ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ 369 ಕೋಟಿ ರೂ. ಮಂಜೂರು
Team Udayavani, Jun 2, 2021, 9:47 PM IST
ಚಿಕ್ಕಮಗಳೂರು: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ 2021-22ನೇ ಆರ್ಥಿಕ ವರ್ಷದಲ್ಲಿ 369 ಕೋಟಿ ರೂ. ಅನುದಾನವನ್ನು ಕೇಂದ್ರ ಸರ್ಕಾರ ಮಂಜೂರು ಮಾಡಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಷ್ಟ್ರೀಯ ಹೆದ್ದಾರಿ 169ರ ಹೆಬ್ರಿ ಕಾರ್ಕಳ ರಸ್ತೆ, ಕರಾವಳಿ ಜಂಕ್ಷನ್ ಮಲ್ಪೆ ಸಂಪರ್ಕಿಸುವ ರಸ್ತೆ ಚತುಷ್ಪಥೀಕರಣಕ್ಕೆ ಭೂಸ್ವಾ ಧೀನ ಮತ್ತು 29.1 ಕಿ.ಮೀ. ರಸ್ತೆ ನಿರ್ಮಾಣಕ್ಕೆ 350 ಕೋಟಿ ರೂ. ಭೂ ಸಾರಿಗೆ ಸಚಿವಾಲಯ ಮಂಜೂರು ಮಾಡಿದ್ದು ಕಾಮಗಾರಿಗೆ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 169ರ ಸೀತಾನದಿಯಿಂದ ಉಂಟಾಗುವ ತೊಂದರೆಯನ್ನು ತಪ್ಪಿಸಲು ತಡೆಗೋಡೆ ನಿರ್ಮಾಣ, ರಸ್ತೆ ಎತ್ತರೀಕರಣ, ನೆಮ್ಮಾರು ಬಳಿ ರಸ್ತೆ ಎತ್ತರೀಕರಣ ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿಗೆ 19 ಕೋಟಿ ರೂ. ಅನುಮೋದನೆ ದೊರೆತಿದೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲೂ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಆದ್ಯತೆ ನೀಡಿ ಅನುದಾನ ಬಿಡುಗಡೆ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.