ಚಿಕ್ಕಮಗಳೂರಿನಲ್ಲಿ ನಿಲ್ಲದ ವರುಣ ಆರ್ಭಟ: ಭದ್ರಾ ನದಿಯ ಪ್ರವಾಹಕ್ಕೆ ಮೂಕ ಪ್ರಾಣಿ ಬಲಿ!
Team Udayavani, Jul 16, 2022, 10:18 AM IST
ಚಿಕ್ಕಮಗಳೂರು: ಜಿಲ್ಲೆಯಲ್ಲಿ ವರುಣನ ಆರ್ಭಟ ನಿಲ್ಲುತ್ತಿಲ್ಲ. ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲಲ್ಲಿ ಗುಡ್ಡ ಕುಸಿತ, ಪ್ರವಾಹ, ಬಿಡದೇ ಸುರಿಯುತ್ತಿರುವ ಮಳೆಯಿಂದ ಜನತೆ ಕಂಗಾಲಾಗಿದ್ದಾರೆ.
ಕಳಸ, ಕುದುರೆಮುಖ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮೇಲೆ ಹಸುವಿನ ಮೃತದೇಹ ಕೊಚ್ಚಿಕೊಂಡು ಬಂದಿದೆ. ಭದ್ರಾ ನದಿಯ ಆರ್ಭಟಕ್ಕೆ ಮೂಕ ಪ್ರಾಣಿ ಬಲಿಯಾಗಿದೆ.
ಭಾರೀ ವಾಹನ ಸಂಚಾರ ನಿಷೇಧ: ಚಿಕ್ಕಮಗಳೂರು ತಾಲೂಕು ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಮಾಣಿಕ್ಯಧಾರಾ, ಗಾಳಿಕೆರೆ, ದಬೆ ದಬ್ ಫಾಲ್ಸ್ ಇತರೆ ಗಿರಿ ಪ್ರದೇಶದಲ್ಲಿ ಕಳೆದ 15 ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಭಾರೀ ಪ್ರಮಾಣದಲ್ಲಿ ಗಾಳಿ ಮತ್ತು ಮಂಜು ಆವರಿಸಿರುವುದರಿಂದ ಈ ಪ್ರದೇಶದಲ್ಲಿ ಭೂಕುಸಿತ ಮತ್ತು ಮರಗಳು ರಸ್ತೆ ಮೇಲೆ ಬಿದ್ದು ಅಂಚಾರಕ್ಕೆ ಅಡ್ಡಿಯಾಗುತ್ತಿರುವುದರಿಂದ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಕೈಮರ ಚೆಕ್‌ಪೋಸ್ಟ್, ಕೆಮ್ಮಣ್ಣುಗುಂಡಿ ಕ್ರಾಸ್, ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ದರ್ಗಾ ಮಾರ್ಗದಲ್ಲಿ ಭಾರೀ ವಾಹನಗಳ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಿ ಎಂದು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶಿಸಿದ್ದಾರೆ.
ಇದನ್ನೂ ಓದಿ:ಚಂದ್ರು ಕೊಲೆ ಸಂದರ್ಭ ಭಾಷೆ ಜಟಾಪಟಿ: “ಕನ್ನಡ ಬರುವುದಿಲ್ಲ, ಉರ್ದುವಿನಲ್ಲಿ ಹೇಳು”
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಪ್ರವಾಸಿ ತಾಣಗಳಿಗೆ ನಿರ್ಬಂಧ, ಇಲ್ಲಿದೆ ಹೊಸ ವರ್ಷಾಚರಣೆಗೆ ಮಾರ್ಗಸೂಚಿ
Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ
Sringeri; ಪ್ರವಾಸಿ ವಾಹನಗಳ ಢಿಕ್ಕಿ: ವೃದ್ಧೆ ಸಾ*ವು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
America: ಎಚ್-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.