ಶಿಕ್ಷಕರ ಹೆಚ್ಚುವರಿ ಹೊಣೆಗಾರಿಕೆ ತಪ್ಪಿಸಿ


Team Udayavani, Dec 11, 2018, 4:00 PM IST

chikk.jpg

ತರೀಕೆರೆ: ಶಿಕ್ಷಕರನ್ನು ಸರಕಾರ ಚುನಾವಣೆ, ಜನಗಣತಿ, ಬಿಸಿಯೂಟ ಇನ್ನೂ ಮುಂತಾದ ಕೆಲಸಗಳಿಗೆ ಬಳಸಿಕೊಳ್ಳುತ್ತಿದೆ. ಇದು ಸರಿಯಲ್ಲ. ಶಿಕ್ಷಕರನ್ನು ಶಿಕ್ಷಣ ನೀಡುವುದಕ್ಕಾಗಿಯೇ ಇರಿಸಬೇಕು ಎಂದು ಸಮ್ಮೇಳನಾಧ್ಯಕ್ಷ ಕನ್ನಡಶ್ರೀ ಬಿ.ಎಸ್‌.ಭಗವಾನ್‌ ಹೇಳಿದರು.

ಅವರು ಪಟ್ಟಣದ ಶೃಂಗೇರಿ ಶಾರದಾ ಸಭಾಭವನದಲ್ಲಿ ಸೋಮವಾರ ನಡೆದ 16ನೇ ತಾಲೂಕು ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಸರಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಸೌಲಭ್ಯಗಳನ್ನು ನೀಡುತ್ತಿರುವುದು ಶ್ಲಾಘನೀಯ. ಆದರೆ ಪಾಠ ಪ್ರವಚನಗಳಿಗೂ ಆದ್ಯತೆ
ನೀಡಬೇಕಾಗಿದೆ. ಶಾಲೆಗಳಲ್ಲಿ ಫಲಿತಾಂಶಗಳನ್ನು ಗಮನಿಸಿದಾಗ ಖಾಸಗಿ ಶಾಲೆಗೂ ಮತ್ತು ಸರಕಾರಿ ಶಾಲೆಗೂ ಅಜಗಜಾಂತರ ವ್ಯತ್ಯಾಸವಿದೆ. ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು. ಪೋಷಕರಲ್ಲಿರುವ ಆಂಗ್ಲ ವ್ಯಾಮೋಹ ಸರಿಯಲ್ಲ. ಕನ್ನಡ ಮಾಧ್ಯಮ ಶಾಲೆಗಳಿಗೆ ಮಕ್ಕಳನ್ನು ಸೇರಿಸಬೇಕು. ಅಧಿಕಾರಿಗಳು ಮತ್ತು ರಾಜಕಾರಣಿಗಳು ಕನ್ನಡದ ಅನ್ನದ ಋಣವನ್ನು ತೀರಿಸಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ಪುಸ್ತಕಗಳನ್ನು ಕೊಂಡು ಓದುವ ಹವ್ಯಾಸ ಕಡಿಮೆಯಾಗುತ್ತಿದೆ. ಮಕ್ಕಳು ಸಾಮಾಜಿಕ ಜಾಲ ತಾಣಗಳಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಇದರಿಂದ ಕನ್ನಡ ಭಾಷೆಯ ಮೇಲೆ ಪರಿಣಾಮ ಬೀರುತ್ತಿದೆ ಎಂದರು.

ಪಟ್ಟಣ ಅಭಿವೃದ್ಧಿ ಯಾಗಬೇಕಿದೆ. ಕುಡಿಯುವ ನೀರಿನ ಸೌಕರ್ಯ, ರಸ್ತೆ ಅಗಲಿಕರಣವಾದರೂ ಅಭಿವೃದ್ಧಿ ಯಾಗದಿರುವುದು, ಸ್ವಾತಂತ್ರ್ಯಾ ಪೂರ್ವದಿಂದಲೂ ಇರುವ ರೈಲ್ವೆ ನಿಲ್ದಾಣ ರೈಲ್ವೆ ಇಲಾಖೆಯ ಅವಕೃಪೆಗೆ ಪಾತ್ರವಾಗಿದೆ. ಇಲ್ಲಿ ಮೂಲ ಸೌಕರ್ಯಗಳ ಕೊರತೆ ಕಾಣುತ್ತಿದೆ. ಈ ಬಗ್ಗೆ ಜನಪ್ರತಿನಿಧಿ ಗಳು ತಮ್ಮ ರಾಜಕೀಯ ಇಚ್ಚಾಶಕ್ತಿ ತೋರಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಡಿ.ಎಸ್‌. ಸುರೇಶ್‌, ಕನ್ನಡನಾಡು, ನುಡಿ, ಭಾಷೆ ಬಗ್ಗೆ ಎಲ್ಲರೂ ಒಟ್ಟಾಗಿ ಶ್ರಮಿಸಬೇಕಾಗಿದೆ. ಕಚೇರಿಗಳಲ್ಲಿ ಕನ್ನಡ ಭಾಷೆ ಕಡ್ಡಾಯವಾಗಬೇಕಿದೆ. ಕನ್ನಡ ಸಾಹಿತ್ಯ ಒಂದು ವಿಶಿಷ್ಠವಾದ ಕ್ಷೇತ್ರ. ಬಿ.ಎಸ್‌.ಭಗವಾನ್‌ ಅವರು ಓರ್ವ ವಿಶಿಷ್ಠವಾದ ವ್ಯಕ್ತಿ. ತಮ್ಮ ಕೆಲಸಗಳ ಮೂಲಕ ಕನ್ನಡ ನುಡಿಗೆ ವಿಶೇಷವಾದ ಸೇವೆ ಸಲ್ಲಿಸಿದ್ದಾರೆ. ಅಂತಹವರು ಇಂದಿನ ಸಮ್ಮೇಳನಾಧ್ಯಕ್ಷರಾಗಿರುವುದು ಹೆಮ್ಮೆಯ ಸಂಗತಿ ಎಂದರು.

