75 ವರ್ಷದ ಬಳಿಕ ಬಸವೇಶ್ವರಸ್ವಾಮಿ ಅದ್ಧೂರಿ ತೆಪ್ಪೋತ್ಸವ
Team Udayavani, Dec 17, 2019, 2:39 PM IST
ಕಡೂರು: ತಾಲೂಕಿನ ಸಿಂಗಟಗೆರೆ ಹೋಬಳಿ ಶೆಟ್ಟಿಹಳ್ಳಿ ಗ್ರಾಮ ದೇವತೆ ಶ್ರೀ ಬಸವೇಶ್ವರ ಸ್ವಾಮಿ, ಕಂಚುಗಲ್ಲು ಶ್ರೀ ವೀರಭದ್ರಸ್ವಾಮಿ ಹಾಗೂ ಶ್ರೀ ಕರಿಯಮ್ಮ ದೇವಿಯರ ತೆಪ್ಪೋತ್ಸವ ಕಾರ್ಯಕ್ರಮ ಸೋಮವಾರ ಅದ್ದೂರಿಯಾಗಿ ನೆರವೇರಿತು.
ಗ್ರಾಮದ ಹಿರಿಯರು ಹೇಳುವಂತೆ ಸುಮಾರು 75 ವರ್ಷಗಳ ಹಿಂದೆ ಇದೇ ರೀತಿ ತೆಪ್ಪೋತ್ಸವ ನಡೆದಿತ್ತು. ನಂತರ ಕಾರಣಾಂತರಗಳಿಂದ ಈ ಸೇವೆ ನಡೆದಿರಲಿಲ್ಲ. ಈ ಬಾರಿ ಉತ್ತಮ ಮಳೆ ಬಂದು, 45 ಹೇಕ್ಟೇರ್ ವಿಸ್ತೀರ್ಣದ ಶೆಟ್ಟಿಹಳ್ಳಿ ಕೆರೆ ತುಂಬಿದ್ದರಿಂದ ಹರ್ಷಗೊಂಡ ಭಕ್ತಾದಿ ಗಳು ಹಾಗೂ ಗ್ರಾಮಸ್ಥರು ತೆಪ್ಪೋತ್ಸವ ನಡೆಸಲು ತೀರ್ಮಾನಿಸಿದರು. ಈ ಹಿನ್ನೆಲೆಯಲ್ಲಿ ತೆಪ್ಪೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಕಂಚಗಲ್ಲು ಶ್ರೀ ವೀರಭದ್ರಸ್ವಾಮಿ, ಶೆಟ್ಟಿಹಳ್ಳಿ ಶ್ರೀ ಬಸವೇಶ್ವರ ಸ್ವಾಮಿ, ಶ್ರೀ ಕರಿಯಮ್ಮ ದೇವರ ಉತ್ಸವ ಮೂರ್ತಿಗಳಿಗೆ ವಿಶೇಷ ಅಲಂಕಾರ ಮಾಡಿ ಗ್ರಾಮದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ನಂತರ ಕೆರೆಯಲ್ಲಿ ವಿವಿಧ ಹೂಗಳಿಂದ ಅಲಂಕಾರ ಮಾಡಲಾಗಿದ್ದ ತೆಪ್ಪದಲ್ಲಿ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು. ಪೂಜಾ ಕೈಂಕರ್ಯಗಳನ್ನು ನೆರವೇರಿಸಿದ ನಂತರ ಸುಮಾರು ಒಂದು ಕಿ.ಮೀ. ಸುತ್ತಳತೆಯಲ್ಲಿ ತೆಪ್ಪವನ್ನು ಸುತ್ತಿಸಲಾಯಿತು. ಈ ವೇಳೆ ಶ್ರೀ ಬಸವೇಶ್ವರ ಸ್ವಾಮಿಗೆ, ವೀರಭದ್ರಸ್ವಾಮಿಗೆ ಜಯವಾಗಲಿ ಎಂಬ ಭಕ್ತರ ಜಯಘೋಷ ಮುಗಿಲು ಮುಟ್ಟಿತ್ತು.
ಕಲ್ಲಸಾದರಹಳ್ಳಿ, ಬಾಣವರ, ಪಂಚನಹಳ್ಳಿ, ಚಿಕ್ಕನಾಯ್ಕನಹಳ್ಳಿ, ಅರಸೀಕೆರೆ, ಕೆ.ಬಿದರೆ, ಸಿಂಗಟಗೆರೆ, ಕಡೂರು, ತರೀಕೆರೆ, ಹೋಸದುರ್ಗದಿಂದ ಬಂದಿದ್ದ ಸಾವಿರಾರು ಭಕ್ತರು ಅದರಲ್ಲೂ ಕೆರೆ ಏರಿಯ ಮೇಲೆ ಯುವಕರು, ಯುವತಿಯರು, ಮಕ್ಕಳು, ಮಹಿಳೆಯರು, ಹಿರಿಯರು ಜಾತಿ ಭೇದವಿಲ್ಲದೆ ಕುಳಿತು ತೆಪ್ಪೋತ್ಸವ ವೀಕ್ಷಿಸಿದರು. ಕನ್ನಡ- ಸಂಸ್ಕೃತಿ ಇಲಾಖೆಯಿಂದ ವೀರಗಾಸೆ, ಚಿಟ್ಟಿಮೇಳ ಕಾರ್ಯಕ್ರಮಗಳು ನಡೆದವು. ನಂತರ ಸುಮಾರು 4 ಸಾವಿರ ಭಕ್ತರಿಗೆ ಅನ್ನದಾಸೋಹ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ
MUST WATCH
ಹೊಸ ಸೇರ್ಪಡೆ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.