ಇಂದಿರಾ ಕ್ಯಾಂಟೀನ್‌ಗೆ ಶಾಸಕ ಬೆಳ್ಳಿಪ್ರಕಾಶ್ ಭೇಟಿ
Team Udayavani, May 14, 2021, 9:43 PM IST
ಕಡೂರು: ಶಾಸಕ ಬೆಳ್ಳಿಪ್ರಕಾಶ್ ಪಟ್ಟಣದ ಕೆ.ಎಲ್.ವಿ. ವೃತ್ತದಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು. ಕ್ಯಾಂಟೀನ್‌ಗೆ ಭೇಟಿ ನೀಡಿದ ಅವರು ಅಲ್ಲಿನ ಅಡುಗೆ ಮನೆಯನ್ನು ಪರಿಶೀಲಿಸಿ ನಂತರ ಅಲ್ಲಿ ಗ್ರಾಹಕರಿಗೆ ನೀಡಲು ಸಿದ್ಧಪಡಿಸಿದ್ದ ಟೊಮ್ಯಾಟೋ ಬಾತ್ ಅನ್ನು ಸ್ವತಃ ಕೇಳಿ ಪಡೆದು ರುಚಿ ನೋಡಿದರು.
ಸರ್ಕಾರದ ಆದೇಶದಂತೆ ಇಂದಿರಾ ಕ್ಯಾಂಟೀನ್‌ನಲ್ಲಿ ಬಡವರು, ನಿರ್ಗತಿಕರಿಗೆ ಉಚಿತವಾಗಿ ಉಪಾಹಾರ ನೀಡುವ ಪ್ರಕ್ರಿಯೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಲು ಸೂಚನೆ ನೀಡಿದರು. ಪ್ರತಿನಿತ್ಯ ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆ ಸುಮಾರು 900 ಜನರಿಗೆ ಉಪಾಹಾರ ನೀಡಲಾಗುತ್ತಿದೆ. ಹೆಚ್ಚು ಕಾರ್ಮಿಕರು ಇಲ್ಲಿ ಉಪಾಹಾರ ಸೇವಿಸುತ್ತಾರೆ. ಯಾವುದೇ ತೊಂದರೆಯಾಗದಂತೆ ಎಲ್ಲಾ ರೀತಿಯ ಸುರಕ್ಷತಾ ಕ್ರಮ ಅಳವಡಿಸಿಕೊಂಡು ಉಪಾಹಾರ ಸಿದ್ಧಪಡಿಸಿ ನೀಡಲಾಗುತ್ತಿದೆ ಎಂದು ಪುರಸಭೆ ಮುಖ್ಯಾ ಧಿಕಾರಿ ಎಚ್.ಎನ್. ಮಂಜುನಾಥ್ ವಿವರ ನೀಡಿದರು.
ಪುರಸಭೆಯಿಂದ ಇಂದಿರಾ ಕ್ಯಾಂಟೀನ್ ಮುಂದೆ ತರಕಾರಿ ಮಾರಾಟ ಮಾಡುವವರಿಗೆ ಅಂತರ ಕಾಪಾಡಲು ಅನುವಾಗುವಂತೆ ಬಾಕ್ಸ್ ಗುರುತು ಮಾಡಿದ್ದು ನಿಗ ದಿತ ಸಮಯದಲ್ಲಿ ಮಾರಾಟ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಗ್ರಾಹಕರಿಗೂ ಬಾಕ್ಸ್ ರಚಿಸಲಾಗಿದೆ ಎಂದು ವಿವರ ನೀಡಿದರು. ಪುರಸಭೆಯ ಪರಿಸರ ಇಂಜಿನಿಯರ್ ಶ್ರೇಯಸ್, ವಕ್ತಾರ ಶಾಮಿಯಾನ ಚಂದ್ರು, ಗುತ್ತಿಗೆದಾರ ಸಿದ್ದಪ್ಪ, ಎ. ಮಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
MUST WATCH
ಹೊಸ ಸೇರ್ಪಡೆ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.