ಮಹಿಳಾ ದೌರ್ಜನ್ಯ ನಿಲ್ಲದಿರುವುದು ಆತಂಕಕಾರಿ
ಸಪಪೂ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾನೂನು ಅರಿವು- ನೆರವು ಕಾರ್ಯಕ್ರಮವನ್ನು ಜಿಪಂ ಸದಸ್ಯೆ ಶಿಲ್ಪಾ ರವಿ ಉದ್ಘಾಟಿಸಿದರು.
Team Udayavani, Jan 29, 2021, 6:13 PM IST
ಶೃಂಗೇರಿ: ಮಹಿಳೆಯರ ರಕ್ಷಣೆಗೆ ಹಲವಾರು ಕಾನೂನುಗಳಿದ್ದು, ಅದರ ಅರಿವನ್ನು ಪ್ರತಿಯೊಬ್ಬ ಮಹಿಳೆಯೂ ಅರಿತಿರಬೇಕು ಎಂದು ಜಿಪಂ
ಸದಸ್ಯೆ ಶಿಲ್ಪಾ ರವಿ ಹೇಳಿದರು.
ಪಟ್ಟಣದ ಸರಕಾರಿ ಪಪೂ ಕಾಲೇಜಿನ ಪ್ರೌಢಶಾಲಾ ಸಭಾಂಗಣದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ
ಕಾನೂನು ಅರಿವು- ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಲು ಹೊಸ ಕಾಯ್ದೆಗಳನ್ನು ರೂಪಿಸಲಾಗುತ್ತಿದ್ದರೂ, ದೌರ್ಜನ್ಯ ಇನ್ನೂ ಮುಂದುವರಿಯುತ್ತಿರುವುದು ಆತಂಕ ಕಾರಿಯಾಗಿದೆ.
ಪ್ರತಿಯೊಬ್ಬರೂ ಕಾನೂನಿನ ಕನಿಷ್ಟ ಜ್ಞಾನ ಹೊಂದಿರುವುದು ಅತ್ಯಗತ್ಯ ಎಂದರು. ಭ್ರೂಣ ಹತ್ಯೆ ನಿಷೇದ ಕಾಯ್ದೆ ಬಗ್ಗೆ ಉಪನ್ಯಾಸ ನೀಡಿದ ವಕೀಲ ಎಸ್.ಜಿ. ಶಶಿಭೂಷಣ್, ಇಂದಿನ ಸಮಾಜದಲ್ಲಿ ಹೆಣ್ಣು- ಗಂಡು ಎಂಬ ಬೇಧ ಭಾವವಿಲ್ಲ. ಹೆಣ್ಣು ಮಕ್ಕಳು ಈಗ ಎಲ್ಲಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಪುರುಷರಿಗೆ ಸರಿಸಮನಾಗಿದ್ದಾರೆ. ಆದರೆ ಈಗಲೂ ಗಂಡು ಮಕ್ಕಳೇ ಬೇಕೆಂಬ ಹಠದಿಂದ ಸಮಾಜದಲ್ಲಿ
ಅಸಮತೋಲನ ಉಂಟಾಗುತ್ತಿದೆ ಎಂದರು.
ವಕೀಲೆ ರಾಜೇಶ್ವರಿ ಹೆಗ್ಡೆ ಹೆಣ್ಣು ಮಕ್ಕಳ ರಕ್ಷಣಾ ಕಾಯ್ದೆ ಬಗ್ಗೆ ಮಾತನಾಡಿದರು. ತಾಪಂ ಅಧ್ಯಕ್ಷೆ ಜಯಶೀಲ, ಜಿಪಂ ಸದಸ್ಯ ಬಿ. ಶಿವಶಂಕರ್, ಸಿಡಿಪಿಒ ಎನ್.ಜಿ. ರಾಘವೇಂದ್ರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಾಲೋಚಕಿ ರೇಣುಕಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.