ಸಂತ್ರಸ್ತರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ
•ಸರ್ಕಾರಕ್ಕೆ ಶಾಸಕ ಸಿ.ಟಿ.ರವಿ ಆಗ್ರಹ•ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ
Team Udayavani, Aug 13, 2019, 2:48 PM IST
ಚಿಕ್ಕಮಗಳೂರು : ಶಾಸಕ ಸಿ.ಟಿ.ರವಿ, ಕುಮಾರಸ್ವಾಮಿ, ಎಂ.ಎಲ್.ಸಿ. ಪ್ರಾಣೇಶ್ ಮೂಡಿಗೆರೆ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಚಿಕ್ಕಮಗಳೂರು: ಮಳೆಯಿಂದ ಹಾನಿಗೊಳಗಾದ ಪ್ರದೇಶ ಹಾಗೂ ಸಂತ್ರಸ್ತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಶಾಸಕ ಸಿ.ಟಿ.ರವಿ ಆಗ್ರಹಿಸಿದರು.
ಸೋಮವಾರ ಮೂಡಿಗೆರೆ ತಾಲೂಕಿನಲ್ಲಿ ಅತಿವೃಷ್ಟಿಯಿಂದ ಹಾನಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಯಾವುದೇ ಸಂತ್ರಸ್ತರನ್ನು ಕಚೇರಿಗೆ ಅಲೆದಾಡಿಸಬಾರದು. ಗ್ರಾಮ ಪಂಚಾಯತ್‌ನಲ್ಲೇ ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳನ್ನು ವಿಶೇಷ ಅಧಿಕಾರಿಗಳನ್ನಾಗಿ ನೇಮಿಸಿ ಎನ್‌ಜಿಒಗಳ ಸಹಕಾರ ಪಡೆದು ಶೀಘ್ರದಲ್ಲಿ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು ಎಂದರು.
ಕಾನೂನು ನಿಯಮಗಳನ್ನು ನೋಡಿದರೆ ನಾವು ನಿರಾಶ್ರಿತರ ಕೇಂದ್ರಗಳನ್ನು ತೆರೆಯಲು ಮಾತ್ರ ಸಾಧ್ಯ. ಅವರ ಬದುಕು ಕಟ್ಟಿಕೊಡಲು ಸಾಧ್ಯವಿಲ್ಲ. ಯಾವುದೇ ದಾಖಲೆಗಳನ್ನು ಕೇಳದೆ ಪರಿಹಾರ ನೀಡಬೇಕು. ಮನೆ-ಮಠ ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಅವರು ದಾಖಲೆ ಎಲ್ಲಿಂದ ತರುತ್ತಾರೆ. ಆದ್ದರಿಂದ, ದಾಖಲೆಗಳಿಗಾಗಿ ಅಲೆದಾಡಿಸದೆ ಅಧಿಕಾರಿಗಳು ಕೆಲಸ ಮಾಡಿಕೊಡಬೇಕು ಎಂದು ಸೂಚನೆ ನೀಡಿದರು.
ಮಲೆನಾಡು ಭಾಗದಲ್ಲಿ ಮಳೆಯಿಂದ ಅಪಾರ ಪ್ರಮಾಣದ ಹಾನಿಯಾಗಿದೆ. ಜನರು ನೂರಾರು ಎಕರೆ ಜಮೀನು ಕಳೆದುಕೊಂಡಿದ್ದಾರೆ. ಬದುಕು ಕಳೆದುಕೊಂಡಿರುವವರ ಬದುಕಿಗೆ ನೆರವಾಗಲು ಸರ್ವ ಪ್ರಯತ್ನ ಮಾಡಲಾಗುವುದು ಎಂದರು.
ಆಗಸ್ಟ್ 16 ಅಥವಾ 17ರಂದು ಜನಪ್ರತಿನಿಧಿಗಳ ಸಭೆ ನಡೆಸುವಂತೆ ಜಿಲ್ಲಾಧಿಕಾರಿಗೆ ತಿಳಿಸಲಾಗಿದೆ. ನೀವು ಒಂದು ವಾರ ನಮಗೆ ಆಶ್ರಯ ನೀಡುತ್ತೀರಾ. ಆ ನಂತರ ನಾವು ಎಲ್ಲಿಗೆ ಹೋಗುವುದು ಎಂದು ಗ್ರಾಮಸ್ಥರು ಪ್ರಶ್ನಿಸುತ್ತಿದ್ದಾರೆ. ಈ ಪ್ರಶ್ನೆ ಮತ್ತೆ ಉದ್ಭವ ಆಗಬಾರದು. ಆ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ತಿಳಿಸಿದರು.
ಸದ್ಯದಲ್ಲಿಯೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಲ್ಲೆಗೆ ಭೇಟಿ ನೀಡುವುದಾಗಿ ಹೇಳಿದ್ದಾರೆ. ಅವರಿಗೆ ಈ ಪ್ರಮಾಣದಲ್ಲಿ ಹಾನಿಯಾಗಿರುವ ಸ್ಥಳಗಳಿಗೆ ಕರೆ ತರಬೇಕು. ಆಗ ಅವರಿಗೆ ಹಾನಿಯ ಪ್ರಮಾಣದ ಮನವರಿಕೆ ಆಗುತ್ತದೆ. ಹಿರಿಯ ಅಧಿಕಾರಿಗಳು ಇಂತಹ ಪ್ರದೇಶಗಳಿಗೆ ಭೇಟಿ ನೀಡಿ ಪರೀಶಿಲನೆ ನಡೆಸಬೇಕು. ಆಗ ವಾಸ್ತವ ಸ್ಥಿತಿಯ ಅರಿವಾಗುತ್ತದೆ ಎಂದರು.
ಅಧಿಕಾರಿಗಳು ಶಕ್ತಿಮೀರಿ ಕೆಲಸ ಮಾಡಬೇಕು. ಯಾರು ಕೂಡ ಭಯಪಡುವ ಅಗತ್ಯವಿಲ್ಲ. ನಾವು ನಿಮ್ಮೊಂದಿಗೆ ಇದ್ದೇವೆ. ಎಲ್ಲರೂ ಒಟ್ಟಾಗಿ ಎಲ್ಲವನ್ನು ಕಳೆದುಕೊಂಡವರ ಬದುಕು ಕಟ್ಟೋಣ ಎಂದರು. ಜಿಲ್ಲಾ ಮುಖಂಡರ ನಿಯೋಗವನ್ನು ಮುಖ್ಯಮಂತ್ರಿಗಳ ಬಳಿಗೆ ತಗೆದುಕೊಂಡು ಹೋಗಲಾಗುವುದು. ಮೃತಪಟ್ಟವರಿಗೆ ಐದು ಲಕ್ಷ ಪರಿಹಾರ ನೀಡಲಾಗುವುದು. ಮೂರು ದಿನ ಸಾಲು ಸಾಲು ರಜೆ ಬಂದಿದ್ದರಿಂದ ಸದ್ಯಕ್ಕೆ ಬ್ಯಾಂಕ್‌ನೊಂದಿಗೆ ಮಾತನಾಡಿ ತುರ್ತು ಪರಿಸ್ಥಿತಿ ನಿಭಾಯಿಸಲು ಒಂದು ಲಕ್ಷ ರೂ.ಅನ್ನು ರಜೆಯ ದಿನದಲ್ಲೂ ಕೊಡಿಸಲಾಗಿದೆ ಎಂದರು.
ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್, ಮೂಡಿಗೆರೆ ತಾಲೂಕು ಪಂಚಾಯತ್ ಅಧ್ಯಕ್ಷ ರತನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.