ಸರ್ಕಾರದಿಂದ ಬಿಬಿಎಂಪಿ ಹಣ ದುರ್ಬಳಕೆ
Team Udayavani, Dec 31, 2017, 3:14 PM IST
ಚಿಕ್ಕಮಗಳೂರು: ಸ್ವಚ್ಛ ಭಾರತ ಅಭಿಯಾನ ಯೋಜನೆಯಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಬಿಡುಗಡೆಯಾಗಿದ್ದ ಕೋಟ್ಯಂತರ ರೂ.ಹಣವನ್ನು ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದರು.
ನಗರದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಪರಿವರ್ತನಾ ಯಾತ್ರೆ ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರವು ಸ್ವಚ್ಛ ಭಾರತ ಅಭಿಯಾನ ಯೋಜನೆಯಡಿ ಬಿಬಿಎಂಪಿಗೆ 108.55 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿತ್ತು. ಈ ಅನುದಾನದಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಮುದಾಯ ಮತ್ತು ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಮತ್ತು ಜೈವಿಕ ಅನಿಲ ಘಟಕಗಳಿಗೆ ವಿದ್ಯುತ್ ಒದಗಿಸಲು ಬಳಸುವಂತೆ ಆದೇಶಿಸಿತ್ತು.
ಆದರೆ, ಈ ಅನುದಾನವನ್ನು ನಿಯಮಬಾಹಿರವಾಗಿ ರಸ್ತೆ ನಿರ್ಮಾಣ ಮತ್ತು ಗೋಡೆಗಳಿಗೆ ಬಣ್ಣ ಬಳಿಯುವುದಕ್ಕೆ
ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿದರು.
ಅದೇ ರೀತಿ ಸ್ವಚ್ಛ ಭಾರತ ಅಭಿಯಾನ ಯೋಜನೆಯಡಿ ಇಡೀ ರಾಜ್ಯಕ್ಕೆ 796 ಕೋಟಿ ರೂ.ಅನುದಾನವನ್ನು ಕೇಂದ್ರ ಸರ್ಕಾರ ಈವರೆಗೂ ಬಿಡುಗಡೆ ಮಾಡಿದೆ. ಈ ಅನುದಾನವನ್ನು ನಿಯಮ ಬಾಹಿರವಾಗಿ ಬೇರೆ ಕಾಮಗಾರಿಗಳಿಗೆ ಬಳಸಿಕೊಳ್ಳಲಾಗಿದೆ. ಇದರ ವಿರುದಟಛಿ ಪಕ್ಷದ ಕಾರ್ಯಕರ್ತರೊಬ್ಬರು ಇಂದು ಲೋಕಾಯುಕ್ತ,ಭ್ರಷ್ಟಾಚಾರ ನಿಗ್ರಹದಳ ಹಾಗೂ ಸಿಬಿಐಗೆ ದೂರು ಸಲ್ಲಿಸಿದ್ದಾರೆ ಎಂದರು.
ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಹಣ ಸಂಗ್ರಹಿಸುವ ಉದ್ದೇಶದಿಂದ ತರಾತುರಿಯಲ್ಲಿ ಬೆಂಗಳೂರು ಸಿಡಿಪಿಗೆ ಸಂಬಂಧಿಸಿದಂತೆ ನೋಟಿμಕೇಶನ್ ಹೊರಡಿಸಲಾಗಿದೆ. ಬಿಲ್ಡರ್ಗಳಿಂದ ಚುನಾವಣೆಗೆ ಹಣ ಸಂಗ್ರಹಿಸುವ ಹುನ್ನಾರ ಇದಾಗಿದೆ. ಕೂಡಲೇ ಈ ನೋಟಿμಕೇಶನ್ ರದ್ದುಪಡಿಸಬೇಕೆಂದು ಯಡಿಯೂರಪ್ಪ ಒತ್ತಾಯಿಸಿದರು. ಬಿಜೆಪಿ ಅಧಿಕಾರಕ್ಕೆ ಬಂದರೆ ಈ ನೋಟಿμಕೇಶನ್ ರದ್ದುಪಡಿಸಲಿದೆ. ಆಗ ಬಿಲ್ಡರ್ಗಳು ತೊಂದರೆಗೆ ಸಿಲುಕಲಿದ್ದಾರೆ. ಅದಕ್ಕೆ ಅವರೇ ಜವಾಬ್ದಾರರಾಗುತ್ತಾರೆ ಎಂದು ಹೇಳಿದರು.