ಪಟ್ಟಣದ ನೀರಿನ ಸಮಸ್ಯೆ ಬಗೆಹರಿಸಲು 75 ಕೋಟಿ ವೆಚ್ಚದ 4ನೇ ಹಂತದ ಯೋಜನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೇ ಇದರ ವಿಸ್ತೃತ ವರದಿ ಸಿದ್ದಪಡಿಸಲಾಗಿದೆ. ಸರಕಾರ ಶೀಘ್ರಅನುಮೋದನೆ ನೀಡಲಿದೆ ಎಂದರು.

ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ ಮಾತನಾಡಿ, ರಾಜಕೀಯವಾಗಿ ಕನ್ನಡದ ಏಕೀಕರಣವಾಗಿದೆ ಆದರೆ ಇನ್ನೂ ಕೂಡ ಭಾವನಾತ್ಮಕವಾಗಿ ಏಕೀಕರಣವಾಗಿಲ್ಲ. ಅಲ್ಲಲ್ಲಿ ಅಗ್ಗಾಗ್ಗೆ ಪ್ರತ್ಯೇಕತೆ ಕೂಗು ಏಳುತ್ತಿವೆ. ಇದು ಸಲ್ಲದು. ಎಲ್ಲರೂ ಇಲ್ಲಿನ ಜಲ,ನೆಲ, ಭಾಷೆ ನಮ್ಮದು ಎಂದು ಭಾವಿಸಬೇಕು ಎಂದು ಅಭಿಪ್ರಾಯಟ್ಟರು.

 ಸಾಹಿತ್ಯ ಪರಿಷತ್‌ ವಿವಿಧ ಸ್ತರಗಳಲ್ಲಿ ಸೇವೆ ಸಲ್ಲಿಸಿದ ಎಲ್ಲರನ್ನೂ ಗೌರವಿಸುತ್ತದೆ. ಸಾಹಿತ್ಯ, ಸಂಗೀತ ಮತ್ತು ಭಾಷೆ ಹೃದಯ ತಟ್ಟುವ ಕೆಲಸ ಮಾಡುತ್ತದೆ ಎಂದರು. ಎಪಿಎಂಸಿ ಅಧ್ಯಕ್ಷ ಮಾತನಾಡಿ, ಸಾಮಾಜಿಕ ಜಾಲತಾಣ ಮತ್ತು ಟಿವಿ ಮಾಧ್ಯಮ ಓದುಗರನ್ನು ಕಡಿಮೆ ಮಾಡುತ್ತಿದೆ. ಹಿಂದಿನ
ದಿನಗಳಲ್ಲಿ ಪುಸ್ತಕಗಳನ್ನು ಓದುತ್ತಿದ್ದೇವು. ಅವು ಇಂದು ಮರೆಯಾಗಿದೆ ಎಂದರು. ತಾಲೂಕು ಜನತಾ ದಳದ ಅಧ್ಯಕ್ಷ ಎಂ.ನರೇಂದ್ರ, ಕನ್ನಡ ಸಂಘಟನೆಯ ಬಿ.ಪಿ.ವಿಕಾಸ್‌, ವಕೀಲ ಜಿ.ಸುಬ್ರಹ್ಮಣ್ಯ, ತಾ.ಪಂ ಅಧ್ಯಕ್ಷೆ ಪದ್ಮಾವತಿ ಮಾತನಾಡಿದರು. ಮಾಜಿ ಜಿಲ್ಲಾ ಕಸಾಪ ಅಧ್ಯಕ್ಷ ಶಿವಸ್ವಾಮಿ, ಎಚ್‌.ಚಂದ್ರಪ್ಪ, ಆಕಾಶವಾಣಿ ನಿರ್ದೇಶಕ ಶಂಕರನಾರಾಯಣ, ಜಿ.ಟಿ.ರಮೇಶ್‌, ಸೋಮಶೇಖರ್‌, ಶ್ಯಾಮಲಾ ಮಂಜುನಾಥ್‌, ಕಸಾಪ ಅಧ್ಯಕ್ಷ ನಾಗೇನಹಳ್ಳಿ ತಿಮ್ಮಯ್ಯ ಇದ್ದರು.

ಶ್ರೀ ಸಾಲುಮರದಮ್ಮ ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆಯನ್ನು ಕೆಪಿಸಿಸಿ ಸದಸ್ಯ ಟಿ.ವಿ.ಶಿವಶಂಕರಪ್ಪ ಮತ್ತು ಮಾಜಿ ಪುರಸಭಾಧ್ಯಕ್ಷ ಉಮರ್‌ ಫಾರೂಕ್‌ ಉದ್ಘಾಟಿಸಿದರು. ಶೃಂಗರಿಸಿದ ರಥದಲ್ಲಿ ಲಕ್ಷ್ಮೀ ಭಗವಾನ್‌ ಮತ್ತು ಭಗವಾನ್‌ ಅವರನ್ನು ಅದ್ದೂರಿ ಮೆರವಣಿಗೆಯಲ್ಲಿ ವೇದಿಕೆ ಕರೆ ತರಲಾಯಿತು.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

19-naxalite

Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ

17-2

ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

3

Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.