ಲಾಕ್‌ಡೌನ್‌ ನಿರ್ಬಂಧದಲ್ಲಿ ಬದಲಾವಣೆ


Team Udayavani, Jun 1, 2021, 9:05 PM IST

1-16

 

ಚಿಕ್ಕಮಗಳೂರು: ಕೋವಿಡ್‌ ಸೋಂಕು ನಿಯಂತ್ರಿಸಲು ಜಿಲ್ಲಾಡಳಿತ ವಿಧಿ ಸಿದ್ದ ಲಾಕ್‌ಡೌನ್‌ ಜೂ.1ರ ಬೆಳಗ್ಗೆ 6ಗಂಟೆಗೆ ಮುಕ್ತಾಯವಾಗಲಿದ್ದು, ದಿನಸಿ ಅಂಗಡಿ, ಮೀನು ಮಾಂಸ, ಮದ್ಯ ಮಾರಾಟಕ್ಕೆ ಬೆಳಗ್ಗೆ 6ರಿಂದ 10ಗಂಟೆಯವರೆಗೂ ಅವಕಾಶ ನೀಡಿ ಪರಿಷ್ಕೃತ ಆದೇಶವನ್ನು ಜಿಲ್ಲಾಧಿಕಾರಿ ಕೆ.ಎನ್‌. ರಮೇಶ್‌ ಹೊರಡಿಸಿದ್ದಾರೆ.

ಸೋಮವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದಿನಸಿ ಅಂಗಡಿಗಳು, ಹಣ್ಣು, ತರಕಾರಿ, ಮೀನುಮಾಂಸದ ಅಂಗಡಿಗಳು ಬೆಳಗ್ಗೆ 6ಗಂಟೆಯಿಂದ 10 ಗಂಟೆವರೆಗೂ ವ್ಯಾಪಾರ- ವಹಿವಾಟು ನಡೆಸಲು ಅವಕಾಶ ನೀಡಲಾಗಿದ್ದು, ನಗರ ಪ್ರದೇಶದಿಂದ ಗ್ರಾಮೀಣ ಪ್ರದೇಶಕ್ಕೆ ಜನರ ಓಡಾಟವನ್ನು ನಿರ್ಬಂ ಧಿಸಲಾಗಿದೆ ಎಂದು ತಿಳಿಸಿದ್ದಾರೆ.

ತಳ್ಳುಗಾಡಿ ಮತ್ತು ಗೂಡ್ಸ್‌ ವಾಹನಗಳಲ್ಲಿ ಹಣ್ಣು ಮತ್ತು ತರಕಾರಿಯನ್ನು ಬೆಳಗ್ಗೆ 6ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಮನೆ- ಮನೆಗಳಿಗೆ ತೆರಳಿ ವ್ಯಾಪಾರ ನಡೆಸಲು ಅನುಮತಿ ನೀಡಲಾಗಿದೆ. ಜಿಲ್ಲೆಯಲ್ಲಿರುವ ಹಾಪ್‌ಕಾಮ್ಸ್‌ಗಳು ಹಣ್ಣು ಮತ್ತು ತರಕಾರಿಯನ್ನು ವಾಹನಗಳ ಮೂಲಕ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಾರ ನಡೆಸಲು ಅವಕಾಶ ನೀಡಿದ್ದು ಹಾಪ್‌ಕಾಮ್ಸ್‌ ಮಳಿಗೆಳಲ್ಲಿ ವ್ಯಾಪಾರ- ವಹಿವಾಟು ನಿಷೇ ಧಿಸಲಾಗಿದೆ ಎಂದಿದ್ದಾರೆ.

ಮಾಲ್‌ಗ‌ಳು ಹಾಗೂ ಸೂಪರ್‌ ಮಾರ್ಕೆಟ್‌ಗಳು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಹೋಮ್‌ ಡೆಲಿವರಿಗೆ ಅವಕಾಶ ನೀಡಲಾಗಿದೆ. ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿ ಸಲಾಗಿದೆ. ಪ್ರತ್ಯೇಕ ಮದ್ಯದಂಗಡಿಗಳು ಮತ್ತು ಓಟ್‌ಲೆಟ್‌ಗಳಲ್ಲಿ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೂ ತೆರೆಯಲು ಅವಕಾಶ ನೀಡಲಾಗಿದ್ದು, ಪಾರ್ಸಲ್‌ ಕೊಂಡೊಯ್ಯಲು ಮಾತ್ರ ಅವಕಾಶ ನೀಡಲಾಗಿದೆ.

