ಹೊರ ಬಿತ್ತುಜಿಪಂ- ತಾಪಂ ಸ್ಥಾನಗಳ ಮೀಸಲಾತಿ
Team Udayavani, May 2, 2021, 6:49 PM IST
ಚಿಕ್ಕಮಗಳೂರು: ರಾಜ್ಯ ಚುನಾವಣಾ ಆಯೋಗ ಈ ಹಿಂದೆ ಜಿಪಂ ಮತ್ತು ತಾಪಂ ಕ್ಷೇತ್ರ ಪುನರ್ ವಿಂಗಡಣೆ ಮಾಡಿ ಕರಡು ಪ್ರತಿಯನ್ನು ಹೊರಡಿಸಿತ್ತು. ಸದ್ಯ ಈ ಕ್ಷೇತ್ರಗಳ ಮೀಸಲಾತಿಯನ್ನು ಪ್ರಕಟಿಸಿ ಆದೇಶ ಹೊರಡಿಸಿದೆ. ಚಿಕ್ಕಮಗಳೂರು ಜಿಲ್ಲೆ ಭೌಗೋಳಿಕವಾಗಿ ವಿಸ್ತಾರವಾಗಿದ್ದು, ಮಲೆನಾಡು ಮತ್ತು ಬಯಲು ಸೀಮೆ ಪ್ರದೇಶವನ್ನು ಒಳಗೊಂಡಿದೆ.
ತಾಪಂ ವ್ಯಾಪ್ತಿಯಲ್ಲಿ 96 ಕ್ಷೇತ್ರಗಳನ್ನು ಹೊಂದಿದ್ದರೆ, ಜಿಪಂ ವ್ಯಾಪ್ತಿಯಲ್ಲಿ 33 ಕ್ಷೇತ್ರಗಳನ್ನು ಒಳಗೊಂಡಿದೆ. ಚಿಕ್ಕಮಗಳೂರು ತಾಪಂ ವ್ಯಾಪ್ತಿಯ 15 ಸ್ಥಾನಗಳಲ್ಲಿ 8 ಸ್ಥಾನಗಳನ್ನು ಮೀಸಲಿಟ್ಟಿದ್ದು, ಮೂಡಿಗೆರೆಯ ತಾಪಂ ವ್ಯಾಪ್ತಿಯ 10 ಸ್ಥಾನಗಳಲ್ಲಿ 5 ಸ್ಥಾನಗಳನ್ನು ಮೀಸಲಿಡಲಾಗಿದೆ. ಕೊಪ್ಪ ತಾಲೂಕಿನ 11 ಸ್ಥಾನಗಳಲ್ಲಿ 6 ಸ್ಥಾನಗಳನ್ನು ಮೀಸಲಿಡಲಾಗಿದೆ. ಶೃಂಗೇರಿ ತಾಲೂಕಿನ 11ಸ್ಥಾನಗಳಲ್ಲಿ 6 ಸ್ಥಾನಗಳನ್ನು ಮೀಸಲಿಡಲಾಗಿದೆ. ನರಸಿಂಹರಾಜಪುರ ತಾಲೂಕಿನ 11ಸ್ಥಾನಗಳಲ್ಲಿ 6 ಸ್ಥಾನಗಳನ್ನು ಮೀಸಲಿಡಲಾಗಿದೆ. ಕಡೂರು ತಾಲೂಕಿನ 18 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಮೀಸಲಿರಿಸಲಾಗಿದೆ.
ತರೀಕೆರೆಯ 9 ಸ್ಥಾನಗಳಲ್ಲಿ 5 ಸ್ಥಾನಗಳನ್ನು ಮೀಸಲಿಡಲಾಗಿದೆ. ಅಜ್ಜಂಪುರ ತಾಲೂಕಿನ 11 ಸ್ಥಾನಗಳ ಪೈಕಿ 6 ಸ್ಥಾನಗಳನ್ನು ಮೀಸಲಿಡಲಾಗಿದೆ. ಜಿಪಂ 33 ಸ್ಥಾನಗಳ ಪೈಕಿ 17 ಸ್ಥಾನಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗದವರಿಗೆ ಮೀಸಲಿರಿಸಿದ್ದು, ಕ್ಷೇತ್ರಗಳ ಮೀಸಲಾತಿ ವಿವರ ಇಂತಿದೆ. ತಾಪಂ: ಚಿಕ್ಕಮಗಳೂರು ತಾಲೂಕು 15 ಸ್ಥಾನಗಳಲ್ಲಿ 8 ಸ್ಥಾನಗಳನ್ನು ಮೀಸಲಿಡಲಾಗಿದ್ದು, ಪರಿಶಿಷ್ಟ ಜಾತಿಗೆ 4 ಸ್ಥಾನಲಿಟ್ಟಿದೆ. ಅದರಲ್ಲಿ 2 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ. ಪರಿಶಿಷ್ಟ ಪಂಗಡದ ಮಹಿಳೆಗೆ 1 ಸ್ಥಾನ ಮೀಸಲಿಡಲಾಗಿದೆ. ಹಿಂದುಳಿದ ವರ್ಗ(ಎ)ಗೆ 2 ಸ್ಥಾನ ಮೀಸಲಿಟ್ಟಿದ್ದು, ಅದರಲ್ಲೊಂದು ಮಹಿಳೆ, ಸಾಮಾನ್ಯ ವರ್ಗಕ್ಕೆ 8 ಸ್ಥಾನ ಮೀಸಲಿಟ್ಟಿದ್ದು ಅದರಲ್ಲಿ 4 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ. ಮೂಡಿಗೆರೆ ತಾಲೂಕು ವ್ಯಾಪ್ತಿಯಲ್ಲಿ 10 ಸ್ಥಾನಗಳನ್ನು ಒಳಗೊಂಡಿದ್ದು, 5 ಸ್ಥಾನಗಳನ್ನು ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿಗೆ 3 ಸ್ಥಾನಗಳನ್ನು ಮೀಸಲಿಡಲಾಗಿದ್ದು, ಅದರಲ್ಲಿ 2 ಮಹಿಳೆಯರಿಗೆ, ಪರಿಶಿಷ್ಟ ಪಂಗಡದಲ್ಲಿ 1 ಸ್ಥಾನ ಮಹಿಳೆಗೆ ಮೀಸಲಿಡಲಾಗಿದೆ.
