ಕಾಫಿನಾಡಲ್ಲಿ 28ರವರೆಗೆ ಸಂಪೂರ್ಣ ಲಾಕ್‌ಡೌನ್
Team Udayavani, May 24, 2021, 9:20 PM IST
ಚಿಕ್ಕಮಗಳೂರು: ಕೋವಿಡ್ ಸೋಂಕು ನಿಯಂತ್ರಿಸಲು ಜಿಲ್ಲಾಡಳಿತ ವಿ ಧಿಸಿದ್ದ ಕಠಿಣ ಲಾಕ್‌ಡೌನ್ ಮೇ 28ರ ಬೆಳಗ್ಗೆ 6 ಗಂಟೆಯವರೆಗೂ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ತಿಳಿಸಿದರು.
ಭಾನುವಾರ ನಗರದ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ ವಿ ಧಿಸಿದ್ದ ಕಠಿಣ ಲಾಕ್‌ಡೌನ್‌ನಿಂದ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ನಿಧಾನಗತಿಯಲ್ಲಿ ಇಳಿಕೆಯಾಗುತ್ತಿದೆ. ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.
ರಾಜ್ಯ ಸರ್ಕಾರ ಮೇ 24ರಿಂದ ಬೆಳಗ್ಗೆ 6ಗಂಟೆಯಿಂದ 10 ಗಂಟೆಯವರೆಗೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿ ಮುಂದಿನ 14ದಿನಗಳ ಕಾಲ ಕಠಿಣ ಕರ್ಫ್ಯೂ ವಿ ಧಿಸಿ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಜಿಲ್ಲಾಡಳಿತ ಮೇ 20ರಿಂದ ಮೇ 24ರವರೆಗೆ ವಿ ಧಿಸಿದ್ದ ಲಾಕ್ ಡೌನ್ ಮುಂದುವರಿಯಲಿದ್ದು, ಕೆಲವೊಂದು ಬದಲಾವಣೆ ತರಲಾಗಿದೆ ಎಂದು ತಿಳಿಸಿದರು.
ಈ ಹಿಂದೆ ಜಿಲ್ಲೆಗೆ ಸೀಮಿತಗೊಳಿಸಿ ಜಿಲ್ಲಾಡಳಿತ ವಿಧಿ ಸಿದ್ದ ನಿರ್ಬಂಧಗಳೇ ಶೇ.95ರಷ್ಟು ಅನ್ವಯವಾಗಲಿದೆ. ತಳ್ಳುಗಾಡಿ ಮತ್ತು ಗೂಡ್ಸ್‌ಗಳಲ್ಲಿ ಹಣ್ಣು – ತರಕಾರಿ ಮಾರಾಟಕ್ಕೆ ಸಮಯ ನಿಗದಿ ಮಾಡಿಲ್ಲ. ಮನೆ- ಮನೆಗೆ ತೆರಳಿ ಮಾರಾಟ ಮಾಡಬಹುದಾಗಿದೆ ಎಂದ ಅವರು, ದಿನಸಿ ಅಂಗಡಿ, ಸೂಪರ್ ಮಾರ್ಕೆಟ್ ಹೋಮ್ ಡೆಲಿವರಿ ನೀಡಲು ಬೆಳಿಗ್ಗೆ 6ಗಂಟೆಯಿಂದ 10ಗಂಟೆ ವರೆಗೂ ಅವಕಾಶ ನೀಡಲಾಗಿದೆ ಎಂದರು.
ಕೃಷಿ ಚಟುವಟಿಕೆಗೆ ಪೂರಕವಾದ ರಸಗೊಬ್ಬರ, ಬಿತ್ತನೆ ಬೀಜ ಸೇರಿದಂತೆ ಅಗತ್ಯ ವಸ್ತುಗಳನ್ನು ಹೋಮ್ ಡೆಲಿವರಿಗೆ ಅವಕಾಶ ನೀಡಲಾಗಿದೆ. ಸ್ಥಳದಲ್ಲೇ ಇರುವ ಕಾರ್ಮಿಕರಿಂದ ಕೃಷಿ ಚಟುವಟಿಕೆ ನಡೆಸಲು ಅವಕಾಶವಿದೆ. ಆದರೆ, ಕಾರ್ಮಿಕರು ಒಂದು ಕಡೆಯಿಂದ ಮತ್ತೂಂದು ಕಡೆಗೆ ಓಡಾಡಲು ಅವಕಾಶವಿಲ್ಲ ಎಂದು ಹೇಳಿದರು.
