ಹಂದಿಗೋಡು ಸಂತ್ರಸ್ತರ ನೆರವಿಗೆ ಯತ್ನ: ಎಸಿ


Team Udayavani, Dec 6, 2018, 4:22 PM IST

bell-2.jpg

ಸಾಗರ: ಎಲ್ಲಾ ಹಂದಿಗೋಡು ಕಾಯಿಲೆ ಸಂತ್ರಸ್ತರ ಬವಣೆಗಳ ಕುರಿತು ಸರ್ಕಾರಕ್ಕೆ ವಿವರವಾದ ವರದಿ ಸಲ್ಲಿಸಿ ಅಗತ್ಯ ನೆರವು ಕೊಡಿಸಲು ಪ್ರಯತ್ನಿಸುತ್ತೇನೆ ಎಂದು ಸಾಗರ ಉಪ ವಿಭಾಗದ ಸಹಾಯಕ ಆಯುಕ್ತ ದರ್ಶನ್‌ ಭರವಸೆ ನೀಡಿದರು. ತಾಲೂಕಿನ ಹಂದಿಗೋಡು ಹಾಗೂ ಬಂದಗದ್ದೆ ಗ್ರಾಮಕ್ಕೆ ಭೇಟಿ ನೀಡಿದ ಅವರು ಸಂತ್ರಸ್ತರನ್ನು ಭೇಟಿಯಾಗಿ ಅಹವಾಲು ಸ್ವೀಕರಿಸಿ, ಆಡಳಿತ ಜನಪರವಾಗಿ ಸಮಸ್ಯೆಯ ಪರಿಹಾರಕ್ಕೆ ಸಂಪೂರ್ಣ ಪ್ರಯತ್ನ ಮಾಡುತ್ತದೆ ಎಂದರು.

ಹಂದಿಗೋಡು ಕಾಯಿಲೆ ಸಂತ್ರಸ್ತರ ಕ್ಷೇಮಾಭಿವೃದ್ಧಿ ಸಂಘದ ರಾಜೇಂದ್ರ ಬಂದಗದ್ದೆ ಮಾತನಾಡಿ, ಕಳೆದ 40 ವರ್ಷಗಳಿಂದ ಈ ಕಾಯಿಲೆ ಅಸ್ತಿತ್ವದಲ್ಲಿದ್ದು ಈವರೆಗೂ ಇದಕ್ಕೆ ಕಾರಣ ಕಂಡುಹಿಡಿಯಲು ಸಾಧ್ಯವಾಗಿಲ್ಲ. ಸಂತ್ರಸ್ತರು ಭವಿಷ್ಯದ ಬಗ್ಗೆ ದಿಕ್ಕೇ ತೋಚದಂತಾಗಿದ್ದಾರೆ.

ದೈಹಿಕ ಬೆಳವಣಿಗೆ ನಿಂತು ಕುಬ್ಜರಾಗಿರುವ ಅವರು ಮೊಣಕಾಲು ಹಾಗೂ ದೇಹದ ಇತರ ಕೀಲು, ಸಂದಿಗಳಲ್ಲಿ ಯಮಯಾತನೆಯ ನೋವು ಅನುಭವಿಸುತ್ತಿದ್ದಾರೆ. ಕೆಲವರು ಕುಳಿತುಕೊಳ್ಳಲು ಆಗದೆ ತೆವಳುವ ಸ್ಥಿತಿಗೆ ಬಂದಿದ್ದಾರೆ ಎಂದು ವಿವರಿಸಿದರು.

ನೋವು ತಡೆಯಲಾಗದೆ ಹೆಚ್ಚಿನ ಪ್ರಮಾಣದಲ್ಲಿ ನೋವು ನಿವಾರಕ ಗುಳಿಗೆ ಸೇವಿಸುತ್ತಿದ್ದಾರೆ. ಇದರಿಂದಾಗಿ ಹಲವರು ಅಂಗವೈಫಲ್ಯದಿಂದ ಮರಣಕ್ಕೆ ತುತ್ತಾಗಿದ್ದಾರೆ. ಮಲ ಮೂತ್ರ ವಿಸರ್ಜನೆಗೆ ಸಂತ್ರಸ್ತರು ಯಾತನೆ ಪಡುವಂತಾಗಿದೆ. ಸಂತ್ರಸ್ತರಿಗೆ ರಾಜ್ಯ ಸರ್ಕಾರ ಕನಿಷ್ಠ ಮಾಸಿಕ 5 ಸಾವಿರ ರೂ. ಮಾಸಾಶನ ನೀಡಬೇಕು. ಸಂತ್ರಸ್ತರು ಸ್ವಯಂ ಉದ್ಯೋಗ ಕೈಗೊಳ್ಳಲು ನೆರವು ನೀಡಬೇಕು. ಈಗಾಗಲೇ ಹಲವು ಸಂತ್ರಸ್ತರು ಸ್ವ-ಸಹಾಯ ಸಂಘಗಳಲ್ಲಿ ಹೇರಳ ಬಡ್ಡಿ ದರ ನೀಡಿ ಸಾಲ ಪಡೆದಿದ್ದು ಅದನ್ನು ತೀರಿಸಲಾಗದ ಸ್ಥಿತಿಯಲ್ಲಿದ್ದಾರೆ. ಸರ್ಕಾರ ಈ ಸಾಲವನ್ನು ಮನ್ನಾ ಮಾಡಬೇಕು ಎಂದು ಮನವಿ ಮಾಡಿದರು. 

ಸಾಮಾಜಿಕ ಕಾರ್ಯಕರ್ತ ಎಚ್‌.ಎಂ. ಚಂದ್ರಶೇಖರ್‌ ಹಂದಿಗೋಡು, ದಲಿತ ಸಂಘರ್ಷ ಸಮಿತಿ ಪ್ರಮುಖರಾದ ನಾರಾಯಣ ಗೋಳಗೋಡು, ನಾರಾಯಣ ಅರಮನೆ ಕೇರಿ ಇದ್ದರು. 

ಟಾಪ್ ನ್ಯೂಸ್

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

19-naxalite

Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ

17-2

ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.