ಬೆಂಗಳೂರು ಯುವಕನ ಕಿಡ್ನಾಪ್, ಕೊಲೆ ಪ್ರಕರಣ; ಚಾರ್ಮಾಡಿ ಘಾಟ್ ನಲ್ಲಿ ಶವಕ್ಕಾಗಿ ಹುಡುಕಾಟ
Team Udayavani, Jan 4, 2023, 9:51 AM IST
ಕೊಟ್ಟಿಗೆಹಾರ: ಸುಮಾರು 9 ತಿಂಗಳ ಹಿಂದೆ ಕೊಲೆಯಾದ ಯುವಕನ ಶವವನ್ನು ಚಾರ್ಮಾಡಿ ಘಾಟಿ ಪರಿಸರದಲ್ಲಿ ಎಸೆಯಲಾಗಿದೆ ಎಂದು ಆರೋಪಿಗಳು ತಿಳಿಸಿದ್ದು ಅದರಂತೆ ಬೆಂಗಳೂರು ಕಬ್ಬನ್ ಪಾರ್ಕ್ ಪೊಲೀಸರು ಡಿಸಿಪಿ ನೇತೃತ್ವದಲ್ಲಿ ಇನ್ಸ್ ಪೆಕ್ಟರ್, ಪಿಎಸ್ ಐ ಮತ್ತು ಸಿಬ್ಬಂದಿಗಳು ಶವ ಪತ್ತೆ ಹಚ್ಚುವ ಕಾರ್ಯಾಚರಣೆಗೆ ಮಂಗಳವಾರ ಆಗಮಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ – ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಘಾಟಿಯ ಪ್ರದೇಶಗಳ ಕಣಿವೆಗಳಲ್ಲಿ ಸ್ಥಳೀಯ ಪೊಲೀಸರ ಹಾಗೂ ಸಾರ್ವಜನಿಕರ ಸಹಕಾರದಲ್ಲಿ ಹುಡುಕಾಟ ಆರಂಭಿಸಿದ್ದಾರೆ.
ಘಟನೆಯ ಹಿನ್ನೆಲೆ: ಬೆಂಗಳೂರಿನ ಕೋಣನಕುಂಟೆ ನಿವಾಸಿ ಶರತ್ ಎಂಬಾತ ಸಾಲ ಪಡೆದು ಹಿಂತಿರುಗಿಸದೆ ಓಡಾಡುತ್ತಿದ್ದ. ಇದರಿಂದ ರೊಚ್ಚಿಗೆದ್ದ ಗ್ಯಾಂಗ್ ಶರತ್ ನನ್ನು ಕಿಡ್ನಾಪ್ ಮಾಡಿ ಕೊಲೆ ಮಾಡಿದ್ದರು. ಕೊಲೆಯಾದ ಎಚ್. ಶರತ್ ಚಿಕ್ಕಬಳ್ಳಾಪುರ ಹಾಗೂ ಯಲಹಂಕ ನಿವಾಸಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ಸಬ್ಸಿಡಿ ದರದಲ್ಲಿ ವಾಹನ ಕೊಡಿಸುವುದಾಗಿ ನಂಬಿಸಿದ್ದ. ಆದರೆ ಕಾರು ಕೊಡಿಸದೆ ಅಲ್ಲಿನ ಜನರಿಗೆ ವಂಚಿಸಿದ್ದ.ಇದರಿಂದ ಹಣ ಕೊಟ್ಟು ಜನ ಎಚ್. ಶರತ್ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದರು. ಅಷ್ಟೇ ಅಲ್ಲದೆ ಚಿಕ್ಕಬಳ್ಳಾಪುರದ ಮಖಂಡರೊಬ್ಬರಿಗೆ ಹಣ ವಾಪಸ್ ಕೊಡಿಸುವಂತೆ ಜನ ಕೇಳಿಕೊಂಡಿದ್ದಾರೆ. ಜನರ ಮನವಿ ಮೇರೆಗೆ ಅವರು ತನ್ನ ಪುತ್ರನಿಗೆ ಹಣ ವಸೂಲಿ ಮಾಡುವಂತೆ ಹೇಳಿದ್ದ. ಇದರಿಂದ ಇಲ್ಲಿಂದ ಶರತ್ ಕಿಡ್ನಾಪ್ ಆ್ಯಂಡ್ ಮರ್ಡರ್ ಪ್ಲಾನ್ ಆರಂಭವಾಯಿತು ಎಂದು ಕೇಳಿ ಬರುತ್ತಿದೆ.
