ಪಡಿತರ ಚೀಟಿ ಇಲ್ಲದವರಿಗೆ ಧಾನ್ಯ ವಿತರಣೆ
Team Udayavani, Apr 9, 2020, 4:14 PM IST
ಚಿಕ್ಕಜಾಜೂರು: ಸವಿತಾ ಸಮಾಜದವರಿಗೆ ಆಹಾರ ಸಾಮಗ್ರಿ ವಿತರಿಸಲಾಯಿತು
ಚಿಕ್ಕಜಾಜೂರು: ಗ್ರಾಮದ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ಹೊಳಲ್ಕೆರೆ ತಾಲೂಕು ಬಿಜೆಪಿ ಅಧ್ಯಕ್ಷ ಸಿದ್ದೇಶ್ ನೇತೃತ್ವದಲ್ಲಿ ಜಿಲ್ಲಾ ಸವಿತಾ ಸಮಾಜ ಸಂಘ ಹಾಗೂ ಹೊಳಲ್ಕೆರೆ ತಾಲೂಕು ಸವಿತಾ ಸಮಾಜದ ವತಿಯಿಂದ ಸಂಗ್ರಹಿಸಲಾಗಿದ್ದ ಆಹಾರ ಸಾಮಗ್ರಿ ಕಿಟ್ ಸವಿತಾ ಸಮಾಜದ ಬಂಧುಗಳಿಗೆ ವಿತರಿಸಲಾಯಿತು.
ಹೊಳಲ್ಕೆರೆ ತಾಲೂಕು ತಹಶೀಲ್ದಾರ್ ನಾಗರಾಜ್ ಮಾತನಾಡಿ, ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಸರ್ಕಾರ ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ. ತಾಲೂಕಿನಾದ್ಯಂತ ಪಡಿತರ ಚೀಟಿ ಹೊಂದದ ಕುಟುಂಬಗಳನ್ನು ಗುರುತಿಸಿ ಅವರಿಗೆ ಅಗತ್ಯ ವಸ್ತು ಪೂರೈಸುತ್ತಿದ್ದೇವೆ ಎಂದರು. ತಾಲೂಕು ಬಿಜೆಪಿ ಅಧ್ಯಕ್ಷ ಸಿದ್ದೇಶ್ ಮಾತನಾಡಿ, ಸವಿತಾ ಸಮಾಜದ ಬಡ ಕುಟುಂಬಗಳನ್ನು ಗುರುತಿಸಿ ಅಧಿಕಾರಿಗಳ ಸಹಕಾರದೊಂದಿಗೆ 10 ಕೆಜಿ ರಾಗಿ, 5ಕೆಜಿ ಅಕ್ಕಿ, 2ಕೆಜಿ ರವೆ, 2 ಕೆಜಿ ಅಕ್ಕಿಹಿಟ್ಟು, 2 ಬಟ್ಟೆ ಸೋಪು, ತೊಗರಿಬೇಳೆ, ಬೆಲ್ಲ, ಅಡುಗೆ ಎಣ್ಣೆ, ಉಪ್ಪು ತಲಾ 1ಕೆಜಿಯಂತೆ ಆಹಾರ ಸಾಮಗ್ರಿಗಳ ಕಿಟ್ ನೀಡಲಾಗುತ್ತಿದೆ ಎಂದರು.
ಚಿಕ್ಕಜಾಜೂರು ಗ್ರಾಪಂ ಅಧ್ಯಕ್ಷ ಡಿಸಿ ಮೋಹನ್, ಪಿಎಸ್‌ಐ ಮೋಹನ್‌ಕುಮಾರ್, ರವಿಕುಮಾರ್, ಚಿದಾನಂದ, ಬಸವರಾಜು, ಜಗದೀಶ್, ಬಂಡೆ ಬಸಣ್ಣ, ಶಿವಕುಮಾರ್ ಹೆಗ್ಗೆರೆ, ದೇವರಾಜ್ ಸಾಸಲು, ರಾಜಣ್ಣ, ಕೃಷ್ಣಮೂರ್ತಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ
Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.