ಕೊರೊನಾ ಚಿಕಿತ್ಸೆಗೆ ಸ್ಪಂದಿಸದ ಖಾಸಗಿ ಆಸ್ಪತ್ರೆ ವಿರುದ್ಧ ಕ್ರಮ

Team Udayavani, May 12, 2021, 7:49 PM IST

12-19

ಚಿಕ್ಕಮಗಳೂರು: ಸರ್ಕಾರ ನಿಗ ದಿಪಡಿಸಿರುವಂತೆ ಖಾಸಗಿ ಆಸ್ಪತ್ರೆಯಲ್ಲಿ ಶೇ.50ರಷ್ಟು ಹಾಸಿಗೆ ಮೀಸಲಿಡಲಾಗಿದೆಯೇ, ಸರ್ಕಾರಿ ಆಸ್ಪತ್ರೆ ಶಿಫಾರಸ್ಸಿನ ಮೇಲೆ ಕಳಿಸಿದ ಸೋಂಕಿತನಿಗೆ ಹಾಸಿಗೆ ನೀಡಲಾಗಿದೆಯೇ ಎಂಬುದನ್ನು ಪರಿಶೀಲನೆ ನಡೆಸಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಸ್ಪಂ  ದಿಸದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಅಂಗಾರ ಜಿಲ್ಲಾ ಧಿಕಾರಿಗೆ ಸೂಚಿಸಿದರು.

ಮಂಗಳವಾರ ನಗರದ ಜಿಪಂ ಸಭಾಂಗಣದಲ್ಲಿ ಕೊರೊನಾ ಸೋಂಕು ನಿಯಂತ್ರಣ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ಶಿಫಾರಸ್ಸು ಮಾಡಿದ ಸೋಂಕಿತನಿಗೆ ಹಾಸಿಗೆ ವ್ಯವಸ್ಥೆ ಮಾಡಿದ್ದಾರೋ ಅಥವಾ ಅವರು ದಾಖಲಿಸಿಕೊಂಡ ಸೋಂಕಿತನಿಗೆ ನೀಡಿದ್ದಾರೋ ಎಂಬ ಮಾಹಿತಿ ಸಂಗ್ರಹಿಸಬೇಕು. ಪ್ರತೀದಿನದ ಹೆಲ್ತ್‌ ಬುಲೆಟಿನ್‌ ಮಾಹಿತಿ ಪ್ರತಿಯೊಬ್ಬ ಶಾಸಕರಿಗೂ ತಿಳಿಸಬೇಕು.

ಅಧಿಕಾರಿಗಳು ಮತ್ತು ಜನಪ್ರತಿನಿ ಧಿಗಳು ಒಟ್ಟಾಗಿ ಕೆಲಸ ನಿರ್ವಹಿಸಿದಾಗ ಸೋಂಕು ನಿಯಂತ್ರಣಕ್ಕೆ ತರಲು ಸಾಧ್ಯ. ಕೊರೊನಾ ತಡೆಗೆ ಗ್ರಾಮಮಟ್ಟದಲ್ಲಿ ರಚನೆ ಮಾಡಿರುವ ಕಾರ್ಯಪಡೆ ಕ್ರಿಯಾಶೀಲ ವಾಗಿ ಕಾರ್ಯ ನಿರ್ವಹಿಸುತ್ತಿರುವಂತೆ ಕಾಣುತ್ತಿಲ್ಲ, ಈ ಪಡೆಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು. ಆಶಾ ಕಾರ್ಯಕರ್ತೆಯರ ವಿರುದ್ಧ ಉಡಾಫೆಯಾಗಿ ಮಾತನಾಡುವವರ ವಿರುದ್ಧ ಕ್ರಮ ಕೈಗೊಂಡರೆ, ಬೇರೆಯವರಿಗೂ ಭಯ ಬರುತ್ತದೆ. ಆಶಾ ಕಾರ್ಯಕರ್ತೆಯರಿಗೆ ಧೈರ್ಯ ತುಂಬಿದಂತಾಗುತ್ತದೆ ಎಂದು ಅ ಧಿಕಾರಿಗಳಿಗೆ ತಿಳಿಸಿದರು.

