ಕೊರೊನಾ ತಡೆಗಾಗಿ ಆರೈಕೆ ಕೇಂದ್ರ ಆರಂಭ


Team Udayavani, May 27, 2021, 9:59 PM IST

27-16

ಚಿಕ್ಕಮಗಳೂರು: ಕೋವಿಡ್‌ ಸೋಂಕಿತರು ಕಳಸ ಪಟ್ಟಣದಿಂದ ಮೂಡಿಗೆರೆ ಮತ್ತು ಚಿಕ್ಕಮಗಳೂರು ಜಿಲ್ಲಾಕೇಂದ್ರಕ್ಕೆ ತೆರಳಿ ಚಿಕಿತ್ಸೆ ಪಡೆಯಲು ಸಮಸ್ಯೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಕಳಸ ಪಟ್ಟಣದ ಪ್ರಾಥಮಿಕ ಸಮುದಾಯ ಕೇಂದ್ರದಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ತೆರೆಯಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಅಂಗಾರ ತಿಳಿಸಿದರು.

ಬುಧವಾರ ಕಳಸ ಪಟ್ಟಣದ ಸಮುದಾಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೂತನವಾಗಿ ತೆರೆಯಲಾಗಿರುವ ಕೋವಿಡ್‌ ಕೇರ್‌ ಸೆಂಟರನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೋಗದ ಲಕ್ಷಣಗಳು ಕಂಡುಬರುತ್ತಿದ್ದಂತೆ ಸೋಂಕಿತರು ತಕ್ಷಣ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆಗೆ ಒಳಗಾಗಬೇಕು. ಸೋಂಕಿತರ ಚಿಕಿತ್ಸೆಗೆ ಅನುಕೂಲವಾಗುವಂತೆ ಕೇರ್‌ ಸೆಂಟರ್‌ ತೆರೆಯಲಾಗಿದ್ದು, ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಮನೆಯಲ್ಲೇ ಕ್ವಾರಂಟೈನ್‌ ಗೆ ಒಳಪಡಿಸುವುದರಿಂದ ಸೋಂಕು ಉಲ್ಬಣಗೊಳ್ಳುತ್ತಿದ್ದು, ಇದನ್ನು ತಡೆಗಟ್ಟುವ ಉದ್ದೇಶದಿಂದ ಕೋವಿಡ್‌ ಆರೈಕೆ ಕೇಂದ್ರ ಸಮೀಪದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಒಳಪಡುವ ವಿದ್ಯಾರ್ಥಿ ವಸತಿ ನಿಯಲದಲ್ಲಿ ಕ್ವಾರಂಟೈನ್‌ ಕೇಂದ್ರ ತೆರೆಯಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.

ಕೋವಿಡ್‌ಸೋಂಕು ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಸೋಂಕು ಹರಡುವುದನ್ನು ತಡೆಗಟ್ಟಲು ಗ್ರಾಮೀಣ ಭಾಗದ ಜನ ಅತ್ಯಂತ ಜಾಗೃತೆ ವಹಿಸಬೇಕು. ಸಾಮಾಜಿಕ ಅಂತರ, ಮಾಸ್ಕ್ಧರಿಸಬೇಕು ಮತ್ತು ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಹೇಳಿದರು.

ಕೋವಿಡ್‌ ಸೋಂಕಿತ 10 ಮಂದಿಗೆ ಅಗತ್ಯ ಮೆಡಿಸಿನ್‌ ಕಿಟ್‌ಗಳನ್ನು ಆಯುಷ್‌ ಇಲಾಖೆ ಯಿಂದ ನೀಡಲಾಗಿದೆ. ಹಾಗೂ ಡಿಟಿಡಿಪಿ ಯಿಂದ 5ಮಂದಿಗೆ ಅಗತ್ಯ ಆಹಾರದ ಕಿಟ್‌ ಗಳ ನ್ನು ನೀಡಲಾಗಿದ್ದು ಅಗತ್ಯ ಇದ್ದವರು ಮೆಡಿಸಿನ್‌ ಕಿಟ್‌ ಮತ್ತು ಆಹಾರದ ಕಿಟ್‌ಗಳನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಕಳಸವನ್ನು ಈಗಾಗಲೇ ತಾಲೂಕು ಕೇಂದ್ರವಾಗಿ ಸರ್ಕಾರ ಘೋಷಣೆ ಮಾಡಿದ್ದು, ತಾಲೂಕು ಕೇಂದ್ರಕ್ಕೆ ಬೇಕಾಗುವ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಶಾಸಕ ಎಂ.ಪಿ. ಕುಮಾರಸ್ವಾಮಿ, ವಿಧಾನಪರಿಷತ್‌ ಉಪಸಭಾಪತಿ ಎಂ.ಕೆ. ಪ್ರಾಣೇಶ್‌, ಜಿಲ್ಲಾ ಧಿಕಾರಿ ಕೆ.ಎನ್‌. ರಮೇಶ್‌ ಅವರೊಂದಿಗೆ ಚರ್ಚಿಸಿ ಶೀಘ್ರವೇ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ. ಕುಮಾರಸ್ವಾಮಿ ಮಾತನಾಡಿ, ಜಿಲ್ಲಾಡಳಿತ ಜಿಲ್ಲಾದ್ಯಂತ ಲಾಕ್‌ಡೌನ್‌ ವಿಧಿಸಿದ್ದು, ಸೋಂಕಿನ ಪ್ರಮಾಣ ನಿಧಾನಗತಿಯಲ್ಲಿ ಕಡಿಮೆಯಾಗುತ್ತಿದೆ. ಕೋವಿಡ್‌ಸೋಂಕು ನಿಯಂತ್ರಣಕ್ಕೆ ತರಲು ಜನ ಜಾಗೃತರಾಗಬೇಕು. ಮುಂಜಾಗೃತಾ ಕ್ರಮಗಳನ್ನು ಪಾಲಿಸಬೇಕು ಎಂದ ಅವರು, ಜಿಲ್ಲಾಡಳಿತ ದೊಂದಿಗೆ ಜನತೆ ಸಹಕರಿಸಿದಲ್ಲಿ ಕೋವಿಡ್‌ ಮುಕ್ತ ಜಿಲ್ಲೆಯಾಗಿಸಬಹುದು ಎಂದರು.