ಮಲಪ್ರಭಾ ಮತ್ತು ಘಟಪ್ರಭಾ ನಾಲೆ ನಿರ್ಮಾಣಕ್ಕೆ 4 ತಿಂಗಳ ಹಿಂದೆ ರಾಜ್ಯ ಸರ್ಕಾರ 600 ಕೋಟಿ ರೂ.ಗಳಿಗೆ ಟೆಂಡರ್ ಕರೆಯಲು ಸಿದಟಛಿತೆ ಮಾಡಿಕೊಂಡಿತ್ತು. ಆಗ ಇದಕ್ಕೆ ವಿರೋಧ ವ್ಯಕ್ತಪಡಿಸಲಾಗಿತ್ತು. ಈಗ ಏಕಾಏಕಿ ಟೆಂಡರನ್ನು 1100 ಕೋಟಿ ರೂ.ಗೆ ಹೆಚ್ಚಳಗೊಳಿಸಿ, ಕದ್ದು ಮುಚ್ಚಿಗುತ್ತಿಗೆ ನೀಡಲಾಗಿದೆ. ಗುತ್ತಿಗೆದಾರರೊಂದಿಗೆ ಒಳ
ಒಪ್ಪಂದ ಮಾಡಿಕೊಂಡಿರುವುದರಿಂದ ಸಮಗ್ರ ತನಿಖೆ ನಡೆಯಬೇಕೆಂದು ಒತ್ತಾಯಿಸಿದರು.
ರಾಜ್ಯದ ಖಜಾನೆಯನ್ನು ಲೂಟಿ ಮಾಡಿದ್ದರಿಂದ ಶಾಸಕರ ಆಪ್ತ ಕಾರ್ಯದರ್ಶಿಗಳಿಗೆ ಸಂಬಳ ಕೊಡಲು ಇದುವರೆಗೂ ಸಾಧ್ಯವಾಗಿಲ್ಲ. ಬೊಕ್ಕಸ ಖಾಲಿಯಾಗಿರುವುದರಿಂದಲೇ ಬಿಬಿಎಂಪಿಯ ನಿವೇಶನಗಳ ಮೇಲೆ ಸಾಲ ಪಡೆಯಲಾಗಿದೆ
ಎಂದು ದೂರಿದರು.
ಇದೇ ವೇಳೆ, ಬಿಜೆಪಿ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಮತ್ತು ಸ್ವ ಸಹಾಯ ಸಂಘಗಳಿಗೆ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷದವರೆಗೆ ಸಾಲ ನೀಡುವಂತೆ ಸಂಸದೆ ಶೋಭಾ ಕರಂದ್ಲಾಜೆ ಮನವಿ ಮಾಡಿದರು. ಅದಕ್ಕೆ ಉತ್ತರಿಸಿದ ಯಡಿಯೂರಪ್ಪ, ಶೇ.1ರ ಬಡ್ಡಿದರದಲ್ಲಿ ಸಾಲ ನೀಡುವ ಭರವಸೆ ನೀಡಿದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ, ಶೋಭಾ ಕರಂದ್ಲಾಜೆ, ರವಿಕುಮಾರ್, ಮಾಜಿ ಸಚಿವರಾದ ಬಸವರಾಜ ಬೊಮ್ಮಾಯಿ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!
Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್!
Kiran Raj: ಸೂಪರ್ ಹೀರೋ ಆಗಲಿದ್ದಾರೆ ಕಿರಣ್ ರಾಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.