ಮುಖಂಡರ ಹಾಗೂ ಆತನ ಸ್ನೇಹಿತರು, ಜತೆಗೆ ಹಣ ಪಡೆದುಕೊಂಡ ಕೆಲವರು ಸೇರಿ ಶರತ್ ನನ್ನು ಕಿಡ್ನಾಪ್ ಮಾಡಿ ಆತನ ಮೊಬೈಲ್ ನಿಂದಲೇ ಯುವಕನ ತಂದೆ ತಾಯಿಗೆ ‘ನಾನು ದುಡಿಯಲು ಹೋಗುತ್ತಿದ್ದೇನೆ ಹುಡುಕಬೇಡಿ ಎಂದು ಮೆಸೇಜ್’ ಹಾಕಿ ಬಳಿಕ ಮೊಬೈಲನ್ನು ಲಾರಿಯೊಂದರ ಮೇಲೆ ಎಸೆದಿದ್ದಾರೆ. ಲಾರಿ ಮೈಸೂರು ಮಾರ್ಗವಾಗಿ ಸಾಗಿ ಹೊರ ರಾಜ್ಯಕ್ಕೆ ಪ್ರಯಾಣವಾಗಿದ್ದು ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಇಷ್ಟರಲ್ಲಿ ಶರತ್ ನನ್ನು ಬನಶಂಕರಿಯಿಂದ ಅಪಹರಿಸಿದ ಗ್ಯಾಂಗ್ ಚಿಕ್ಕಬಳ್ಳಾಪುರದ ಗೌರಿಬಿದನೂರಿನ ವಾಟದ ಹೊಸಹಳ್ಳಿಯ ಮಾವಿನ ತೋಟದ ಮನೆಯೊಂದರಲ್ಲಿ ಬಂಧನದಲ್ಲಿ ಇಡಲಾಗಿತ್ತು. ಬಳಿಕ ಆತನಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ಆತನಿಗೆ ಹಿಂಸೆ ನೀಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಕೊಲೆಯಾದ ಶರತ್ ನ ಶವನನ್ನು ಚಾರ್ಮಾಡಿ ಘಾಟ್‌ನಲ್ಲಿ ಎಸೆದು ಯಾರಿಗೂ ಶವದ ಸುಳಿವು ಸಿಗದಂತೆ ಮಾಡಿದ್ದರು. ಸದ್ಯ ಕಬ್ಬನ್ ಪಾರ್ಕ್ ಪೊಲೀಸರು ಸಮೊಟೋ ಪ್ರಕರಣವನ್ನು ದಾಖಲಿಸಿ 10 ಮಂದಿ ಆರೋಪಿಗಳನ್ನು ಬಂಧಿಸಿ ಅವರ ಮೇಲೆ ಕೊಲೆ ಪ್ರಕರಣ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಪತ್ರ ನೀಡಿದ ಸುಳಿವು:
ಈ ಕಿಡ್ನಾಪ್, ಕೊಲೆ 9 ತಿಂಗಳ ಹಿಂದೆಯೇ ನಡೆದಿದೆ. ಆದರೆ ಪ್ರಕರಣ ನಡೆದು ಕೆಲವು ತಿಂಗಳ ನಂತರ ಕೇಂದ್ರ ವಿಭಾಗದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಬಂದ ಪತ್ರ ಹಾಗೂ ಚಿತ್ರಹಿಂಸೆ ನೀಡಿದ ದೃಶ್ಯದ ಪೆನ್ ಡ್ರೈವ್ ಕೊಲೆಯ ಸುಳಿವು ನೀಡಿದೆ.
ಬಳಿಕ ಪೊಲೀಸರು ವಿಶೇಷ ತಂಡ ರಚಿಸಿ ರಹಸ್ಯ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಒಟ್ಟು 10 ಜನರನ್ನು ಬಂಧಿಸಿದಾಗ ಘಟನೆಯ ಸಂಪೂರ್ಣ ಚಿತ್ರಣ ದೊರಕಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಚಾರ್ಮಾಡಿ ಘಾಟಿ ಪರಿಸರಕ್ಕೆ ಕರೆ ತಂದು ಶವ ಹುಡುಕಲು ಮುಂದಾಗಿದ್ದಾರೆ.
ಶವ ಹುಡುಕುವುದೇ ಸವಾಲು:
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ
ಚಾರ್ಮಾಡಿ ಘಾಟಿ ಸಾಕಸ್ಟು ಕಣಿವೆ ಪ್ರದೇಶಗಳನ್ನು ಹೊಂದಿದೆ. ಘಾಟಿಯ ಸ್ಥಳಗಳಲ್ಲಿ ವಿಪರೀತ ಪೊದೆಗಳು ಆಳವಾದ ಕಂದಕಗಳು ಇವೆ. ಘಟನೆ ನಡೆದು 9 ತಿಂಗಳು ಕಳೆದಿರುವುದರಿಂದ ಇಲ್ಲಿ ತಂದು ಎಸೆಯಲಾಗಿದೆ ಎಂದಿರುವ ಶವ ಮಳೆಗಾಲದಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ, ಪ್ರದೇಶದಲ್ಲಿ ಸಾಕಷ್ಟು ವನ್ಯಮೃಗಗಳು ಇದ್ದು ಅವುಗಳ ಪಾಲಾಗಿರುವ ಶಂಕೆಯು ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.