ಭದ್ರಾ ಹುಲಿ ಯೋಜನೆಯ ಬಫರ್ ಜೋನ್ ಘೋಷಣೆಗೆ ವಿರೋಧ: ಎನ್.ಆರ್.ಪುರ ತಾಲೂಕು ಬಂದ್
Team Udayavani, Oct 15, 2020, 1:21 PM IST
ಚಿಕ್ಕಮಗಳೂರು: ಭದ್ರಾ ಹುಲಿ ಯೋಜನೆಯ ಬಫರ್ ಜೋನ್, ಸೂಕ್ಷವಲಯ ಘೋಷಣೆಯ ವಿರುದ್ಧ ಎನ್.ಆರ್.ಪುರ ತಾಲೂಕಿನ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ.
ಎನ್.ಆರ್.ಪುರ ತಾಲೂಕಿನಲ್ಲಿ ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸೇರಿ ಇಡಿ ತಾಲೂಕಿನಲ್ಲಿ ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಬಂದ್ ಮಾಡಲು ನಿರ್ಧರಿಸಲಾಗಿದೆ.
ಇದನ್ನೂ ಓದಿ:ಮತ್ತೆ ಕುಸಿದ ತೀರ್ಥಹಳ್ಳಿ ತಾಲೂಕು ರಂಜದಕಟ್ಟೆಯ ಸೇತುವೆ: ಶಿವಮೊಗ್ಗ- ಉಡುಪಿ ಸಂಚಾರ ಸ್ಥಗಿತ
ಮಲೆನಾಡು ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ಇದಕ್ಕೆ ಸರ್ವ ಪಕ್ಷ, ವಿವಿಧ ಸಂಘಟನೆ ಹಾಗೂ ರೈತರು ಭಾಗಿಯಾಗಿದ್ದಾರೆ.
ಭದ್ರಾ ಹುಲಿ ಯೋಜನೆಯ ಬಫರ್ ಝೋನ್ ಹಾಗೂ ಪರಿಸರ ಸೂಕ್ಷ್ಮ ವಲಯದ ಹೆಸರಿನಲ್ಲಿ ತಾಲೂಕಿನ ಹತ್ತಾರು ಗ್ರಾಮಗಳು ಕಣ್ಮರೆಯಾಗಲಿವೆ. ಚಿಕ್ಕಮಗಳೂರು ಜಿಲ್ಲೆಯ 51 ಗ್ರಾಮಗಳು ಯೋಜನೆ ವ್ಯಾಪ್ತಿಗೆ ಬರಲಿದ್ದು, 8750 ಕುಟುಂಬ, 75ಕ್ಕೂ ಹೆಚ್ಚು ದೇವಸ್ಥಾನಗಳು, 3 ಚರ್ಚ್, 4 ಮಸೀದಿಗಳು ಈ ಯೋಜನೆ ವ್ಯಾಪ್ತಿಗೆ ಬರಲಿದೆ. ಹೀಗಾಗಿ ಈ ಯೋಜನೆಗೆ ಭಾರೀ ವಿರೋಧ ವ್ಯಕ್ತಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.