ಪ್ರಾಮಾಣಿಕವಾಗಿ ಕೆಲಸ ಮಾಡಲಾಗುತ್ತಿಲ್ಲ..: ಒಂದೇ ಗ್ರಾಮ ಪಂಚಾಯತಿಯ 10 ಸದಸ್ಯರು ರಾಜೀನಾಮೆ
Team Udayavani, Feb 23, 2023, 10:40 AM IST
ಚಿಕ್ಕಮಗಳೂರು: ಪ್ರಾಮಾಣಿಕವಾಗಿ ಕೆಲಸ ಮಾಡಲಾಗುತ್ತಿಲ್ಲ ಎಂಬ ಕಾರಣಕ್ಕೆ ಒಂದೇ ಗ್ರಾಮ ಪಂಚಾಯತಿಯ 10 ಮಂದಿ ಸದಸ್ಯರು ರಾಜೀನಾಮೆ ನೀಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗುಡ್ಡತೋಟ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.
ಅಧ್ಯಕ್ಷರು, ಉಪಾಧ್ಯಕ್ಷರು ಸೇರಿ 10 ಮಂದಿ ಸದಸ್ಯರು ರಾಜೀನಾಮೆ ನೀಡಿದ್ದಾರೆ. ರಸ್ತೆ ಅಗಲೀಕರಣ, ಲೇಔಟ್ ನಿರ್ಮಾಣಕ್ಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಮಳೆಯಿಂದ ಕುಸಿದ 17 ಮನೆಗಳ ಸ್ಥಳಾಂತರಕ್ಕೂ ಅಧಿಕಾರಿಗಳು ಸಹಕರಿಸುತ್ತಿಲ್ಲ ಎಂದು ಚುನಾಯಿತ ಸದಸ್ಯರು ಬೇಸರಿಸಿದ್ದಾರೆ. ಅಧಿಕಾರಿಗಳ ವರ್ತನೆಯಿಂದ ಮನನೊಂದು, ಪ್ರಾಮಾಣಿಕವಾಗಿ ಸೇವೆ ಸಲ್ಲಿಸಲು ಸಾಧ್ಯವಾಗದ ಕಾರಣ ರಾಜೀನಾಮೆ ನೀಡಿದ್ದಾರೆ.
ಇದನ್ನೂ ಓದಿ:3 ಗಂಟೆ ಹೃದಯ ಬಡಿತ ನಿಂತರೂ 20 ತಿಂಗಳ ಮಗುವನ್ನು ಉಳಿಸಿದ ವೈದ್ಯರ ತಂಡ.!
ಯಾವ ಕೆಲಸವೂ ಆಗುತ್ತಿಲ್ಲ, ಅಧಿಕಾರಿಗಳು ಮನಸ್ಸು ಮಾಡುತ್ತಿಲ್ಲ. ನಿಮ್ಮ ನಿರ್ಲಕ್ಷ್ಯಕ್ಕೆ ನಮ್ಮ ಉತ್ತರ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹತ್ತು ಮಂದಿ ಸದಸ್ಯರು ತಾಲೂಕು ಪಂಚಾಯತಿ ಇಓ ಗೆ ರಾಜೀನಾಮೆ ಪತ್ರ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ
MUST WATCH
ಹೊಸ ಸೇರ್ಪಡೆ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.