ಕುಡುಕರ ಅಡ್ಡೆಯಾದ ಬಾಳೂರು ಬಸ್ ತಂಗುದಾಣ
Team Udayavani, Jul 26, 2020, 2:10 PM IST
ಕೊಟ್ಟಿಗೆಹಾರ: ಬಾಳೂರು ಗ್ರಾಪಂ ವ್ಯಾಪ್ತಿಯ ಹಲಸಿನ ಮರದ ಬಸ್ ತಂಗುದಾಣ ಕುಡುಕರ ಅಡ್ಡೆಯಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ಬಾಳೂರು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಬಾಳೂರು ಗ್ರಾಮಸ್ಥ ನಾಗರಾಜು ಮಾತನಾಡಿ, ಈ ಬಸ್ ತಂಗುದಾಣದಲ್ಲಿ ಕಿಡಿಗೇಡಿಗಳು ಮದ್ಯಪಾನ ಮಾಡಿ ಮೋಜು- ಮಸ್ತಿಯಲ್ಲಿ ತೊಡಗುತ್ತಿದ್ದು ಎಲ್ಲೆಂದರಲ್ಲಿ ಬಾಟಲಿಗಳನ್ನು ಎಸೆದು ಹೋಗುತ್ತಿದ್ದಾರೆ. ಇದರಿಂದ ಬಸ್ ತಂಗುದಾಣದಲ್ಲಿವಾಹನಗಳಿಗಾಗಿ ಕಾದು ನಿಲ್ಲುವ ಮಹಿಳೆಯರು, ಮಕ್ಕಳು ಸೇರಿದಂತೆ ಪ್ರಯಾಣಿಕರು ಮುಜುಗರಕ್ಕೀಡಾಗುವಂತಾಗಿದೆ. ಮದ್ಯಪಾನ ಮಾಡಿ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಬಾಳೂರು ಪಿಎಸ್‌ಐ ಮೂರ್ತಿ, ಈ ವಿಷಯ ನನ್ನ ಗಮನಕ್ಕೆ ಬಂದಿದ್ದು ಬಸ್ ತಂಗುದಾಣದಲ್ಲಿ ಮದ್ಯಪಾನ ಮಾಡಿ ಮೋಜು-ಮಸ್ತಿಯಲ್ಲಿ ತೊಡಗುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಬಾಳೂರು ಪೊಲೀಸ್ ಠಾಣೆಗೆ ಮನವಿ ಮಾಡಲಾಗುವುದು. ಗ್ರಾಪಂನಿಂದ ಬಸ್ ನಿಲ್ದಾಣದಲ್ಲಿ ಎಚ್ಚರಿಕೆ ಫಲಕ ಹಾಕಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.