ಕಾಮಗಾರಿ ಅಂತ್ಯಕ್ಕೆ ಮೇ ಗಡುವು
Team Udayavani, Apr 16, 2021, 6:40 PM IST
ಚಿಕ್ಕಮಗಳೂರು: ಯು.ಜಿ.ಡಿ. ಮತ್ತು ಅಮೃತ್ ಯೋಜನೆಗೆ ಸಂಬಂಧಿ ಸಿದ ಎಲ್ಲಾ ಸಿವಿಲ್ ಕಾಮಗಾರಿಗಳನ್ನು ಮೇ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಅಧಿ ಕಾರಿಗಳಿಗೆ ಶಾಸಕ ಸಿ.ಟಿ. ರವಿ ಗಡುವು ನೀಡಿದರು.
ಗುರುವಾರ ನಗರದ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ಬಸವನಹಳ್ಳಿ ಕೆರೆಗೆ ಸಂಬಂ ಧಿಸಿದಂತೆ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿಗೆ ಸಂಬಂ ಧಿಸಿದಂತೆ ಒಳಚರಂಡಿ ವ್ಯವಸ್ಥೆ, ರಸ್ತೆ ಅಗಲೀಕರಣದಂತಹ ಕಾಮಗಾರಿಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದ ಅವರು, ಕಾಮಗಾರಿ ಪೂರ್ಣಗೊಳ್ಳದೇ ಇದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಮೃತ್ ಯೋಜನೆಯ ನಿರ್ಮಾಣದ ಸಂದರ್ಭದಲ್ಲಿ ಕಲ್ಯಾಣ ನಗರ, ಉಪ್ಪಳ್ಳಿ, ಗೌರಿ ಕಾಲುವೆ ಮುಂತಾದ ಸ್ಥಳಗಳಲ್ಲಿ ರಸ್ತೆ ದುರಸ್ತಿಗೊಂಡಿದ್ದು, ಅವುಗಳನ್ನು ಅತೀ ಶೀಘ್ರವಾಗಿ ಸರಿಪಡಿಸಲು ಕ್ರಮ ಕೈಗೊಳ್ಳಿ ಎಂದು ಅ ಧಿಕಾರಿಗಳಿಗೆ ಸೂಚಿಸಿದರು. ಪ್ರವಾಸೋದ್ಯಮ ಇಲಾಖೆಯ ವತಿಯಿಂದ ವಿವಿಧ ಕಾಮಗಾರಿಗಳಿಗಾಗಿ ಸುಮಾರು 152 ಕೋಟಿ ರೂ. ಮುಂಜೂರು ಮಾಡಲಾಗಿದ್ದು, ರತ್ನಗಿರಿ ಪಾರ್ಕ್, ಮಹಾತ್ಮ ಗಾಂಧಿ ಪಾರ್ಕ್ ಹಾಗೂ ಪ್ರವಾಸಿ ಸ್ಥಳಗಳ ರಸ್ತೆ ನಿರ್ಮಾಣ ಮತ್ತು ಪ್ರವಾಸಿ ಸ್ಥಳಗಳ ಕಾಮಗಾರಿಗಳ ಯೋಜನೆಗಳಿಗೆ ಸಂಬಂಧಿ ಸಿದ ಪ್ರಗತಿ ವಿವರಗಳನ್ನು ನೀಡಲಾಗುವುದು ಎಂದು ಹೇಳಿದರು.
2020-21ನೇ ಆರ್ಥಿಕ ಸಾಲಿನಲ್ಲಿ ಬಸವನಹಳ್ಳಿ ಕೆರೆಯ ಅಭಿವೃದ್ಧಿಗೆ ಸಂಬಂಧಿ ಸಿದ ಟೆಂಡರ್ ಕರೆಯಲಾಗಿದ್ದು, ಪ್ರವಾಸೋದ್ಯಮ ಇಲಾಖೆಯಿಂದ ಪರವಾನಗಿ ದೊರೆತ ಕೂಡಲೇ ಕಾಮಗಾರಿ ಕೈಗೊಳ್ಳಲಾಗುವುದು ಎಂದ ಅವರು, ಎ.ಐ.ಟಿ ಸರ್ಕಲ್ ನಿಂದ ಹಿರೇಮಗಳೂರು ಸರ್ಕಲ್‌ನ ಬೈಪಾಸ್ ರಸ್ತೆವರೆಗೆ 22ಮೀ ಅಗಲದ ರಸ್ತೆ ಅಗಲೀಕರಣದ ಜೊತೆಗೆ ರಸ್ತೆಯ ಮಧ್ಯದಲ್ಲಿ ಡಿವೈಡರ್ ಮತ್ತು ಲೈಟ್ ಗಳನ್ನು ಅಳವಡಿಸಲಾಗುವುದು ಎಂದರು. ಕೇಂದ್ರ ಸರ್ಕಾರದ ಸಹಯೋಗದಲ್ಲಿ 11.50 ಕೋಟಿ ರೂ. ಅನುದಾನದಲ್ಲಿ ಒಳಾಂಗಣ ಕ್ರೀಡಾಂಗಣ ಮತ್ತು ಸಿಂಥೆಟಿಕ್ ಟ್ರಾಕ್ ನಿರ್ಮಾಣ ಮಾಡಲು ಟೆಂಡರ್ ಕರೆಯಲಾಗು ವುದು ಎಂದ ಅವರು, ಮನೆ- ಮನೆ ಸಂಪರ್ಕಕ್ಕೆ ಟೆಂಡರ್ ಕಾಮಗಾರಿಗಳು ಬಾಕಿ ಉಳಿದಿದ್ದು ಪೂರ್ಣ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಧಿಕಾರಿ ಕೆ.ಎನ್. ರಮೇಶ್ ಮಾತನಾಡಿ, ಅಭಿವೃದ್ಧಿ ಕಾಮಗಾರಿಯಲ್ಲಿ ಬದಲಾವಣೆಗಳಿದ್ದರೆ ಟೆಂಡರ್ ಕರೆಯುವ ಮುಂಚೆಯೇ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು . ಮಳೆಗಾಲ ಶುರುವಾಗುವ ಮೊದಲೇ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಅಧಿ ಕಾರಿಗಳಿಗೆ ಸೂಚಿಸಿದರು. ಪ್ರವಾಸೋದ್ಯಮ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಇಲಾಖೆ, ಕುಡಿಯುವ ನೀರು ಸರಬರಾಜು ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಿದಲ್ಲಿ ಕಾಮಗಾರಿಗಳನ್ನು ನಿಗ ತ ಸಮಯದೊಳಗೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾ ಧಿಕಾರಿ ಬಿ.ಆರ್.ರೂಪ ಸೇರಿದಂತೆ ವಿವಿದ ಇಲಾಖೆಯ ಅ ಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.