ಸರ್ಕಾರ ಕಠಿಣ ಲಾಕ್‌ಡೌನ್‌ಗೆ ಮುಂದಾಗಲಿ

Team Udayavani, May 9, 2021, 10:29 PM IST

9-23

ಚಿಕ್ಕಮಗಳೂರು: ಕೋವಿಡ್‌ ನಿಯಂತ್ರಣಕ್ಕೆ ಸಿಲುಕದ ಪರಿಸ್ಥಿತಿ ತಲುಪಿದೆ. ಸೋಂಕಿತರು ಚಿಕಿತ್ಸೆ ಸಿಗದೆ ಮೃತಪಡುತ್ತಿದ್ದಾರೆ. ಆದ್ದರಿಂದ ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕಠಿಣ ಲಾಕ್‌ಡೌನ್‌ಗೆ ಮುಂದಾಗಬೇಕೆಂದು ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌. ಭೋಜೇಗೌಡ ಒತ್ತಾಯಿಸಿದರು.

ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್‌ಡೌನ್‌ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಸಚಿವರು ಮತ್ತು ಸರ್ಕಾರದ ಮುಖ್ಯ ಕಾರ್ಯ ದರ್ಶಿ ಹೇಳಿಕೆಯಲ್ಲಿ ಗೊಂದಲವಿದೆ. ಇದರಿಂದ ಜನರು ಗೊಂದಲಕ್ಕೆ ಒಳಗಾಗಿದ್ದಾರೆ. ಸರ್ಕಾರದಲ್ಲಿ ಸಮನ್ವಯತೆ ಇಲ್ಲದಿರುವುದು ಎದ್ದು ಕಾಣುತ್ತಿದೆ ಎಂದರು.

ಸೋಂಕು ನಿಯಂತ್ರಣಕ್ಕೆ ದೆಹಲಿ ಮುಖ್ಯಮಂತ್ರಿ ಮೂರನೇ ಬಾರಿ ಲಾಕ್‌ಡೌನ್‌ ವಿ ಧಿಸಿದ್ದಾರೆ. ಆದರೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪದೇ ಪದೇ ಕೇಂದ್ರದ ನಿರ್ಧಾರಕ್ಕಾಗಿ ಕಾಯುತ್ತಿದ್ದಾರೆ. ರಾಜ್ಯದ ಒಳಿತಿಗೆ ಏನು ತೀರ್ಮಾನ ತೆಗೆದುಕೊಳ್ಳಬೇಕು ಎನ್ನುವುದು ಮುಖ್ಯಮಂತಿಗಳಿಗೆ ಗೊತ್ತಿರಬೇಕು. ಈ ಗೊಂದಲದಿಂದ ರಾಜ್ಯದ ಜನರು ಪರಿತಪಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕೋವಿಡ್‌ ಎರಡನೇ ಅಲೆ ಉಲ್ಬಣವಾಗಲಿದೆ ಎಂದು ತಜ್ಞರ ಸಮಿತಿ ಒಂದು ತಿಂಗಳ ಹಿಂದೆಯೇ ಎಚ್ಚರಿಸಿತ್ತು. ಪ್ರತೀ ದಿನ 50 ಸಾವಿರಕ್ಕೂ ಹೆಚ್ಚು ಸೋಂಕಿತರು ಕಂಡು ಬರಲಿದ್ದಾರೆ ಎಂದು ಹೇಳಿದ್ದರು. ಸರ್ಕಾರ ಯಾವುದೇ ಪೂರ್ವಸಿದ್ಧತೆ ಮಾಡಿಕೊಳ್ಳದೆ ಇಂದು ಜನರು ಬೀದಿಯಲ್ಲಿ ಸಾಯುವ ಪರಿಸ್ಥಿತಿ ಬಂದಿದೆ. ಇಷ್ಟರ ಮೇಲೂ ಸರ್ಕಾರ ಎಚ್ಚೆತ್ತುಕೊಳ್ಳದೆ ಕೇಂದ್ರ ಸರ್ಕಾರದ ನಿರ್ಧಾರಕ್ಕಾಗಿ ಕಾಯುತ್ತಿದೆ ಎಂದರೆ ಏನರ್ಥ ಎಂದು ಪ್ರಶ್ನಿಸಿದರು.

