ಸಂತೆ ನಡೆಸಲು ಬಂದಿದ್ದ ವ್ಯಾಪಾರಿಗಳಿಗೆ ತಡೆ
Team Udayavani, Jul 19, 2020, 1:51 PM IST
ಆಲ್ದೂರು: ಶನಿವಾರ ಆಲ್ದೂರು ಪಟ್ಟಣದಲ್ಲಿ ಸಂತೆ ಹಾಕಲು ಬಂದಿದ್ದ ಅಂಗಡಿ ವ್ಯಾಪಾರಿಗಳಿಗೆ ಅಂಗಡಿಗಳನ್ನು ಹಾಕದಂತೆ ಸೂಚನೆ ನೀಡಿ ವಾಪಸ್ ಕಳುಹಿಸಲಾಯಿತು.
ಆಲ್ದೂರಿನಲ್ಲಿ ಪ್ರತಿ ಶನಿವಾರ ಸಂತೆ ನಡೆಯುತ್ತದೆ. ಆದರೆ ಕೋವಿಡ್ -19 ವೈರಸ್ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯಾದ್ಯಂತ ಸಂತೆಗಳನ್ನು ರದ್ದು ಮಾಡಿ ಆದೇಶ ಹೊರಡಿಸಿತ್ತು. ಆದರೂ ಸಹ ಪ್ರತಿ ಶನಿವಾರ ಆಲ್ದೂರು ಪಟ್ಟಣದಲ್ಲಿ ಸಂತೆ ನಡೆಯುತ್ತಿದ್ದು ಪಟ್ಟಣದ ಮುಖ್ಯ ರಸ್ತೆಯ ಎರಡು ಬದಿಗಳಲ್ಲಿ ಅಂಗಡಿಗಳನ್ನು ಹಾಕಿಕೊಂಡು ವ್ಯಾಪಾರ ನಡೆಸುತ್ತಿದ್ದರು. ಕಳೆದ ವಾರವೂ ವ್ಯಾಪಾರ ನಡೆಸಿದ್ದರು. ಇದರಿಂದಾಗಿ ಜನ ಜಂಗುಳಿ ಹೆಚ್ಚಾಗಿತ್ತು. ಟ್ರಾಫಿಕ್ ಜ್ಯಾಮ್ ಉಂಟಾಗಿ ಪಾದಚಾರಿಗಳು, ವಾಹನ ಸವಾರರು ತೊಂದರೆ ಅನುಭವಿಸುವಂತಾಗಿತ್ತು. ಶನಿವಾರ ಆಲ್ದೂರು ಪಟ್ಟಣದಲ್ಲಿ ಮೊದಲ ಕೋವಿಡ್- 19 ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಭಿವೃದ್ಧಿ ಅಧಿಕಾರಿ ಸೋಮೇಗೌಡ ಹಾಗೂ ಸಿಬ್ಬಂದಿ ಪೋಲೀಸರ ಸಹಕಾರದೊಂದಿಗೆ ವ್ಯಾಪಾರಿಗಳನ್ನು ತಡೆದು ರಸ್ತೆ ಬದಿಯಲ್ಲಿ ಅಂಗಡಿಗಳನ್ನು ಹಾಕದಂತೆ ಸೂಚನೆ ನೀಡಿ ಬಂದ ವಾಹನಗಳನ್ನು ವಾಪಸ್ ಕಳುಹಿಸಿದರು.
ಅಂಗಡಿಗಳಲ್ಲಿ ತರಕಾರಿಗಳನ್ನು ಮಾರಾಟ ಮಾಡಲು ಪಂಚಾಯತ್‌ನಿಂದ ಪರವಾನಗಿ ಪಡೆದವರಿಗೆ ಮಾತ್ರ ವ್ಯಾಪಾರಕ್ಕೆ ಅನುಮತಿ ನೀಡಲಾಯಿತು. ಆಲ್ದೂರು ಪಿಎಸ್‌ಐ ಶಂಬುಲಿಂಗಯ್ಯ ತಾವೇ ಕಾರ್ಯಾಚರಣೆಗೆ ಇಳಿದು ಪಟ್ಟಣದಲ್ಲಿ ಮಾಸ್ಕ್ ಧರಿಸದೆ ಅನಗತ್ಯವಾಗಿ ಓಡಾಡುತ್ತಿದ್ದವರು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಅಂಗಡಿ- ಮುಂಗಟ್ಟುಗಳ ಮುಂದೆ ಓಡಾಡುವವರಿಗೆ ದಂಡ ವಿಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.