2ನೇ ದಿನವೂ ಖಾಸಗಿ ವಾಹನಗಳದ್ದೇ ದರ್ಬಾರ್‌

Team Udayavani, Apr 9, 2021, 7:01 PM IST

9-16

ಚಿಕ್ಕಮಗಳೂರು: 6ನೇ ವೇತನ ಆರೋಗದ ಶಿಫಾರಸ್ಸಿನಂತೆ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ನಡೆಸುತ್ತಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು ಕಾಫಿನಾಡಿನಲ್ಲಿ ಎರಡನೇ ದಿನವೂ ಖಾಸಗಿ ವಾಹನಗಳು ದರ್ಬಾರು ನಡೆಸಿದವು.

ನೌಕರರು ಮುಷ್ಕರ ಹೂಡಿರುವ ಹಿನ್ನೆಲೆಯಲ್ಲಿ ಸರ್ಕಾರದ ನಿದೇರ್ಶನದಂತೆ ಜಿಲ್ಲಾಡಳಿತ ಸಾರ್ವಜನಿಕರಿಗೆ ತೊಂದರೆಯಾಗದಂತೆ ಖಾಸಗಿ ಬಸ್‌ ಸಂಚಾರಕ್ಕೆ ಅನುಮತಿ ನೀಡಿರುವುದರಿಂದ ಎರಡನೇ ದಿನವೂ ಎಡೆಬಿಡದೆ ಸಂಚಾರ ನಡೆಸಿದವು. ಶಾಲಾ- ಕಾಲೇಜು, ಸರ್ಕಾರಿ ಕಚೇರಿ, ಬೇರೆ ಊರುಗಳಿಗೆ ತೆರಳಬೇಕಾದ ಪ್ರಯಾಣಿಕರು ಖಾಸಗಿ ವಾಹನಗಳ ಮೂಲಕ ನಿರಾಯಸವಾಗಿ ತಲುಪಿದರು. ಮುಷ್ಕರದ ಮೊದಲ ದಿನ ಖಾಸಗಿ ಬಸ್‌ಗಳತ್ತ  ಮುಖ ಮಾಡದ ಜನರು ಎರಡನೇ ದಿನ ಜಿಲ್ಲೆಯ ಕಡೂರು, ತರೀಕೆರೆ, ಮೂಡಿಗೆರೆ, ಶೃಂಗೇರಿ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಗೂ ಪ್ರಯಾಣ ಬೆಳೆಸಿದರು.

ಗುರುವಾರ 10 ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ: ನೌಕರರ ಮುಷ್ಕರದ ನಡುವೆಯೇ ಚಿಕ್ಕಮಗಳೂರು ಡಿಪೋದಿಂದ ಗುರುವಾರ 10 ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ನಡೆಸಿವೆ. ಕಡೂರು ಪಟ್ಟಣದಿಂದ ಚಿಕ್ಕಮಗಳೂರು, ಚಿಕ್ಕಮಗಳೂರಿನಿಂದ ಮೂಡಿಗೆರೆ, ಚಿಕ್ಕಮಗಳೂರಿನಿಂದ ಆಲ್ದೂರು, ಅರಸೀಕೆರೆಯಿಂದ ಬಾಣಾವರ ಮಾರ್ಗದಲ್ಲಿ ಎರಡು ಬಸ್‌, ಬೇಲೂರು- ಸಕಲೇಶಪುರ ಮಾರ್ಗವಾಗಿ ಮೂರು ಬಸ್‌ ಹಾಗೂ ಮೂಡಿಗೆರೆ ಮತ್ತು ಕೊಟ್ಟಿಗೆಹಾರ ಮಾರ್ಗವಾಗಿ ಒಂದು ಬಸ್‌ ಸಂಚಾರ ನಡೆಸಿದೆ ಎಂದು ಚಿಕ್ಕಮಗಳೂರು ವಿಭಾಗನಿಯಂತ್ರಣಾಧಿಕಾರಿ ಎಚ್‌.ಟಿ. ವಿರೇಶ್‌ ಮಾಹಿತಿ ನೀಡಿದ್ದಾರೆ.

ಬಸ್‌ ಚಾಲಕನಿಗೆ ಧಮ್ಕಿ: ಕೆಎಸ್‌ಆರ್‌ಟಿಸಿ ಬಸ್‌ ಚಾಲಕನಿಗೆ ದೂರವಾಣಿಯಲ್ಲಿ ಧಮ್ಕಿ ಹಾಕಿರುವ ಘಟನೆ ಬುಧವಾರ ನಡೆದಿದ್ದು ಈ ಆಡೀಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದೆ. ಬಸ್‌ ಚಾಲಕ ಬಾಸ್ಕರ್‌ ಎಂಬುವರು ಚಿಕ್ಕಮಗಳೂರು ಡಿಪೋ ವ್ಯಾಪ್ತಿಗೆ ಒಳಪಡುವ ಸಕಲೇಶಪುರದಿಂದ ಬೇಲೂರು ಮಾರ್ಗವಾಗಿ ಬಸ್‌ ಚಲಾಯಿಸಿದ್ದಾರೆ.

ಈ ವಿಚಾರ ತಿಳಿದ ಸಕಲೇಶಪುರ ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷ ಚಾಲಕ ಭಾಸ್ಕರ್‌ ಅವರಿಗೆ ದೂರವಾಣಿ ಕರೆ ಮಾಡಿ ಅವಾಚ್ಯ  ಶದ್ಧಗಳಿಂದ ನಿಂ ದಿಸಿರುವ ಮತ್ತು ಧಮ್ಕಿ ಹಾಕಿರುವ ಆಡೀಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಎರಡನೇ ದಿನ ರಸ್ತೆಗಿಳಿದ 260 ಖಾಸಗಿ ಬಸ್‌ಗಳು: ನೌಕರರ ಮುಷ್ಕರದ ಎರಡನೇ ದಿನವಾದ ಗುರುವಾರ ಜಿಲ್ಲೆಯಲ್ಲಿ ಸುಮಾರು 260 ಖಾಸಗಿ ಬಸ್‌ಗಳು ಸಂಚಾರ ನಡೆಸಿವೆ. ಇವುಗಳೊಂದಿಗೆ ಟ್ಯಾಕ್ಸಿ, ಟಿಟಿ ವಾಹನಗಳು ಸಂಚರಿಸಿದವು. ವಿದ್ಯಾರ್ಥಿಗಳು, ಸಾರ್ವಜನಿಕರು ಖಾಸಗಿ ವಾಹನಗಳ ಮೊರೆ ಹೋದರೆ, ಕೆಲವರು ಸ್ವಂತವಾಹನಗಳ ಮೊರೆ ಹೋದರು. 110 ಲಕ್ಷ ರೂ.ಆದಾಯ ಖೋತಾ: ನೌಕರರ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟ ಪರಿಣಾಮ ಎರಡು ದಿನಗಳಲ್ಲಿ ಸುಮಾರು 110 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಪ್ರತೀ ನಿತ್ಯ 60 ರಿಂದ 70ಲಕ್ಷ ರೂ. ನಿಗಮಕ್ಕೆ ಆದಾಯ ಬರುತ್ತಿತ್ತು. ಈ ಎರಡು ದಿನಗಳಿಂದ ಬಸ್‌ ಸಂಚಾರ ಸಂಪೂರ್ಣ ಸ್ಥಗಿತಗೊಂಡ ಕಾರಣದಿಂದ ಭಾರೀ ನಷ್ಟ ಉಂಟಾಗಿದೆ.

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.