ಅಂತರ್‌ ಜಿಲ್ಲೆ ಸಂಚಾರ ನಿರ್ಬಂಧಿ ಸಿ ಸರ್ಕಾರ ಆದೇಶ ಹೊರಡಿಸಿದ್ದು ಸೋಮವಾರದಿಂದ ಜಾರಿಯಾಗಲಿದೆ. ಪಟ್ಟಣ ಪ್ರದೇಶದಿಂದ ಗ್ರಾಮೀಣ ಪ್ರದೇಶಕ್ಕೆ ಜನರು ಬರುತ್ತಿದ್ದು, ಹಳ್ಳಿಗಳ ಪರಿಸ್ಥಿತಿ ಇನಷ್ಟು ಕಷ್ಟವಾಗಲಿದೆ. ಈಗಾಗಲೇ ಹಳ್ಳಿಗಳಲ್ಲೂ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಸೋಂಕು ಹೆಚ್ಚಳವಾದರೆ ಪರಿಸ್ಥಿತಿ ಮತ್ತಷ್ಟು ಕಷ್ಟವಾಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕಠಿಣ ಲಾಕ್‌ಡೌನ್‌ಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಸಚಿವ ಸೋಮಶೇಖರ್‌ ಕೋವಿಡ್‌ನಿಂದ ಮೃತಪಟ್ಟ ಕುಟುಂಬಕ್ಕೆ 50 ಸಾವಿರ ಪರಿಹಾರ ನೀಡುವುದಾಗಿ ಹೇಳುತ್ತಿದ್ದು, ನಿಮ್ಮ ಪರಿಹಾರ ಯಾರಿಗೆ ಬೇಕು. ಮೊದಲು ಸೋಂಕಿತರಿಗೆ ಚಿಕಿತ್ಸೆ ನೀಡಲು ಹಾಸಿಗೆ ಮತ್ತು ಆಕ್ಸಿಜನ್‌ ಒದಗಿಸಿ. ತೇಜಸ್ವಿ ಸೂರ್ಯ ಬೆಂಗಳೂರಿನಲ್ಲಿ ಬೆಡ್‌ ಬ್ಲಾಕಿಂಗ್‌ ಪತ್ತೆ ಹಚ್ಚಿದ್ದು, ಕೇಂದ್ರ ಮತ್ತು ರಾಜ್ಯದಲ್ಲಿ ನಿಮ್ಮದೇ ಸರ್ಕಾರವಿದೆ. ಆದರೂ ಇಂತಹ ಘಟನೆ ನಡೆಯುತ್ತಿದೆ ಎಂದರೆ ಈ ಸರ್ಕಾರಕ್ಕೆ ಮುಜುಗರವಾಗಬೇಕು ಎಂದರು.

ಟಾಪ್ ನ್ಯೂಸ್

Kanguva Movie: ಪ್ರೇಕ್ಷಕರ ಮನದಲ್ಲಿ ಕಂಗೊಳಿಸಿದ ʼಕಂಗುವʼ..ಸಿನಿಮಾ ನೋಡಿದವರು ಹೇಳಿದ್ದೇನು?

Kanguva Movie: ಪ್ರೇಕ್ಷಕರ ಮನದಲ್ಲಿ ಕಂಗೊಳಿಸಿದ ʼಕಂಗುವʼ..ಸಿನಿಮಾ ನೋಡಿದವರು ಹೇಳಿದ್ದೇನು?

IPL 2025: My preference is a team that gives freedom: KL Rahul

IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್‌.ರಾಹುಲ್‌

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಶೂಟರ್

Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ

INDvsSA: Arshadeep Singh breaks Bhuvneshwar Kumar’s T20I record

INDvsSA: ಭುವನೇಶ್ವರ್‌ ಕುಮಾರ್‌ ರ ಟಿ20ಐ ದಾಖಲೆ ಮುರಿದ ವೇಗಿ ಅರ್ಶದೀಪ್‌ ಸಿಂಗ್

Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್‌ ಸಿಲಿಂಡರ್‌ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!

Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್‌ ಸಿಲಿಂಡರ್‌ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

19-naxalite

Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ

17-2

ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

MUST WATCH

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

ಹೊಸ ಸೇರ್ಪಡೆ

Kanguva Movie: ಪ್ರೇಕ್ಷಕರ ಮನದಲ್ಲಿ ಕಂಗೊಳಿಸಿದ ʼಕಂಗುವʼ..ಸಿನಿಮಾ ನೋಡಿದವರು ಹೇಳಿದ್ದೇನು?

Kanguva Movie: ಪ್ರೇಕ್ಷಕರ ಮನದಲ್ಲಿ ಕಂಗೊಳಿಸಿದ ʼಕಂಗುವʼ..ಸಿನಿಮಾ ನೋಡಿದವರು ಹೇಳಿದ್ದೇನು?

IPL 2025: My preference is a team that gives freedom: KL Rahul

IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್‌.ರಾಹುಲ್‌

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.