ಸಿದ್ದರಾಮಯ್ಯಗೆ ಬುದ್ಧಿ ಹೇಳುವಷ್ಟು ನಾವು ದೊಡ್ಡವರಲ್ಲ,ಅವರೇ ಆತ್ಮಾವಲೋಕನ ಮಾಡಲಿ: ಸಿ.ಟಿ.ರವಿ
Team Udayavani, Oct 23, 2020, 4:36 PM IST
ಚಿಕ್ಕಮಗಳೂರು: ಕಾಂಗ್ರೆಸ್- ಬಿಜೆಪಿ ಪಕ್ಷದವರು ಶತ್ರುಗಳಲ್ಲ, ರಾಜಕೀಯ ವಿರೋಧಿಗಳಷ್ಟೆ. ರಾಜಕೀಯ ಟೀಕೆ, ವ್ಯಕ್ತಿಗತ ಅಸಹನೆ ದ್ವೇಷಿಸಲು ಬಳಕೆಯಾಗಬಾರದು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಬಗ್ಗೆ ಸಿದ್ದರಾಮಯ್ಯ ಬಳಸಿದ ಭಾಷೆ, ಪ್ರತಿಕ್ರಿಯಿಸಿದ ರೀತಿಯನ್ನು ಅವರೇ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಸಚಿವ ಸಿ.ಟಿ ರವಿ ಹೇಳಿದರು.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಮಾಜಿ ಸಿಎಂ ಸಿದ್ದರಾಮಯ್ಯ ‘’ಕಾಡುಮನುಷ್ಯ’’ ಟ್ವೀಟ್ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಸಿದ್ದರಾಮಯ್ಯ ಅವರಿಗೆ ಬುದ್ಧಿ ಹೇಳುವಷ್ಟು ನಾವು ದೊಡ್ಡವರಲ್ಲ. ಬೀದಿಯಲ್ಲಿ ಜಗಳ ಆಡಿದ ರೀತಿಯಲ್ಲಿ ಭಾಷೆ ಬಳಸಿರುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟರು.
ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಒಬ್ಬ ಕಾಡು ಮನುಷ್ಯ, ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ಜನರ ಹಿತದೃಷ್ಟಿಯಿಂದ ಬಿಜೆಪಿ ತತ್‌ಕ್ಷಣ ಕಾಡಿಗೆ ಕೊಂಡು ಹೋಗಿ ಬಿಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬುಧವಾರ ಟ್ವೀಟ್ ಮಾಡಿದ್ದರು.
ಇದನ್ನೂ ಓದಿ:ರಾಜ್ಯದಲ್ಲಿ ಉಚಿತ ಕೋವಿಡ್ ಲಸಿಕೆ ನೀಡುವ ‘ಧಮ್’ ಇದೆಯಾ? ನಿರ್ಮಲಾ, ನಳಿನ್ ಗೆ ಸಿದ್ದರಾಮಯ್ಯ
ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಭೋದನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ ನಳಿನ್ ಕುಮಾರ್ ಕಟೀಲು ಅವರಿಗೆ ಸ್ವಲ್ಪ ಬುದ್ದಿ ಹೇಳಿ ನಾಲಿಗೆ ಬಿಗಿ ಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಸಲಹೆ ನೀಡಿದ್ದರು.
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಕರ್ನಾಟಕವು ಸರಣಿ ಟ್ವೀಟ್ ಮೂಲಕವೇ ತೀಕ್ಷ್ಣ ತಿರುಗೇಟು ನೀಡಿತ್ತು. ಮಾನ್ಯ ಸಿದ್ದರಾಮಯ್ಯನವರೇ, ನೀವು ಬಳಸುತ್ತಿರುವ ಪದಗಳೇ ಯಾರು ಕಾಡು ಮನುಷ್ಯ’ ಎಂಬುದನ್ನು ಸಾಬೀತುಪಡಿಸುತ್ತಿದೆ. ಕಾಡುಮನುಷ್ಯ, ನಾಲಾಯಕ್, ಬೀದಿ ಅಲೆಯುತ್ತಿದ್ದವ, ಎಲುಬಿಲ್ಲದವ ಎಂಬ ನಿಮ್ಮ ಮಾತುಗಳೇ ಕಾಂಗ್ರೆಸ್ ಸಂಸ್ಕೃತಿಯನ್ನು ಬಿಂಬಿಸುತ್ತಿದೆ. ನೀವು ರಾಜ್ಯ ಕಾಂಗ್ರೆಸ್‌ನ ವಿದೂಷಕಇದ್ದ ಹಾಗೆ ಹಾಗಿದೆ! ಎಂದು ಟ್ವೀಟ್‌ನಲ್ಲಿ ಪ್ರತ್ಯುತ್ತರ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.