ಕೃಷಿ ಚಟುವಟಿಕೆಗೆ ಸಂಬಂಧಿ ಸಿದಂತೆ ಸರಕು ವಾಹನಗಳು ಓಡಾಡಲು ಅವಕಾಶ ನೀಡಲಾಗಿದೆ. ಸ್ಥಳೀಯ ಕಾರ್ಮಿಕರನ್ನು ಬಳಸಿಕೊಂಡು ಕೃಷಿ ಚಟುವಟಿಕೆ ನಡೆಸಬಹುದಾಗಿದ್ದು, ತೋಟ ಕಾರ್ಮಿಕರಿಗೆ ಬೆಳಗ್ಗೆ ಕೆಲಸದ ಸ್ಥಳಕ್ಕೆ ತೆರಳಲು ಮತ್ತು ಸಂಜೆ ಮನೆಗೆ ವಾಪಸ್‌ ಬರಲು ಅನುಮತಿ ನೀಡಲಾಗಿದೆ. ಆದರೆ, ವಾಹನಗಳಲ್ಲಿ ಕಾರ್ಮಿಕರನ್ನು ಕರೆದೊಯ್ಯುವುದು ನಿರ್ಬಂ ಸಲಾಗಿದೆ. ಬ್ಯಾಂಕ್‌ಗಳು, ಇಶ್ಯೂರೆನ್ಸ್‌ ಕಚೇರಿಗಳು, ಗ್ರಾಮ ಒನ್‌ ಕೇಂದ್ರಗಳು, ಎಟಿಎಂ, ಪೋಸ್ಟ್‌ ಆಸ್‌ಗಳು ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೂ ತೆರೆಯಲು ಅನುಮತಿಸಲಾಗಿದ್ದು, ಕನಿಷ್ಠ ಪ್ರಮಾಣದ ಸಿಬ್ಬಂದಿಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಕಂಟೈನ್‌ಮೆಂಟ್‌ ವಲಯಗಳನ್ನು ಹೊರತುಪಡಿಸಿ ಆಯುಷ್‌, ಪಶು ವೈದ್ಯಕೀಯ ಆಸ್ಪತ್ರೆಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಎಲ್ಲಾ ಆಸ್ಪತ್ರೆಗಳು ನರ್ಸಿಂಗ್‌ ಹೋಮ್‌, ಪ್ರಯೋಗಾಲಯಗಳು, ಔಷಧಾಲಯಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಕೈಗಾರಿಕೆಗಳು, ಕೈಗಾರಿಕಾ ಸಂಸ್ಥೆಗಳು, ಅಗತ್ಯ ವಸ್ತುಗಳ ಉತ್ಪಾದನಾ ಘಟಕಗಳು ಅಗತ್ಯವಿ ರುವ ಸಿಬ್ಬಂದಿ ಗಳನ್ನು ಬಳಸಿಕೊಂಡು ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ. ಸರಕು ಸಾಗಣೆಗೆ ಅನುಮತಿ ನೀಡಿದ್ದು, ಕಾರ್ಯನಿರ್ವಹಿಸುವ ಸ್ಥಳಕ್ಕೆ ತೆರಳುವಾಗ ಮತ್ತು ವಾಪಸ್‌ ಬರುವಾಗ ತಪಾಸಣೆ ಸಂದರ್ಭದಲ್ಲಿ ಗುರುತಿನ ಚೀಟಿಯನ್ನು ಪ್ರದರ್ಶಿಸುವಂತೆ ತಿಳಿಸಲಾಗಿದೆ.

ಮದುವೆ ಕಾರ್ಯಕ್ರಮದಲ್ಲಿ 10ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ ಎಲ್ಲಾ ಸಭೆ ಸಮಾರಂಭಗಳನ್ನು ಜೂ.7ರವರೆಗೂ ನಿರ್ಬಂ ಧಿಸಲಾಗಿದೆ. ಕಟ್ಟಡ ಕಾರ್ಮಿಕರು ಸ್ಥಳೀಯವಾಗಿ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ಕಡೆಯಿಂದ ಮತ್ತೂಂದು ಕಡೆಗೆ ತೆರಳುವುದನ್ನು ನಿರ್ಬಂಧಿ  ಸಲಾಗಿದೆ. ಹೊಟೇಲ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ಹೋಮ್‌ ಡೆಲಿವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಅಂತ್ಯಕ್ರಿಯೆಯಲ್ಲಿ 5 ಜನರು ಪಾಲ್ಗೊಳ್ಳಲು ಮಾತ್ರ ಅವಕಾಶ ನೀಡಲಾಗಿದೆ. ಜಿಲ್ಲೆಗೆ ಹೊರ ಜಿಲ್ಲೆಯಿಂದ ಆಗಮಿಸುವರನ್ನು 14ದಿನಗಳವರೆಗೂ ಕ್ವಾರಂಟೈನ್‌ ಗೆ ಒಳಪಡಿಸಲಾಗುವುದು. ತುರ್ತು ಸಂದರ್ಭದಲ್ಲಿ ಮಾತ್ರ ವಾಹನ ಬಳಕೆಗೆ ಅವಕಾಶ ನೀಡಲಾಗಿದ್ದು ದಾಖಲೆಗಳನ್ನು ಪ್ರದರ್ಶಿಸುವಂತೆ ಸೂಚಿಸಲಾಗಿದೆ.

ಟಾಪ್ ನ್ಯೂಸ್

ss

BBK11: ಬಿಗ್ ಬಾಸ್ ಮನೆಯಲ್ಲಿ ಮದುವೆ ಸಂಭ್ರಮ: ಭಾವುಕರಾದ ಸ್ಪರ್ಧಿಗಳು.!

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

19-naxalite

Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ

17-2

ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ss

BBK11: ಬಿಗ್ ಬಾಸ್ ಮನೆಯಲ್ಲಿ ಮದುವೆ ಸಂಭ್ರಮ: ಭಾವುಕರಾದ ಸ್ಪರ್ಧಿಗಳು.!

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Suilla

Bantwala: ಬೋಳಂಗಡಿ; ಅಡಿಕೆ ಕೀಳುತ್ತಿದ್ದ ಕಾರ್ಮಿಕ ಮರದಿಂದ ಬಿದ್ದು ಸಾವು

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

ud

Puttur: ಮನೆ ಅಂಗಲದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.