ಹೊಟೇಲ್, ರೆಸ್ಟೋರೆಂಟ್‌ಗಳು ತಿಂಡಿ- ತಿನಿಸುಗಳನ್ನು ಹೋಮ್ ಡೆಲಿವರಿ ನೀಡಲು ಅವಕಾಶ ಕಲ್ಪಿಸಲಾಗಿದೆ. ಮದುವೆ ಸಮಾರಂಭದಲ್ಲಿ 10 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಂತ್ಯ ಸಂಸ್ಕಾರದಲ್ಲಿ 5 ಜನರು ಮಾತ್ರ ಪಾಲ್ಗೊಳ್ಳಲು ಅವಕಾಶವಿದೆ. ಉಳಿದಂತಹ ಸಭೆ- ಸಮಾರಂಭಗಳನ್ನು ನಿಷೇ ಧಿಸಲಾಗಿದೆ. ಹೊರರಾಜ್ಯ ಮತ್ತು ಹೊರಜಿಲ್ಲೆಗಳಿಂದ ಬಂದ ವರನ್ನು 14 ದಿನಗಳ ಕಾಲ ಕ್ವಾರಂಟೈನ್‌ಗೆ ಒಳಪಡಿಸಲಾಗುವುದು ಎಂದು ತಿಳಿಸಿದರು. ತುರ್ತು ವೈದ್ಯಕೀಯ ಸೇವೆಗೆ ಮಾತ್ರ ವಾಹನಗಳ ಬಳಕೆಗೆ ಅವಕಾಶ ನೀಡಲಾಗಿದೆ. ಸಂಬಂಧಪಟ್ಟ ದಾಖಲೆಗಳನ್ನು ಕಡ್ಡಾಯವಾಗಿ ತೋರಿಸಬೇಕು. ತುರ್ತುಸೇವೆಗೆ ಎಲ್ಲಾ ಇಲಾಖೆ ಅ ಧಿಕಾರಿಗಳು ಮತ್ತು ಸಿಬ್ಬಂದಿಗೆ ವಾಹನ ಬಳಕೆಗೆ ಅವಕಾಶವಿದೆ. ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತೋರಿಸಬೇಕು ಎಂದರು.
ಅಂಗಡಿ- ಮುಂಗಟ್ಟುಗಳನ್ನು ವಾಣಿಜ್ಯೋದ್ಯಮ ಮತ್ತು ಕೈಗಾರಿಕೆ ಚಟುವಟಿಕೆಗಳನ್ನು ನಿಷೇ ಧಿಸಲಾಗಿದೆ. ಮೇ 28ರ ಬೆಳಗ್ಗೆ 6ಗಂಟೆಯವರೆಗೂ ಈ ನಿಯಮಗಳು ಜಾರಿಯಲ್ಲಿರಲಿದೆ ಎಂದ ಅವರು, ಜಿಲ್ಲಾಡಳಿತ ವಿಧಿ ಸಿರುವ ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ ದೊರಕಿದೆ. ಕೊರೊನಾ ಹರಡುವುದನ್ನು ತಪ್ಪಿಸಲು ಗ್ರಾಮೀಣ ಪ್ರದೇಶದ ಜನರು ತಮ್ಮ ಊರುಗಳಿಗೆ ಯಾರೂ ಬರಬಾರದೆಂದು ರಸ್ತೆಗಳಿಗೆ ಬೇಲಿ ಹಾಕುವ ಮೂಲಕ ಸೋಂಕು ನಿಯಂತ್ರಣಕ್ಕೆ ಸ್ಪಂ ದಿಸುತ್ತಿದ್ದಾರೆ ಎಂದು ತಿಳಿಸಿದರು.
ಸೋಂಕಿತರನ್ನು ಮನೆಗಳಲ್ಲಿ ಹೋಮ್ ಐಸೋಲೇಶನ್‌ಗೆ ಒಳಪಡಿಸುವುದರಿಂದ ಕುಟುಂಬದವರಿಗೆ ಸೋಂಕು ತಗುಲುತ್ತದೆ ಎಂಬ ಕಾರಣದಿಂದ ಆಯಾ ತಾಲೂಕು ಕೇಂದ್ರಗಳಲ್ಲಿ ಸಿಸಿಸಿ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳಲ್ಲಿ ಓರ್ವ ಡಾಕ್ಟರ್, ಓರ್ವ ನರ್ಸ್ ಹಾಗೂ ಮೂಲ ಸೌಲಭ್ಯಗಳನ್ನು ನೀಡಲಾಗಿದೆ. ಸೋಂಕಿತರ ಆರೋಗ್ಯ ಸುಧಾರಿಸುವರೆಗೂ ಸಿಸಿಸಿ ಕೇಂದ್ರದಲ್ಲಿ ಇರುವಂತೆ ಮನವಿ ಮಾಡಿದರು. ಸೋಂಕಿತರ ಮನೆಗಳಿಗೆ ಸ್ಟಿಕರ್ ಅಂಟಿಸಲಾಗುತ್ತಿದೆ.
ಸೋಂಕಿತರು ಮನೆಯಿಂದ ಹೊರ ಬಂದರೆ ಅಂತವರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ. ದೇಶ- ವಿದೇಶದಲ್ಲಿರುವ ಡಾಕ್ಟರ್ ಗಳ ತಂಡ ಸೇವೆಗೆ ಮುಂದೆ ಬಂದಿದ್ದು, ಅವರು ನಮ್ಮೊಂದಿಗೆ ಕೈ ಜೋಡಿಸಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಚ್. ಅಕ್ಷಯ್, ಜಿಪಂ ಸಿಇಒ ಎಸ್. ಪೂವಿತಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.