32 ಗ್ರಾಪಂ ಚುನಾವಣೆ ಶಾಂತಿಯುತ
Team Udayavani, Mar 30, 2021, 2:51 PM IST
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅವಧಿ ಮುಗಿದಹಾಗೂ ವಿವಿಧ ಕಾರಣಾಂತರದಿಂದ ಚುನಾವಣೆ ನಡೆಯದೆ ಇದ್ದ ಗ್ರಾಪಂಗಳಿಗೆ ಚುನಾವಣೆ ಪ್ರಕ್ರಿಯೆ ಸೋಮವಾರ ನಡೆಯಿತು.
32 ಗ್ರಾಪಂನ 663 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಮತಪೆಟ್ಟಿಗೆಯಲ್ಲಿ ಭದ್ರಪಡಿಸಿದರು.ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಮತದಾನ ಪ್ರಕ್ರಿಯೆ ನಡೆದು ಮತದಾರರು ಸರತಿ ಸಾಲಿನಲ್ಲಿನಿಂತು ಮತ ಚಲಾಯಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯಿಂದ ಭದ್ರತೆ ಕೈಗೊಳ್ಳಲಾಗಿತ್ತು.ಬಿಸಿಲ ಬೇಗೆಯ ನಡುವೆ ಮತಕೇಂದ್ರಗಳಲ್ಲಿಚೀಟಿ ಹಿಡಿದು ಸಾಲಾಗಿ ನಿಂತ ಮತದಾರರುತಮ್ಮ ಅಭ್ಯರ್ಥಿಗಳಿಗೆ ಮತ ಚಲಾಯಿಸಿದರು.
ಶನಿವಾರವೇ ಮತಕೇಂದ್ರಗಳಿಗೆ ತೆರಳಿಸಿ ಚುನಾವಣಾಧಿಕಾರಿಗಳು ಮತ್ತು ಸಿಬ್ಬಂದಿ ಮತದಾರರ ಪಟ್ಟಿ ಪರಿಶೀಲನೆ ನಡೆಸಿಕೋವಿಡ್ ಮುಂಜಾಗ್ರತೆ ಕೈಗೊಂಡ ಬಳಿಕಮತದಾನ ಪ್ರಕ್ರಿಯೆಗೆ ಅವಕಾಶ ನೀಡಿದರು.ಗ್ರಾಪಂ ಚುನಾವಣೆಗೆ ಜಿಲ್ಲೆಯಲ್ಲಿ 146 ಮತಕೇಂದ್ರಗಳನ್ನು ತೆರೆಯಲಾಗಿದ್ದು 685 ಚುನಾವಣಾ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸಿದರು.
ಅವಧಿ ಮುಗಿದ ಚಿಕ್ಕಮಗಳೂರು, ಕಡೂರು, ಕೊಪ್ಪ, ಮೂಡಿಗೆರೆಗ್ರಾಪಂಗಳ 38,564 ಮಂದಿ ಮತದಾರರುಮತ ಚಲಾಯಿಸಿದರು. ಶೇ.81.42ರಷ್ಟುಮತದಾನವಾದರೆ ವಿವಿಧ ಕಾರಣಗಳಿಂದಚುನಾವಣೆ ನಡೆಯದೇ ಬಾಕಿ ಉಳಿದಿದ್ದಚಿಕ್ಕಮಗಳೂರು, ಕಡೂರು, ಕೊಪ್ಪ, ಮೂಡಿಗೆರೆಹಾಗೂ ಎನ್.ಆರ್. ಪುರ ತಾಲೂಕಿನ ಗ್ರಾಪಂನ31215 ಮತದಾರರು ಮತ ಚಲಾಯಿಸಿದರು.ಶೇ. 77.22ರಷ್ಟು ಮತದಾನ ನಡೆದಿದೆ ಎಂದು ಚುನಾವಣಾ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.