ಹಿಂದುಳಿದ ವರ್ಗ(ಎ) 1 ಸ್ಥಾನ ಪುರುಷರಿಗೆ 1 ಸ್ಥಾನ ಮಹಿಳೆಗೆ ಮೀಸಲಿಡಲಾಗಿದೆ. ಸಾಮಾನ್ಯ ವರ್ಗಕ್ಕೆ 5 ಸ್ಥಾನ ಮೀಸಲಿಟ್ಟಿದ್ದು ಅದರಲ್ಲಿ 1 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ. ಕೊಪ್ಪ ತಾಲೂಕು ವ್ಯಾಪ್ತಿಯಲ್ಲಿ 11 ಸ್ಥಾನಗಳ ಪೈಕಿ 6 ಸ್ಥಾನಗಳನ್ನು ಮೀಸಲಿಟ್ಟಿದ್ದು, ಪರಿಶಿಷ್ಟ ಜಾತಿಗೆ 1 ಸ್ಥಾನ, ಪುರುಷರಿಗೆ 1 ಸ್ಥಾನ ಮೀಸಲಿಡಲಾಗಿದೆ. ಪರಿಶಿಷ್ಟ ಪಂಗಡದ 1ಸ್ಥಾನ ಮಹಿಳೆಗೆ ಮೀಸಲಿಡಲಾಗಿದೆ. ಹಿಂದುಳಿವರ್ಗ(ಎ)ಗೆ 1ಸ್ಥಾನ ಪುರುಷರಿಗೆ 1ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ. ಸಾಮಾನ್ಯ ವರ್ಗಕ್ಕೆ 6 ಸ್ಥಾನಗಳನ್ನು ಮೀಸಲಿಟ್ಟಿದ್ದು ಅದರಲ್ಲಿ 3 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ.
ಶೃಂಗೇರಿ ತಾಲೂಕು ವ್ಯಾಪ್ತಿಯ 11 ಸ್ಥಾನಗಳಲ್ಲಿ 6 ಸ್ಥಾನಗಳನ್ನು ಮೀಸಲಿಡಲಾಗಿದ್ದು, ಪರಿಶಿಷ್ಟ ಜಾತಿಗೆ 1 ಸ್ಥಾನ ಮಹಿಳೆಯರಿಗೆ, ಪರಿಶಿಷ್ಟ ಪಂಗಡ 1 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ. ಹಿಂದುಳಿದ ವರ್ಗ(ಎ) 2 ಸ್ಥಾನ ಮಹಿಳೆಯರಿಗೆ ಮೀಸಲು, ಹಿಂದುಳಿದ ವರ್ಗ(ಬಿ) 1ಸ್ಥಾನ ಪುರುಷರಿಗೆ ಮೀಸಲಿಡಲಾಗಿದೆ. ಸಾಮಾನ್ಯ ವರ್ಗಕ್ಕೆ 6 ಸ್ಥಾನ ಮೀಸಲಿಟ್ಟಿದ್ದು, ಅದರಲ್ಲಿ 2 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ. ನರಸಿಂಹರಾಜಪುರ ತಾಲೂಕು ವ್ಯಾಪ್ತಿಯ 11 ಸ್ಥಾನಗಳಲ್ಲಿ 6 ಸ್ಥಾನಗಳನ್ನು ಮೀಸಲಿಡಲಾಗಿದ್ದು ಪರಿಶಿಷ್ಟ ಜಾತಿ 1 ಸ್ಥಾನ ಪುರುಷರಿಗೆ 1 ಸ್ಥಾನ ಮಹಿಳೆಗೆ ಮೀಸಲಿಡಲಾಗಿದೆ. ಪರಿಶಿಷ್ಟ ಪಂಗಡ 1 ಸ್ಥಾನ ಮಹಿಳೆಗೆ ಮೀಸಲಿಡಲಾಗಿದೆ.
