ಸಿಡಿ ಪ್ರಕರಣದಿಂದ ಪಕ್ಷದ ವರ್ಚಸಿಗೆ ಧಕ್ಕೆ : ವಿಜಯೇಂದ್ರ
Team Udayavani, Mar 16, 2021, 8:20 PM IST
ತರೀಕೆರೆ: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಚರ್ಚೆಗೆ ಗ್ರಾಸವಾಗಿರುವ ಸಿಡಿ ಪ್ರಕರಣವನ್ನು ರಾಜ್ಯ ಸರಕಾರ ಎಸ್‌ಐಟಿ ತನಿಖೆಗೆ ಒಳಪಡಿಸಿದೆ. ಸಿಡಿಯಲ್ಲಿರುವ ವಿಚಾರದ ಸತ್ಯಾಸತ್ಯತೆಯನ್ನು ತನಿಖೆ ನಡೆಸಿದ ನಂತರ ತಿಳಿದು ಬರಲಿದೆ. ಎಲ್ಲಾ ರೀತಿಯಲ್ಲೂ ಸಮಗ್ರ ತನಿಖೆ ಮಾಡಲಾಗುವುದು ಎಂದು ಬಿಜೆಪಿ ಉಪಾದ್ಯಕ್ಷ ಬಿ.ವೈ.ವಿಜೇಯಂದ್ರ ತಿಳಿಸಿದರು.
ಪಟ್ಟಣದಲ್ಲಿ ಬೈಕ್ ಜಾಥಾದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಪ್ರಕರಣದ ಬಗ್ಗೆ ಈಗಾಗಲೇ ಸರಕಾರ ಸೂಕ್ತ ನಿರ್ಧಾರ ತೆಗೆದುಕೊಂಡಿದೆ. ತನಿಖೆಯಿಂದ ಹೊರಬರುವ ವಿಚಾರದ ನಂತರ ರಾಜ್ಯ ಸರಕಾರ ಮತ್ತು ಬಿಜೆಪಿ ಸೂಕ್ತ ಕ್ರಮ ಕೈಗೊಳ್ಳಲಿದೆ. ಪಕ್ಷದ ವರ್ಚಸ್ಸಿಗೆ ಸ್ವಲ್ಪ ಮಟ್ಟಿನ ಧಕ್ಕೆಯಾದರೂ ಸಹ ಸಿಡಿಯಲ್ಲಿರುವ ವಿಚಾರದಲ್ಲಿ ಕೆಲವು ಸಂದೇಹಗಳಿವೆ ಎಂದರು. ರಾಜ್ಯ ಸರಕಾರ ಅಸ್ತಿತ್ವಕ್ಕೆ ಬಂದಿರುವುದು ಎಲ್ಲರಿಗೂ ತಿಳಿದ ವಿಚಾರ. ಈ ಕಾರಣದಿಂದಾಗಿ ಪಕ್ಷದ ನಿಷ್ಟಾವಂತರಿಗೆ ಸ್ಥಾನಮಾನ ದೊರೆಯುವಲ್ಲಿ ನಿಧಾನವಾಗಿದೆ.
ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಂಡು ಹೋಗಬೇಕಾಗಿದೆ ಎಂದರು. ಶಾಸಕ ಡಿ.ಎಸ್. ಸುರೇಶ್ ಅವರು ಈಗಾಗಲೇ ಜಿಲ್ಲಾ ಮಟ್ಟದ ನಾಯಕರಾಗಿ ಬೆಳೆಯುತ್ತಿದ್ದಾರೆ. ಹಲವಾರು ದಶಕಗಳಿಂದ ರಾಜಕಾರಣದಲ್ಲಿದ್ದಾರೆ. ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರು ಪಕ್ಷದ ನಿಷ್ಠಾವಂತರು ಕೂಡ. ಅವರಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ದೊರೆಯಲಿದೆ ಎಂದರು. ಇದಕ್ಕೂ ಮುನ್ನ ಲಕ್ಕವಳ್ಳಿ ಕ್ರಾಸ್ ನಿಂದ ಶಾಸಕರ ಮನೆಯ ತನಕ ಬೈಕ್‌ಜಾಥಾ ನಡೆಯಿತು ನೂರಾರು ಕಾರ್ಯಕರ್ತರು ಬೈಕ್ ಜಾಥಾದಲ್ಲಿ ಭಾಗವಹಿಸಿದ್ದರು.
ಶಾಸಕರ ಮನೆಗೆ ಬಂದಾಗ ವಿಜೇಯಂದ್ರ ಅವರನ್ನು ಆರತಿ ಎತ್ತಿ ಸ್ವಾಗತಿಸಲಾಯಿತು. ಸುದ್ದಿಗೋಷ್ಠಿಯಲ್ಲಿ ಶಾಸಕ ಡಿ.ಎಸ್. ಸುರೇಶ್, ಜಿ.ಪಂ ಸದಸ್ಯ ಕೆ.ಆರ್. ಆನಂದಪ್ಪ, ತಾಪಂ ಅದ್ಯಕ್ಷೆ ಪದ್ಮಾವತಿ, ಟಿಎಪಿಸಿಎಂಎಸ್‌ಅದ್ಯಕ್ಷ ಎಸ್.ಬಿ. ಆನಂದಪ್ಪ, ಮಂಡಲ ಅದ್ಯಕ್ಷ ಅಜಯ್, ತಾಪಂ ಸದಸ್ಯರು, ಪಕ್ಷದ ವಿವಿಧ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.