ಬಿ.ಕಣಬೂರು: ಟಾಸ್ಕ್ ಫೋರ್ಸ್ ಸಭೆ
Team Udayavani, Apr 30, 2020, 5:14 PM IST
ಬಾಳೆಹೊನ್ನೂರು: ಬಿ.ಕಣಬೂರು ಗ್ರಾಪಂ ಅಧ್ಯಕ್ಷೆ ಹೂವಮ್ಮ ಅಧ್ಯಕ್ಷತೆಯಲ್ಲಿ ಟಾಸ್ಕ್ಫೋರ್ಸ್ ಸಭೆ ನಡೆಯಿತು.
ಬಾಳೆಹೊನ್ನೂರು: ಪಟ್ಟಣದಲ್ಲಿ ಎಲ್ಲಾ ಅಂಗಡಿ-ಮುಂಗಟ್ಟು ತೆರೆಯಲು ಡಿಸಿ, ಎಸ್‌ಪಿಗೆ ಮನವಿ ಸಲ್ಲಿಸಲು ಬಿ.ಕಣಬೂರು ಗ್ರಾಪಂನಲ್ಲಿ ನಡೆದ ಟಾಸ್ಕ್ಫೋರ್ಸ್ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಬಿ.ಕಣಬೂರು ಗ್ರಾ.ಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಟಾಸ್ಕ್ಫೋರ್ಸ್ ಸಭೆಯಲ್ಲಿ ಗ್ರಾ.ಪಂ ಅಧ್ಯಕ್ಷೆ ಹೂವಮ್ಮ, ಮಾಜಿ ಅಧ್ಯಕ್ಷ ಮಹಮ್ಮದ್ ಹನೀಫ್, ಬಿ.ಕೆ. ಮಧುಸೂದನ್, ರವಿಚಂದ್ರ, ಎಂ.ಎಸ್. ಅರುಣೇಶ್, ಗ್ರಾ.ಪಂ ಸದಸ್ಯ ಟಿ.ಎಂ. ಉಮೇಶ್ ರವರು ತಮ್ಮ ಅಭಿಪ್ರಾಯ ತಿಳಿಸಿ ಮಾತನಾಡಿದರು. ಕಳೆದ ಮಾರ್ಚ್ ತಿಂಗಳಿನಿಂದ ಲಾಕ್ ಡೌನ್ ಹಿನ್ನಲೆಯಲ್ಲಿ ಎಲ್ಲಾ ವ್ಯಾಪಾರ ವಹಿವಾಟುಗಳು ಸ್ಥಗಿತಗೊಂಡಿದ್ದು, ವ್ಯಾಪಾರಸ್ಥರು ಸಂಕಷ್ಟದ ಸ್ಥಿತಿಯಲ್ಲಿದ್ದಾರೆ. ಅಲ್ಲದೆ ಜಿಲ್ಲೆಯಾದ್ಯಂತ ಕೊವಿಡ್-19ಸೋಂಕು ಇಲ್ಲದೆ ಹಸಿರು ವಲಯದ ಪಟ್ಟಿಯಲ್ಲಿದೆ. ಯಾವುದೇ ಅನಾಹುತಗಳು ಸಂಭವಿಸಿಲ್ಲ, ಈ ಹಿನ್ನೆಲೆಯಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ತೆರೆದು ವ್ಯಾಪಾರ ವಹಿವಾಟು ನಡೆಸಲು ಜಿಲ್ಲಾಡಳಿತ ಅನುವು ಮಾಡಿಕೊಡಬೇಕು ಎಂದರು.
ಠಾಣಾಧಿಕಾರಿ ನೀತು ಗುಡೆ ಮಾತನಾಡಿ, ಗ್ರಾಪಂ ಟಾಸ್ಕ್ಫೋರ್ಸ್ ಸಭೆಯಲ್ಲಿ ನಡೆದ ಚರ್ಚೆಯ ಬಗ್ಗೆ ಎಸ್‌ಪಿ ಗಮನಕ್ಕೆ ತರಲಾಗುವುದು. ಡಿಸಿ ಅನುಮತಿ ನೀಡಿದಲ್ಲಿ ಈ
ಬಗ್ಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಬಿ.ಕಣಬೂರು ಗ್ರಾ.ಪಂ ಅಧ್ಯಕ್ಷೆ ಹೂವಮ್ಮ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪಿಡಿಒ ಕೆ.ಎಸ್. ಸೋಮಶೇಖರ್, ನಾಡ ಕಚೇರಿ ಉಪ ತಹಶೀಲ್ದಾರ್ ನಾಗೇಂದ್ರ, ಇಬ್ರಾಹಿಂ ಶಾಫಿ, ಆರ್ಮುಗ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.