ಸೋಂಕು ನಿಯಂತ್ರಣಕ್ಕೆ ಸರ್ಕಾರದ ಯತ್ನ
Team Udayavani, May 20, 2021, 9:21 PM IST
ಚಿಕ್ಕಮಗಳೂರು: ಕೋವಿಡ್ ಸೋಂಕು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರಂತರವಾಗಿ ಶ್ರಮಿಸುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು. ಬುಧವಾರ ನಗರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಉಸ್ತುವಾರಿ ಸಚಿವ ಎಸ್. ಅಂಗಾರ ಹಾಗೂ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಜತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಪ್ರದೇಶದಿಂದ ಜನರು ವಲಸೆ ಬಂದಿದ್ದರಿಂದ ಗ್ರಾಮೀಣ ಪ್ರದೇಶದಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ.
ವಲಸೆ ಬಂದವರು ಮನೆಯಲ್ಲೇ ಕ್ವಾರಂಟೈನ್ ಆಗದೇ ಹಳ್ಳಿಗಳಲ್ಲಿ ಓಡಾಟ ನಡೆಸಿದ್ದರಿಂದ ಸೋಂಕು ಹಬ್ಬುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಸೋಂಕು ನಿಯಂತ್ರಿಸಲು ಜಿಲ್ಲಾಡಳಿತ ಕಠಿಣ ನಿರ್ಣಯ ತಗೆದುಕೊಳ್ಳಲಿದೆ ಎಂದರು.
2019ರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅನೇಕ ನಿರ್ಧಾರಗಳನ್ನು ಮತ್ತು ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿದ್ದಾರೆ. ಇಡೀ ದೇಶದ ಪುಣೆಯಲ್ಲಿ ಮಾತ್ರ ವೈರಾಲಾಜಿಕಲ್ ಪ್ರಯೋಗಾಲಯವಿತ್ತು. ಸದ್ಯ ದೇಶದ ಎಲ್ಲಾ ಜಿಲ್ಲೆಗಳಲ್ಲೂ ಲ್ಯಾಬ್ ನಿರ್ಮಾಣ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಲ್ಯಾಬ್ ನಿರ್ಮಾಣ ಮಾಡಿದ್ದು, ದಿನಕ್ಕೆ ಎರಡೂವರೆ ಸಾವಿರಕ್ಕೂ ಹೆಚ್ಚು ಟೆಸ್ಟ್‌ಗಳನ್ನು ನಡೆಸಲಾಗುತ್ತಿದೆ ಎಂದರು.
ದೇಶದಲ್ಲಿ 26ಸಾವಿರ ವೆಂಟಿಲೇಟರ್ ವ್ಯವಸ್ಥೆ ಮಾತ್ರ ಒಳಗೊಂಡಿತ್ತು. ಇಂದು ದೇಶದಲ್ಲಿ 80ಸಾವಿರ ವೆಂಟಿಲೇಟರ್ ಹೊಂದಲಾಗಿದೆ. ರೆಮ್‌ಡಿಸಿವಿಯರ್ ಉತ್ಪಾದನೆ 23ಲಕ್ಷ ಇದ್ದದ್ದು, ಈಗ 1.05ಕೋಟಿಗೆ ಏರಿಕೆಯಾಗಿದೆ. ದೇಶದ 58 ಕಡೆಗಳಲ್ಲಿ ಉತ್ಪಾದನೆ ಮಾಡಲಾಗುತ್ತಿದೆ ಎಂದರು.
ಕೇಂದ್ರ ಸರ್ಕಾರ ರಾಜ್ಯಕ್ಕೆ 5.4ಕೋಟಿ ರೆಮ್‌ಡಿಸಿವಿಯರ್ ನೀಡಲು ತೀರ್ಮಾನಿಸಿದೆ. 5ಸಾವಿರ ಬೆಲೆಯನ್ನು 3,400ಕ್ಕೆ ತಗ್ಗಿಸಿದೆ. ಹಾಗೂ ಸುಬ್ಲೆವಿಯಾ ಮೆಡಿಸಿನ್ ರಾಜ್ಯಕ್ಕೆ 10ಸಾವಿರ ವೈಲ್‌ಗಳನ್ನು ನೀಡಿದೆ. ಕೋವಿಡ್ ಸೋಂಕಿಗೆ ನೀಡುವ ಔಷ ಧಿಯನ್ನು ಕೊರತೆಯಾಗದಂತೆ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಔಷಧ ಕೊರತೆಯಾಗದಂತೆ ನೋಡಿಕೊಳ್ಳಲಿದೆ ಎಂದರು. ಕೇಂದ್ರ ಸರ್ಕಾರ ರಾಜ್ಯಕ್ಕೆ 2 ಕೋಟಿ ವ್ಯಾಕ್ಸಿನ್ ಪೂರೈಕೆ ಮಾಡಿದೆ. ಜಿಲ್ಲೆಗೆ ಮೊದಲ ಮತ್ತು ಎರಡನೇ ಡೋಸ್ ಸೇರಿದಂತೆ 8.47ಲಕ್ಷ ಡೋಸ್ ನೀಡಿದೆ. ಜಿಲ್ಲೆಯಲ್ಲಿ ಮೊದಲ ಡೋಸ್ ಅನ್ನು 1.84,913 ಮಂದಿ ಪಡೆದುಕೊಂಡಿದ್ದಾರೆ. ಎರಡನೇ ಡೋಸ್ ಅನ್ನು 50,740 ಮಂದಿ ಪಡೆದುಕೊಂಡಿದ್ದಾರೆ ಎಂದರು.
