ಮಲೇರಿಯಾ ವಿರೋಧಿ ಮಾಸಾಚರಣೆ
Team Udayavani, Jun 18, 2020, 6:02 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬಾಳೆಹೊನ್ನೂರು: ಸೊಳ್ಳೆಗಳ ನಿಯಂತ್ರಣದಿಂದ ಮಲೇರಿಯಾ, ಡೆಂಘೀ ಜ್ವರ ಹಾಗೂ ಚಿಕನ್ ಗುನ್ಯದಂತಹ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದೆಂದು ಬಾಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಭಗವಾನ್ ತಿಳಿಸಿದರು.
ಸಮೀಪದ ಮಾಗುಂಡಿ ಗ್ರಾಪಂ ವ್ಯಾಪ್ತಿಯ ಮಹಲ್ಗೋಡು ಗ್ರಾಮದಲ್ಲಿ ಸರಕಾರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಾಗುಂಡಿ ಹಾಗೂ ಬಾಳೆ ಹೊನ್ನೂರು ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವು ಮಾಗುಂಡಿ ಗ್ರಾಪಂ ಸಹಯೋಗದಲ್ಲಿ ಹಮ್ಮಿ ಕೊಂಡಿದ್ದ ವಿಶ್ವ ಮಲೇರಿಯ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪರಿಸರ ಸ್ವಚ್ಛತೆ ಕಾಪಾಡಿಕೊಂಡು ಬರುವುದು ಎಲ್ಲರ ಜವಾಬ್ದಾರಿಯಾಗಿದೆ. ಸ್ವಚ್ಛತೆ ಇಲ್ಲದೇ ಹೋದಲ್ಲಿ ಸೊಳ್ಳೆಯಗಳ ಉತ್ಪತ್ತಿಯಿಂದ ಮಾರಣಾಂತಿಕ ಮಲೇರಿಯಾ ದಂತಹ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಸಾರ್ವಜನಿಕರು ಸ್ವಚ್ಚತೆಯ ಬಗ್ಗೆ ಗಮನಹರಿಸಿದಾಗ ಮಾತ್ರ ನಿಯಂತ್ರಣ ಸಾಧ್ಯವೆಂದು ತಿಳಿಸಿದರು.
ಗ್ರಾಪಂ ಅಭಿವೃದ್ಧಿ ಅಧಿಕಾರಿ ಪಿ.ಕೆ. ಪ್ರಕಾಶ್ ಮಾತನಾಡಿ, ತೆಂಗಿನ ಚಿಪ್ಪು, ಪ್ಲಾಸ್ಟಿಕ್ ಡಬ್ಬಿಗಳಲ್ಲಿ ನೀರು ಸಂಗ್ರಹವಾಗುವುದರಿಂದ ಸೊಳ್ಳೆಗಳು ಉತ್ಪತ್ತಿಯಾಗಿ ರೋಗ ಹರಡಲು ಕಾರಣವಾಗುತ್ತದೆ. ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಂಡು ಬರಬೇಕೆಂದು ತಿಳಿಸಿದರು. ಮಾಗುಂಡಿ ಸರಕಾರಿ ಆಸ್ಪತ್ರೆಯ ಸಿಬ್ಬಂದಿ ಹಿಮ, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.