ಸದ್ಯ ಸೋಂಕಿನ ಪ್ರಮಾಣ ನಿಧಾನವಾಗಿ ಕಡಿಮೆಯಾಗುತ್ತಿದೆ. ಗ್ರಾಮಗಳ ಮಟ್ಟದಲ್ಲಿ ಕಾರ್ಯ ನಿರ್ವಹಿಸುವ ಅ ಧಿಕಾರಿಗಳಿಗೆ ಧೈರ್ಯ ತುಂಬುವ ಕೆಲಸವಾಗಬೇಕು. ಸೋಂಕು ಕಡಿಮೆಯಾಗುತ್ತಿದೆ ಎಂದು ನಿರ್ಲಕ್ಷé ವಹಿಸುವುದು ಬೇಡ. ಎಂದರು. ಅಧಿ ಕಾರಿಗಳು ಮತ್ತು ಸಿಬ್ಬಂದಿ ಕ್ರಿಯಾಶೀಲವಾಗಿ ಕೆಲಸ ಮಾಡಬೇಕು. ಪದೇ ಪದೇ ಹೇಳಿಸಿಕೊಳ್ಳಬಾರದು. ಆಂಬ್ಯುಲೆನ್ಸ್‌ಗಳಿಗೆ ಚಾಲಕರನ್ನು ನೇಮಿಸಿಕೊಳ್ಳುವಂತೆ ತಿಳಿಸಿದರು. ಯಾಕೆ ಇನ್ನೂ ನೇಮಕ ಮಾಡಿಕೊಂಡಿಲ್ಲವೆಂದು ಪ್ರಶ್ನಿಸಿದ ಅವರು, ಸೋಂಕಿತರ ಮನಸ್ಸಿನ ಭಾವನೆ ಮತ್ತು ಅವರ ನೋವನ್ನು ಅರ್ಥ ಮಾಡಿಕೊಳ್ಳಬೇಕಿದೆ ಎಂದರು.

ಜಿಲ್ಲಾ ಧಿಕಾರಿ ಕೆ.ಎನ್‌. ರಮೇಶ್‌ ಮಾತನಾಡಿ, ಇದೇ ಪರಿಸ್ಥಿತಿ ಮುಂದುವರೆದರೆ, ಪರಿಸ್ಥಿತಿ ಗಂಭೀರವಾಗಲಿದೆ. ಪ್ರತೀ ನಿತ್ಯ 1,400 ರಿಂದ 1,500 ಸೋಂಕು ಪರೀಕ್ಷೆ ನಡೆಸಲಾಗುತ್ತಿದೆ. ಮಾನವೀಯತೆಯ ದೃಷ್ಟಿಯಿಂದ ಖಾಸಗಿ ಆಸ್ಪತ್ರೆಗಳಲ್ಲಿರುವ ಸೋಂಕಿತರಿಗೂ ಆಮ್ಲಜನಕ ಸರಬರಾಜು ಮಾಡಲಾಗಿದೆ ಎಂದರು.

ಜಿಪಂ ಸಿಇಒ ಎಸ್‌. ಪೂವಿತ ಮಾತನಾಡಿ, ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ರಚಿಸಲಾಗಿದೆ. ಗ್ರಾಮಸ್ಥರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಸಭೆಗೆ ತಿಳಿಸಿದರು. ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ. ಕುಮಾರಸ್ವಾಮಿ ಮಾತನಾಡಿ, ಕೋವಿಡ್‌ ನಿಯಂತ್ರಣಕ್ಕೆ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸಿದ್ದು, ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಪೊಲೀಸರು ಜನರ ಮೇಲೆ ಅತಿಯಾದ ಬಲ ಪ್ರಯೋಗಕ್ಕೆ ಮುಂದಾಗಬಾರದು ಎಂದು ಮನವಿ ಮಾಡಿದರು. ಶಾಸಕ ಸಿ.ಟಿ.ರವಿ ಮತ್ತಿತರ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

Lokayukta

Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

17-uv-fusion

Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.