ಹಂತ ಹಂತವಾಗಿ ವ್ಯಾಕ್ಸಿನ್ ಪೂರೈಕೆ ಮಾಡುವ ಭರವಸೆಯನ್ನು ಕೇಂದ್ರ ಸರ್ಕಾರ ನೀಡಿದೆ. ಗ್ರಾಮೀಣ ಪ್ರದೇಶದಲ್ಲಿ ಸೋಂಕು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಲಿದೆ. ಜಿಲ್ಲೆಯಲ್ಲಿ 401 ಸೋಂಕಿತರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 21,842ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 28,722ಮಂದಿಯಲ್ಲಿ ಸೋಂಕು ಪತ್ತೆ ಯಾಗಿದೆ. 202ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದರು.
3ಕೋಟಿ ಲಸಿಕೆ ಖರೀದಿಗೆ ರಾಜ್ಯ ಸರ್ಕಾರ ಮುಂದಾಗಿದೆ. 3ನೇ ಅಲೆ ನಿಯಂತ್ರಣಕ್ಕೆ ಮಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಯಾ ಜಿಲ್ಲಾ ಧಿಕಾರಿಗಳಿಗೆ ಹೆಚ್ಚಿನ ಸ್ವಾತಂತ್ರ ನೀಡಿದ್ದಾರೆ. ಜನರ ಜೀವ ಉಳಿಸುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೊದಲ ಆದ್ಯತೆಯಾಗಿದೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಮಾತನಾಡಿ, ಸರ್ಕಾರದ ನಿಯಮಗಳನ್ನು ಉಲ್ಲಂ ಘನೆ ಮಾಡುತ್ತಿರುವುದರಿಂದ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚಳವಾಗಲು ಕಾರಣವಾಗಿದೆ. ಈಗಾಗಲೇ ತಾಲೂಕು ಮತ್ತು ಗ್ರಾಮೀಣ ಮಟ್ಟದಲ್ಲಿ ಕೋವಿಡ್ ಸಭೆಗಳನ್ನು ನಡೆಸಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಸೋಂಕು ನಿಯಂತ್ರಿಸಲು ಜಿಲ್ಲಾಡಳಿತ ಕಠಿಣ ನಿರ್ಧಾರಗಳನ್ನು ಕೈಗೊಳ್ಳಲಿದೆ ಎಂದರು.
ಮೇ 20ರ ಬೆಳಿಗ್ಗೆಯಿಂದ ಮುಂದಿನ ಆದೇಶದವರೆಗೂ ಜಿಲ್ಲೆಯಲ್ಲಿ ವಾಹನ ಸಂಚಾರ ಮತ್ತು ಜನಸಂಚಾರಕ್ಕೆ ನಿರ್ಬಂಧ ವಿಧಿ ಸಲಾಗುವುದು ಎಂದ ಅವರು, ಅತ್ಯವಶ್ಯಕ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಈ ಸಂಬಂಧ ಜಿಲ್ಲಾಡಳಿತ ಆದೇಶ ಹೊರಡಿಸಲಿದೆ ಎಂದರು. ಜನರು ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲನೆ ಮಾಡಬೇಕು. ಮಾರ್ಗಸೂಚಿಗಳ ವಿರುದ್ಧದ ವರ್ತನೆಗೆ ಜನತೆ ಮುಂದಾಗ ಬಾರದು ಎಲ್ಲಾರೂ ಈ ಕೋವಿಡ್ ಮಹಾಮಾರಿಯನ್ನು ತೊಲಗಿಸಲು ಕೈಜೋಡಿಸಬೇಕೆಂದು ಮನವಿ ಮಾಡಿದರು.
ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಮಾತನಾಡಿ, ಕೋವಿಡ್ ಸೋಂಕು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿವೆ. ಸೋಂಕಿತರಿಗೆ ಚಿಕಿತ್ಸಾ ಸೌಲಭ್ಯ ಹೆಚ್ಚಿಸಿದೆ. ವಿರೋಧ ಪಕ್ಷದವರು ವಿರೋಧ ಮಾಡುವುದಕ್ಕಾಗಿ ವಿರೋಧ ಮಾಡಬಾರದು. ಇದು ಅತ್ಯಂತ ಸಂಕಷ್ಟದ ಸ್ಥಿತಿಯಾಗಿದೆ.
ಈ ಹೋರಾಟದಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದರು. ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್, ತರೀಕೆರೆ ಕ್ಷೇತ್ರದ ಶಾಸಕ ಡಿ.ಎಸ್. ಸುರೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ, ವರಸಿದ್ಧಿ ವೇಣುಗೋಪಾಲ್, ಎಚ್.ಡಿ.ತಮ್ಮಯ್ಯ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.