ಭದ್ರಾ ಅರಣ್ಯ ಪ್ರದೇಶದಲ್ಲಿ ನೀಲ್‌ಗಾಯ್ ಗೋಚರ
Team Udayavani, Mar 11, 2018, 11:53 AM IST
ಚಿಕ್ಕಮಗಳೂರು: ಸಾಮಾನ್ಯವಾಗಿ ಹುಲ್ಲು ಗಾವಲು ಪ್ರದೇಶಗಳಲ್ಲಿ ಮಾತ್ರ ವಾಸಿಸುವ ನೀಲ್ ಗಾಯ್ (ಬ್ಲೂ
ಬುಲ್) ಭದ್ರಾ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡಿದೆ.
ಮತ್ತೋಡಿ ಅರಣ್ಯ ಪ್ರದೇಶದಲ್ಲಿ ಸಫಾರಿ ವೇಳೆ ಇದರ ದರ್ಶನವಾಗಿದ್ದು ಪ್ರವಾಸಿಗರು ಫೋಟೊ ಕ್ಲಿಕ್ಕಿಸಿದ್ದಾರಲ್ಲದೆ,
ವಿಡಿಯೋ ಕೂಡ ಮಾಡಿದ್ದಾರೆ. ಸಫಾರಿಗೆ ತೆರಳಿದ್ದ ಪ್ರವಾಸಿಗರಿಂದಲೇ ಈ ಅಪರೂಪದ ಪ್ರಾಣಿ ಭದ್ರಾ ಅರಣ್ಯ
ವ್ಯಾಪ್ತಿಯಲ್ಲಿರುವುದು ಪತ್ತೆಯಾಗಿದೆ.
ಈ ಕುರಿತು ಅರಣ್ಯ ಸಂರಕ್ಷಣಾಧಿಕಾರಿ ಎಚ್.ಸಿ.ಕಾಂತರಾಜ್ ಮಾಹಿತಿ ನೀಡಿ, ಭದ್ರಾ ವನ್ಯಜೀವಿ ವಿಭಾಗದಲ್ಲಿ ಈ
ಹಿಂದೆ ಈ ಪ್ರಾಣಿ ಕಣ್ಣಿಗೆ ಬಿದ್ದಿರಲಿಲ್ಲ. ಈ ಪ್ರಾಣಿ 1950ರಲ್ಲಿ ಒಮ್ಮೆ ಬಂಡೀಪುರ ಅರಣ್ಯದಲ್ಲಿ ಕಾಣಿಸಿಕೊಂಡಿರುವ ಬಗ್ಗೆ
ದಾಖಲೆ ಇದೆ. ನೀಲ್‌ಗಾಯ್ ಹುಲ್ಲುಗಾವಲು ಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ ರಾಜ್ಯಗಳಲ್ಲಿ ಹೆಚ್ಚಾಗಿ
ಕಂಡುಬರುತ್ತದೆ. ಇದರ ಮೇಲೆ ಹುಲಿ, ಚಿರತೆಗಳ ದಾಳಿ ಹೆಚ್ಚು. ಭದ್ರಾ ಅರಣ್ಯದಲ್ಲಿರುವ ಈ ಪ್ರಾಣಿಯನ್ನು
ಕೂಡಲೆ ಪತ್ತೆ ಹಚ್ಚುವಂತೆ ಸಿಬ್ಬಂದಿಗೆ ಸೂಚಿಸುವುದಾಗಿ ತಿಳಿಸಿದರು.
ಮಾಂಸಕ್ಕಾಗಿ ಈ ಪ್ರಾಣಿಯನ್ನು ಕದ್ದು ಇಲ್ಲಿಗೆ ತಂದಿರುವ ಸಾಧ್ಯತೆಗಳು ಹೆಚ್ಚಾಗಿವೆ. ಈ ಬಗ್ಗೆ ಅರಣ್ಯ ಇಲಾಖೆ
ಸೂಕ್ತ ತನಿಖೆ ನಡೆಸಬೇಕೆಂದು ವನ್ಯಜೀವಿ ಕಾರ್ಯಕರ್ತ ಜಿ.ವೀರೇಶ್ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.