Mudigere ಮನೆಗೆ ನುಗ್ಗಿದ ಇನ್ನೋವಾ ಕಾರು; ಕುಸಿದು ಬಿದ್ದ ಮನೆಯ ಗೋಡೆ
Team Udayavani, Nov 29, 2023, 5:38 PM IST
ಮೂಡಿಗೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿವೇಗವಾಗಿ ಚಲಿಸಿದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಯೊಳಗೆ ನುಗ್ಗಿದ ಘಟನೆ ಕೊಟ್ಟೆಗೆಹಾರ ಸಮೀಪ ಬಿದರಹಳ್ಳಿ ಗ್ರಾಮದಲ್ಲಿ ಸೋಮವಾರ ಘಟನೆ ನಡೆದಿದೆ.
ಮಂಗಳೂರು-ವಿಲ್ಲೂಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿತ್ರದರ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದಿದೆ.
ಸೋಮವಾರ ರಾತ್ರಿ ಸುಮಾರು 1-30ರ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಚಾಲಕನು ನಿದ್ರೆಯ ಮಂಪರಿನಿಂದ ಈ ಅವಘಡ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಹೆದ್ದಾರಿ ಬದಿಯಲ್ಲಿ ಇರುವ ಬಿದರಹಳ್ಳಿಯ ಹನೀಫ್ ಎಂಬುವವರ ಮನೆಗೆ ಡಿಕ್ಕಿ ಹೊಡೆದ ರಭಸಕ್ಕೆ ಮನೆಯ ಗೋಡೆ ಕುಸಿದು ಬಿದ್ದಿದೆ. ಪಕ್ಕದಲ್ಲಿಯೇ ವಿದ್ಯುತ್ ಕಂಬಗಳು ಇದ್ದು ವಿದ್ಯುತ್ ಕಂಬವೊಂದು ತುಂಡಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇನ್ನೋವಾ ಹೈಬ್ರೀಡ್ ಕಾರಿನಲ್ಲಿ ಚಿತ್ರದುರ್ಗ ಮೂಲದ ಕುಟುಂಬದವರು ಧರ್ಮಸ್ಥಳದ ಕಡೆಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.