ಹಿಂದುಳಿದ ವರ್ಗ(ಎ)ಗೆ 1 ಸ್ಥಾನ ಪುರುಷ 1ಸ್ಥಾನ ಮಹಿಳೆಗೆ ಮೀಸಲು. ಸಾಮಾನ್ಯ ವರ್ಗಕ್ಕೆ 6 ಸ್ಥಾನ ಮೀಸಲಿಟ್ಟಿದ್ದು, ಅದರಲ್ಲಿ 3 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ. ಕಡೂರು ತಾಲೂಕು ವ್ಯಾಪ್ತಿಯಲ್ಲಿ ಬರುವ 18 ಸ್ಥಾನಗಳ ಪೈಕಿ 9 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿ 3 ಸ್ಥಾನ ಮೀಸಲಿಟ್ಟಿದ್ದು, ಅದರಲ್ಲಿ 2 ಸ್ಥಾನ ಮಹಿಳೆಯರಿಗೆ ಮೀಸಲು, ಪರಿಶಿಷ rಪಂಗಡ 1ಸ್ಥಾನ ಮಹಿಳೆಗೆ ಮೀಸಲು, ಹಿಂದುಳಿದ ವರ್ಗ(ಎ) 3 ಸ್ಥಾನಗಳಲ್ಲಿ 2 ಸ್ಥಾನ ಮಹಿಳೆಯರಿಗೆ, ಹಿಂದುಳಿದ ವರ್ಗ(ಬಿ) 1ಸ್ಥಾನ ಪುರುಷರಿಗೆ ಮೀಸಲು, ಸಾಮಾನ್ಯ ವರ್ಗಕ್ಕೆ 9 ಸ್ಥಾನಗಳನ್ನು ಮೀಸಲಿಟ್ಟಿದ್ದು 4 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ತರೀಕೆರೆ ತಾಲೂಕು ವ್ಯಾಪ್ತಿಯ 9 ಸ್ಥಾನಗಳಲ್ಲಿ 5 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಪರಿಶಿಷ್ಟ ಪಂಗಡಕ್ಕೆ 3 ಸ್ಥಾನಗಳಲ್ಲಿ 2 ಸ್ಥಾನ ಮಹಿಳೆಯರಿಗೆ, ಪರಿಶಿಷ್ಟ ಪಂಗಡ 1 ಸ್ಥಾನ ಮಹಿಳೆಯರಿಗೆ. ಸಾಮಾನ್ಯ ವರ್ಗಕ್ಕೆ 5 ಸ್ಥಾನ ಮೀಸಲಿಟ್ಟಿದು,ª ಅದರಲ್ಲಿ 2 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ. ಅಜ್ಜಂಪುರ ತಾಲೂಕು ವ್ಯಾಪ್ತಿಯ 11 ಸ್ಥಾನಗಳಲ್ಲಿ 6 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿ 1ಸ್ಥಾನ ಮಹಿಳೆ 1ಸ್ಥಾನ ಪುರುಷರಿಗೆ, ಪರಿಶಿಷ್ಟ ಪಂಗಡ 1ಸ್ಥಾನ ಮಹಿಳೆಯರಿಗೆ, ಹಿಂದುಳಿವರ್ಗ(ಎ) 1ಸ್ಥಾನ ಮಹಿಳೆ, 1ಸ್ಥಾನ ಪುರುಷರಿಗೆ ಸಾಮಾನ್ಯ ವರ್ಗಕ್ಕೆ 6 ಸ್ಥಾನಗಳನ್ನು ಮೀಸಲಿಟ್ಟಿದ್ದು 3 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ.
ಜಿಲ್ಲಾ ಪಂಚಾಯತ್: ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ 33 ಸ್ಥಾನಗಳ ಪೈಕಿ 17 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿ 8 ಸ್ಥಾನಗಳನ್ನು ಮೀಸಲಿಟ್ಟಿದ್ದು, ಅದರಲ್ಲಿ 4 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಪರಿಶಿಷ್ಟ ಪಂಗಡಕ್ಕೆ 1 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ. ಹಿಂದುಳಿದ ವರ್ಗ(ಎ) 6 ಸ್ಥಾನಗಳನ್ನು ಮೀಸಲಿಟ್ಟಿದ್ದು, ಅದರಲ್ಲಿ 3 ಸ್ಥಾನಗಳನ್ನು ಮಹಿಳೆಯರಿಗೆ, ಹಿಂದುಳಿದ ವರ್ಗ(ಬಿ) 1 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ. ಸಾಮಾನ್ಯ ವರ್ಗಕ್ಕೆ 17 ಸ್ಥಾನಗಳನ್ನು ಮೀಸಲಿಟ್ಟಿದ್ದು, ಅದರಲ್ಲಿ 8 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.