ವಿಧಾನ ಪರಿಷತ್‌ ಉಪಸಭಾಪತಿ ಎಂ.ಕೆ. ಪ್ರಾಣೇಶ್‌ ಮಾತನಾಡಿ, ಜಿಲ್ಲೆಯ ಮಲೆನಾಡು ಭಾಗದಲ್ಲಿ ಕೋವಿಡ್‌ ಸೋಂಕು ಹೆಚ್ಚಳವಾಗುತ್ತಿದ್ದು, ಸೋಂಕಿತರಿಗೆ ಸೂಕ್ತ ಸಮಯಕ್ಕೆ ತುರ್ತುಚಿಕಿತ್ಸೆ ಸೌಲಭ್ಯ ನೀಡುವ ಉದ್ದೇಶದಿಂದ ಈ ಕೋವಿಡ್‌ ಕೇರ್‌ ಸೆಂಟರ್‌ ತೆರೆಯಲಾಗಿದೆ ಎಂದರು.

ಇಲ್ಲಿ ಸೋಂಕಿತರಿಗೆ ಪ್ರಾಥಮಿಕ ಹಂತದ ಚಿಕಿತ್ಸೆ ಸಿಗಲಿದೆ. ಕೋವಿಡ್‌ಗೆ ಎಲ್ಲಾ ರೀತಿಯ ಚಿಕಿತ್ಸೆ ಇಲ್ಲೆ ಸಿಗುತ್ತದೆ ಎಂಬ ಮನೋಭಾವ ನಿಮ್ಮಲ್ಲಿ ಬೇಡ. ಸೋಂಕಿನ ಚಿಕಿತ್ಸೆಗೆ ಅನೇಕ ಸೌಲಭ್ಯಗಳ ಅಗತ್ಯತೆ ಇದೆ. ಡಾಕ್ಟರ್‌, ನರ್ಸ್‌ಗಳ ಸೌಲಭ್ಯದ ಅಗತ್ಯವಿದೆ. ಜನರು ಎಚ್ಚರವಹಿಸಬೇಕು ಎಂದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್‌.ಜೀವರಾಜ್‌, ಜಿಲ್ಲಾ ಧಿಕಾರಿ ಕೆ.ಎನ್‌. ರಮೇಶ್‌, ಉಪವಿಭಾಗಾಧಿಕಾರಿ ಡಾ|ಎಚ್‌. ಎಲ್‌. ನಾಗರಾಜ್‌, ಮೂಡಿಗೆರೆ ತಹಶೀಲ್ದಾರ್‌ ರಮೇಶ್‌, ಕೊಪ್ಪ ಉಪವಿಭಾಗ ಪೊಲೀಸ್‌ ಉಪ ಅಧೀಕ್ಷಕ ರಾಜು, ಮೂಡಿಗೆರೆ ತಾಲೂಕು ಕೋವಿಡ್‌ ನೋಡೆಲ್‌ ಅಧಿ ಕಾರಿ ಡಾ|ಮಧುಸೂಧನ್‌, ಕಳಸ ಸಮುದಾಯ ಕೇಂದ್ರದ ವೈದ್ಯಾ ಧಿಕಾರಿ ಅನುಗೌರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

Lokayukta

Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

Naxal-Meeting

Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್‌ ಮುಕ್ತವಾಯಿತೇ?

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

courts

Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.