್ ಇಲಾಖೆಗೆ ದೊಡ್ಡ ತಲೆ ನೋವಾಗಿತ್ತು. ಕೆಲವರಿಗೆ ಲಾಠಿ ರುಚಿ ತೋರಿಸಿದರೆ, ಮತ್ತೆ ಕೆಲವರ ವಾಹನಗಳನ್ನು ವಶಕ್ಕೆ ಪಡೆದು ಕೇಸು ದಾಖಲಿಸಿದರೂ ಸಹ ನಿಯಂತ್ರಿಸಲು ಸಾಧ್ಯವಾಗಿರಲಿಲ್ಲ. ಚೆಕ್‌ಪೋಸ್ಟ್ ಗಳನ್ನು ಹಾಕಿ ವಾಹನಗಳ ತಪಾಸಣೆ ಮಾಡಲಾಗುತ್ತಿದ್ದರೂ ಜನರನ್ನು ನಿಯಂತ್ರಿಸಲು ಕಷ್ಟಪಡಬೇಕಿತ್ತು. ಆದರೆ ಮೂಡಿಗೆರೆ ವೈದ್ಯರಿಗೆ ಕೋವಿಡ್ ಪಾಸಿಟಿವ್ ಬಂದ ದಿನದಿಂದ ಜನರು ಸ್ವಯಂ ಬಂದಿಯಾಗಿದ್ದಾರೆ. ಜನರ ಓಡಾಟ ವಿರಳವಾಗುತ್ತಿದ್ದು ವಾಹನಗಳ ಓಡಾಟ ಕಡಿಮೆಯಾಗಿದೆ. ಬೆರಳೆಣಿಕೆಯ ಜನ ಮಾತ್ರ ಪಟ್ಟಣದಲ್ಲಿ ಕಂಡು ಬರುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.